ಜಾತಿವಾರು ಮಾಹಿತಿ ಸಂಗ್ರಹ; ಎಲ್ಲ ಇಲಾಖೆಗಳ ಸಿಬಂದಿಯ ಜಾತಿವಾರು ವಿವರ
Team Udayavani, Oct 2, 2021, 6:20 AM IST
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಿಂದುಳಿದ ಜಾತಿಯವರು ಎಷ್ಟು ಪ್ರಮಾಣದಲ್ಲಿದ್ದಾರೆ ಎಂಬುದರ ಅಧಿಕೃತ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆರಂಭಿಸಿದೆ.
ಶಿಕ್ಷಣ ಇಲಾಖೆ ಸಹಿತವಾಗಿ ರಾಜ್ಯದ ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರ ಜಾತಿವಾರು ಮತ್ತು ಪ್ರವರ್ಗವಾರು ಮಾಹಿತಿಯನ್ನು ಒದಗಿಸುವಂತೆ ಆಯೋಗದಿಂದ ಎಲ್ಲ ಇಲಾಖೆಗೂ ಪತ್ರ ಬರೆಯಲಾಗಿದೆ. ಅದರಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗಗಳಿಗೆ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬಂದಿಯ ಮಾಹಿತಿ ಸಂಗ್ರಹಕ್ಕೆ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ.
ಅ. 15ರ ಗಡುವು
ಸರಕಾರಿ ಪದವಿ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳು ಹಾಗೂ ಅಧಿಕಾರಿ, ಬೋಧಕ, ಬೋಧಕೇತರ ಸಿಬಂದಿ ವರ್ಗದ ಜಾತಿವಾರು ಹಾಗೂ ಪ್ರವರ್ಗವಾರು ಮಾಹಿತಿ ಯನ್ನು ನಿರ್ದಿಷ್ಟ ನಮೂನೆಯಲ್ಲಿ ಅ. 15ರೊಳಗೆ ಸಲ್ಲಿಸ ಬೇಕು. ವಿದ್ಯಾರ್ಥಿಗಳಿಗೆ ಸಂಬಂಧಿಸಿ 2011-12ನೇ ಸಾಲಿನಿಂದ ಈವರೆಗಿನ ಮಾಹಿತಿ ಲಭ್ಯವಿಲ್ಲದೇ ಇರುವುದಿಂದ ಕಾಲೇಜುಗಳಲ್ಲಿ ಲಭ್ಯವಿರುವ ಅಂಕಿ-ಅಂಶಗಳಿಗೆ ಅನುಗುಣ ವಾಗಿ ನಿರ್ದಿಷ್ಟ ಮಾಹಿತಿ ಒದಗಿಸುವಂತೆ ನಿರ್ದೇಶಿಸಿದೆ.
ಸಂವಿಧಾನ ಹಾಗೂ ನ್ಯಾಯಾಲಯಗಳ ಆಶಯದಂತೆ ಎಲ್ಲ ಇಲಾಖೆಗಳಿಂದ ಈ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಆಯೋಗದ ಮೂಲಗಳು ಹೇಳಿವೆ.
ಇದನ್ನೂ ಓದಿ:ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್‌ಗಳ ಜಯ
ರಾಜ್ಯದ ಯಾವ ಯಾವ ಇಲಾಖೆಯಲ್ಲಿ ಯಾವ ಜಾತಿಯವರು ಎಷ್ಟು ಪ್ರಮಾಣದಲ್ಲಿದ್ದಾರೆ ಎಂಬ ನಿಖರ ಮಾಹಿತಿ ಪಡೆಯುವ ಪ್ರಕ್ರಿಯೆ ಆರಂಭಿಸಿದ್ದೇವೆ. ಮುಂದೆ ಹೇಗೆ ಇದನ್ನು ಬಳಕೆ ಮಾಡಬೇಕು ಎಂಬುದನ್ನು ಯೋಚಿಸಲಿದ್ದೇವೆ.
– ಜಯಪ್ರಕಾಶ ಹೆಗ್ಡೆ, ಅಧ್ಯಕ್ಷ , ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.