Coastal Politics; ಹೀಗೂ ಉಂಟು- ಸೋತರೂ ಅದೃಷ್ಟ ಕೈ ಹಿಡಿಯಿತು
ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನ ಪರಿಷತ್ ಚುನಾವಣೆ ಅವರ ಕೈ ಹಿಡಿಯಿತು.
Team Udayavani, Apr 17, 2023, 1:26 PM IST
ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಯೂ ಗೆಲುವು ಸಿಗದಿದ್ದರೂ ಅದೃಷ್ಟ ಚೆನ್ನಾಗಿದ್ದರೆ ಮೇಲ್ಮನೆ ಸದಸ್ಯರಾಗಿ ಸಚಿವರು ಆಗಬಹುದು. ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ಇದ್ದ ಸಂದರ್ಭದಲ್ಲಿ ಬಿಜೆಪಿಯೂ ಈ ಕ್ಷೇತ್ರದಲ್ಲಿ ಜಯ ಸಾಧಿಸಿರುವ ದಾಖಲೆಯಿದೆ.
ಆದರೆ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧೆಗೆ ಇಳಿದಿದ್ದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೆಲುವು ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. 1999ರಲ್ಲಿ ಸ್ಪರ್ಧೆ ಮಾಡಿ 24,043 ಮತ ಪಡೆದಿದ್ದರೆ 2004ರಲ್ಲಿ 25,590 ಮತ ಪಡೆದಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನ ಪರಿಷತ್ ಚುನಾವಣೆ ಅವರ ಕೈ ಹಿಡಿಯಿತು.
ಉಡುಪಿ-ದ.ಕ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದು ವಿಧಾನ ಪರಿಷತ್ ಪ್ರವೇಶ ಮಾಡಿದರು. ಅನಂತರ ಬಿಜೆಪಿ ಸರಕಾರದಲ್ಲಿ ಸಚಿವರಾದರು. ವಿಧಾನ ಪರಿಷತ್ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಈಗ ಸಚಿವರೂ ಆಗಿದ್ದು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕರೂ ಆಗಿದ್ದಾರೆ. ಈ ರೀತಿಯ ಅವಕಾಶ ತುಂಬಾ ರಾಜಕಾರಣಗಳಿಗೆ ಸಿಗುವುದಿಲ್ಲ.
ಕುಂದಾಪುರದಿಂದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದ ಪ್ರತಾಪ್ ಚಂದ್ರ ಶೆಟ್ಟಿಯವರು ಸಚಿವರಾಗಿಲ್ಲ. ಬದಲಾಗಿ ವಿಧಾನಪರಿಷತ್ ಪ್ರವೇಶಿಸಿ, ಸಭಾಪತಿಯಾಗಿದ್ದರು. ಈ ರೀತಿಯ ಅವಕಾಶ, ಅದೃಷ್ಟ ರಾಜಕಾರಣಿಗಳು ಕರಾವಳಿಯಲ್ಲಿ ತೀರ ವಿರಳ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.