ಜಿಪಂ ಸಿಇಒಗಳಿಗೆ ಸಿಎಂ ಕಣ್ಗಾವಲು; ಬಜೆಟ್ ಯೋಜನೆಗಳ ಬಗ್ಗೆ ಮುಂದುವರಿದ ಪರಾಮರ್ಶೆ
Team Udayavani, May 10, 2022, 7:15 AM IST
ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ, ಭ್ರಷ್ಟಾಚಾರ ಸಹಿಸುವುದಿಲ್ಲ. ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿ ಇದ್ದೀರಿ. ಎಲ್ಲರನ್ನೂ ಗಮನಿಸುತ್ತಿದ್ದೇನೆ. ಕರ್ತವ್ಯ ವೈಫಲ್ಯಕ್ಕೆ ಸೂಕ್ತ ಕ್ರಮ ಕೈಗೊಳ್ಳ ಬೇಕಾಗುತ್ತದೆ…
-ಹೀಗೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಜಿ.ಪಂ.ಗಳ ಸಿಇಒಗಳ ಜತೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದ ಸಂದರ್ಭದಲ್ಲಿ ಈ ಎಚ್ಚರಿಕೆ ನೀಡಿದ್ದಾರೆ.
ಯೋಜನೆಗಳು ಸಕಾಲದಲ್ಲಿ ಜಾರಿಯಾಗಬೇಕು. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆ ನೀಡಿ. ನಾನು ನಿಮ್ಮ ಜತೆ ಇದ್ದೇನೆ. ಶಾಲಾ ಮಕ್ಕಳು, ಮಹಿಳಾ ಸಶಕ್ತೀಕರಣ -ಇವೆಲ್ಲ ಮುಖ್ಯ. ಜನಹಿತದ ನಿರ್ಧಾರಗಳನ್ನು ಧೈರ್ಯವಾಗಿ ತೆಗೆದುಕೊಳ್ಳಿ. ಸಾರ್ವಜನಿಕರ ಅರ್ಜಿಗಳಿಗೆ ಪರಿಹಾರ ಒದಗಿಸಿ. ನಿಮ್ಮ ಕೆಲಸದಲ್ಲಿ ನಿಖರತೆ ಇರಲಿ ಎಂದು ತಾಕೀತು ಮಾಡಿದರು.
ಹದ್ದುಬಸ್ತಿನಲ್ಲಿಡಿ
ಸಿಇಒಗಳು ತಮ್ಮ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಪಿಡಿಒಗಳನ್ನು ಶಿಸ್ತಿನಲ್ಲಿರಿಸಬೇಕು. ಬಜೆಟ್‌ನ
ಬಹುತೇಕ ಕಾರ್ಯಕ್ರಮಗಳ ಅನುಷ್ಠಾನ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದರು.
ಆಯಾ ವರ್ಷ ಕ್ರಿಯಾ ಯೋಜನೆಗಳು ಅದೇ ವರ್ಷದಲ್ಲಿ ಅನುಷ್ಠಾನವಾಗುವುದಿಲ್ಲ. ಆದರೆ ಕಾಲಮಿತಿಯೊಳಗೆ ಅನುಷ್ಠಾನವಾಗ ಬೇಕೆಂಬ ಧ್ಯೇಯವಿರಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯ ಯೋಜನೆಗಳೇ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಗೆ ಕಾರಣ. ಇವುಗಳ ಶೀಘ್ರ ಅನುಷ್ಠಾನಕ್ಕೆ ಗಮನಹರಿಸಿ ಎಂದರು.
ಇದೇ ಸಂದರ್ಭದಲ್ಲಿ ಕೆಲವು ತೀರ್ಮಾನ ಪ್ರಕಟಿಸಿದ ಮುಖ್ಯಮಂತ್ರಿಯವರು, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯಡಿ 100 ವಸತಿ ನಿಲಯಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 50 ವಸತಿ ನಿಲಯಗಳ ನಿರ್ಮಾಣ ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದರು.
ಅಮೃತ ಗ್ರಾ.ಪಂ. ಯೋಜನೆಯಡಿ ಜೂ. 30ರೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಘನತ್ಯಾಜ್ಯ ನಿರ್ವಹಣೆಯಿಂದ ಹಿಡಿದು ಗ್ರಂಥಾಲಯದ ವರೆಗೆ ನಗರ ಪ್ರದೇಶದ ಎಲ್ಲ ಸೌಲಭ್ಯಗಳು ಯೋಜನೆಯಡಿ ಬರುವ 750 ಗ್ರಾಮಗಳಲ್ಲಿ ದೊರೆಯಲಿವೆ ಎಂದರು.
ಬದಲಾವಣೆ
ಎಲ್ಲರಿಂದಲೂ ಆಗಬೇಕು. ಜನರಿಗೆ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.