ಸರಕಾರಿ ವೈದ್ಯನ ವಿರುದ್ಧ ಲೋಕಾಯುಕ್ತಕ್ಕೆ ದೂರು
Team Udayavani, Mar 6, 2024, 1:06 AM IST
ಕುಂದಾಪುರ: ಮಾಸ್ಕ್ ಧರಿಸಲಿಲ್ಲ ಎಂದು ಉರಗ ರಕ್ಷಕರೊಬ್ಬರ ಮೇಲೆ ರೇಗಾಡಿದ ಪ್ರಕರಣಕ್ಕೆ ಸರಕಾರಿ ವೈದ್ಯರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಉಪ್ಪುಂದ ಅಂಬಾಗಿಲು ಜನತಾ ಕಾಲನಿಯ ಥಾಮಸ್ ರಾಡ್ರಿಗಸ್ ಅವರು ಬಿಜೂರು ಗ್ರಾಮದ ಬುಡುR ದ್ಯಾವಪ್ಪ ಮೊಗವೀರ ಅವರ ಮನೆಗೆ ಉರಗ ರಕ್ಷಣೆಗೆ ಹೋಗಿದ್ದಾಗ ನಾಗರ ಹಾವು ಕಡಿದಿದ್ದು, ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಬಂದ ವೈದ್ಯರೊಬ್ಬರು ಥಾಮಸ್ ಅವರು ಮಾಸ್ಕ್ ಧರಿಸಿಲ್ಲ ಎಂಬ ನೆವದಿಂದ ಜಗಳ ಮಾಡಿದ್ದಲ್ಲದೇ, ಸಿಸಿ ಕೆಮರಾದಲ್ಲಿ ಸೆರೆಯಾಗದಂತೆ ಬೆಡ್ ಸ್ಥಳಾಂತರ ಮಾಡಿ ಅವಾಚ್ಯವಾಗಿ ಮಾತನಾಡಿ ಚಿಕಿತ್ಸೆ ನೀಡಲು ನಿರಾಕರಿಸಿದರು ಎನ್ನಲಾಗಿದೆ.
ಬಳಿಕ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಈ ವಿಚಾರವನ್ನು ಎಸ್‌ಪಿ ಅವರ ಗಮನಕ್ಕೆ ತಂದರು. ಆದರೆ ಕುಂದಾಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಲಿಲ್ಲ ಎಂದು ಥಾಮಸ್ ಅವರು ಈ ಘಟನೆ ಬಗ್ಗೆ ವೈದ್ಯರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಘಟನೆ ಕುರಿತು ತನಿಖೆಗೆ ಸಮಿತಿ ರಚಿಸಿದ್ದು, ಇಬ್ಬರು ವೈದ್ಯರನ್ನು, ಕಚೇರಿ ಅಧೀಕ್ಷಕರನ್ನು ಸಮಿತಿಯಲ್ಲಿ ನೇಮಕ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.