ಸಿಎಂ ಹುದ್ದೆ ಕೊಟ್ಟರೆ ಸಮರ್ಥ ನಿರ್ವಹಣೆ : ಯತ್ನಾಳ್
Team Udayavani, Dec 21, 2021, 6:20 AM IST
ಬೆಳಗಾವಿ: ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಅವಕಾಶ ನೀಡಿದರೆ ಸಮರ್ಥವಾಗಿ ನಿಭಾಯಿಸಿ ತೋರಿಸುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ರವಿವಾರ ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ ಭಾವನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ನಾವು ಹೇಳಿದ ಭವಿಷ್ಯ ಸುಳ್ಳಾಗಿಲ್ಲ. ಅಧಿಕಾರ ಶಾಶ್ವತ ಅಲ್ಲ ಅಂತ ಅವರು ಹೇಳಿದ್ದಾರೆ. ಅದು ಸಹಜವಾಗಿ ಬಂದ ಮಾತು. ಬದಲಾವಣೆ ಅನ್ನೋದು ಸಹಜ. ಪ್ರಕ್ರಿಯೆಗಳು ನಡೆಯುತ್ತಲೇ ಇರುತ್ತವೆ ಎಂದರು.
ಪಕ್ಷ ಸಿಎಂ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡಿ ತೋರಿಸುತ್ತೇನೆ. ಕೆಲಸಕ್ಕೆ ಬಾರದವರನ್ನ ಸಿಎಂ ಮಾಡಿದರೆ ಏನೂ ಮಾಡಲಾಗುವುದಿಲ್ಲ. ಪ್ರಾಮಾಣಿಕ ನಿರ್ಣಯ ತೆಗೆದುಕೊಳ್ಳುವವರಾಗಬೇಕು. ಬಾಲಂಗೋಚಿಗಳಿಗೆ ಕೊಟ್ಟರೆ ಕಷ್ಟ ಎಂದು ಹೇಳಿದರು.
ಇದನ್ನೂ ಓದಿ:ಹಿಂದಿ ವಿರೋಧಿಸುವವರು, ಉರ್ದು ಬರೆದರೆ ಪ್ರಶ್ನಿಸಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಈಗ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಉದ್ಭವ ಆಗಲ್ಲ. ಯಾರೂ ಕನಸು ಕಾಣುವುದು ಬೇಡ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮುಖ್ಯಮಂತ್ರಿ ಬದಲಾವಣೆ ಅನ್ನುವುದು ಗಾಳಿ ಸುದ್ದಿ.
-ಆರ್.ಅಶೋಕ್, ಕಂದಾಯ ಸಚಿವ
ಜೀವನವೇ ಶಾಶ್ವತವಲ್ಲ, ಕುರ್ಚಿ ಯಾವಾಗ ಶಾಶ್ವತ ಹೇಳಿ ಎಂದಿದ್ದಾರೆ. ಇದೆಲ್ಲ ನೋಡಿದರೆ ಬಸವ ಕೃಪಾದವರು ಬಸವ ಕೃಪಾದಲ್ಲೇ ಇರಿ, ಕೇಶವ ಕೃಪಾ ನಂಬಿ ಹೋದರೆ ಅಲ್ಲೂ ಇಲ್ಲ, ಇಲ್ಲೂ ಇಲ್ಲ. ನಾ ಘರ್‌ಕಾ, ನಾ ಘಾಟ್ ಕಾ. ಬಸ್ ಸ್ಟಾಂಡ್ ಕಾ ಆಗುತ್ತದೆ.
-ಸಿ.ಎಂ.ಇಬ್ರಾಹಿಂ, ಕಾಂಗ್ರೆಸ್ ಶಾಸಕ
ಮುಖ್ಯಮಂತ್ರಿಯವರು ತಮ್ಮ ಜಿಲ್ಲೆಯಲ್ಲಿ ಮಾತನಾಡುವಾಗ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಕ್ಷೇತ್ರದಲ್ಲಿ ಕುಟುಂಬದ ಸದಸ್ಯ ಅಂತ ಹೇಳಿದ್ದಾರೆ. ಇದಕ್ಕೆ ರಾಜಕೀಯ ಸ್ವರೂಪ ಕೊಡುವುದು ಅನಗತ್ಯ.
-ಕೋಟ ಶ್ರೀನಿವಾಸ ಪೂಜಾರಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.