ಮೇಕೆದಾಟು ಯೋಜನೆ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ ಒತ್ತಾಯ
Team Udayavani, Aug 13, 2021, 8:30 PM IST
ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ ಎಂದು ಪ್ರಶ್ನಿಸಿದ್ದಾರೆ.
ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವುನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿ ಸಾಧ್ಯತೆ : ಸಚಿವ ಅಶೋಕ
ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ ಎಂದು ತಿಳಿಸಿದ್ದಾರೆ.
ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.