ಉದ್ಯಮಿಗಳು – ಕಾರ್ಮಿಕರಲ್ಲಿ ಗೊಂದಲ

Team Udayavani, Apr 28, 2020, 3:25 PM IST

ಉದ್ಯಮಿಗಳು – ಕಾರ್ಮಿಕರಲ್ಲಿ ಗೊಂದಲ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್‌ ನಡುವೆಯೇ ರಾಜ್ಯ ಸರ್ಕಾರ ನಿರ್ಮಾಣ ಕಾಮಗಾರಿಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ಮತ್ತೂಂದೆಡೆ ಅಲ್ಲಿ
ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡಿದೆ. ಇಂತಹ ವ್ಯತಿರಿಕ್ತ ಆದೇಶಗಳು ಉದ್ದಿಮೆಗಳು ಮತ್ತು ಕಾರ್ಮಿಕರನ್ನು ಗೊಂದಲಕ್ಕೀಡು ಮಾಡಿವೆ. ಕೇಂದ್ರ ಗೃಹ ಇಲಾಖೆ ನಿರ್ದೇಶನದಂತೆ ರಾಜ್ಯ ಸರ್ಕಾರ ನಗರದ ಹೊರ ವಲಯದಲ್ಲಿರುವ ನಿರ್ಮಾಣ ಹಂತದ ಕಾಮಗಾರಿ ಆರಂಭಿಸುವಂತೆ ರಿಯಲ್‌ ಎಸ್ಟೇಟ್‌ ಸಂಸ್ಥೆಗಳಿಗೆ ಅನುಮತಿ ನೀಡಿದೆ. ಆದರೆ, ಕಾರ್ಮಿಕರ ಅಗತ್ಯತೆ ಅಥವಾ ಬೇರೆ ಸ್ಥಳದಿಂದ ನಿರ್ಮಾಣ ಕಾಮಗಾರಿ ನಡೆಯುವ ಸ್ಥಳಕ್ಕೆ ತೆರಳಲು ಅಗತ್ಯವಿರುವ ಪಾಸ್‌ ನೀಡುವ ಬಗ್ಗೆಯಾಗಲಿ ಅಥವಾ ಮುಕ್ತವಾಗಿ ಸಂಚರಿಸಲು ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ಪರಿಣಾಮ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಕಾಮಗಾರಿ ಆರಂಭಿಸಲು ಹಾಗೂ ಅದಕ್ಕೆ ಅಗತ್ಯವಿರುವ ಕಾರ್ಮಿಕರ ಸಂಚಾರಕ್ಕೆ ಅನುಮತಿಗಾಗಿ ಬಿಬಿಎಂಪಿ, ನಗರ ಪೊಲೀಸ್‌ ಆಯುಕ್ತರು, ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಇಲಾಖೆಗೆ ಅಲೆದಾಡುವಂತಾಗಿದೆ.

ರಾಜ್ಯದಲ್ಲಿ ಮಾ.23ರಿಂದ ಲಾಕ್‌ ಮಾಡಿದ ಸಂದರ್ಭದಲ್ಲಿ ಬೆಂಗಳೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳ ಗಡಿ, ರಾಜ್ಯದ ಗಡಿ ಭಾಗದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಅವರಿಗೆ ಸರ್ಕಾರವೇ ಊರಿಗೆ ತೆರಳಲು ಅವಕಾಶ ಕಲ್ಪಿಸಿದ್ದು ರಿಯಲ್‌ ಎಸ್ಟೇಟ್‌ ಉದ್ಯಮಿಗಳ ನಿದ್ದೆಗೆಡಿಸಿದೆ. ಕಳೆದ 1 ತಿಂಗಳಿಂದ ಲಾಕ್‌ಡೌನ್‌ ಅವಧಿಯಲ್ಲಿ ಕೆಲವು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅಗತ್ಯ ಊಟ, ವಸತಿ, ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಸಲಕರಣೆ ನೀಡುತ್ತಿವೆ. ಈಗ ಕಾಮಗಾರಿ ಆರಂಭಿ  ಸಬೇಕು ಎನ್ನುವಷ್ಟರಲ್ಲಿ ಸರ್ಕಾರ, ಕಾರ್ಮಿಕರು ಸ್ವಂತ ಊರಿಗೆ ತೆರಳಲು ಅವಕಾಶ ನೀಡಿದೆ. ಶೇ.90 ವಲಸೆ ಕಾರ್ಮಿಕರೇ ಇರುವುದರಿಂದ ಒಮ್ಮೆ ಊರುಗಳಿಗೆ ವಾಪಸ್‌ ತೆರಳಿದರೆ, ವಾಪಸ್‌ ಬರುವುದು ಸದ್ಯದ ಸ್ಥಿತಿಯಲ್ಲಿ ಅನುಮಾನ. ಇದರಿಂದ ಮುಂದಿನ 3-4 ತಿಂಗಳು ನಗರ ಪ್ರದೇಶಗಳಲ್ಲಿ ಕಾರ್ಮಿಕರ ಕೊರತೆಯಿಂದ ನಿರ್ಮಾಣ ಕಾಮಗಾರಿ ಚುರುಕುಗೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸ್ಪಷ್ಟತೆ ಇಲ್ಲದ ಆದೇಶ: ಕಾಮಗಾರಿ ಆರಂಭಿಸಲು ಆದೇಶ ನೀಡಿರುವ ಸರ್ಕಾರ, ನಗರದ ಒಂದು ಭಾಗ  ದಿಂದ ಇನ್ನೊಂದು ಭಾಗಕ್ಕೆ ಕಾರ್ಮಿಕರು ಸಂಚರಿಸಲು ಅವಕಾಶ ನೀಡುವ ಬಗ್ಗೆ ಸ್ಪಷ್ಟತೆ ನೀಡಿಲ್ಲ. ಅಲ್ಲದೆ ಕಾರ್ಮಿ ಕರ ಮೇಲುಸ್ತುವಾರಿ ನೋಡಿಕೊಳ್ಳುವ ಸೂಪರ್‌ ವೈಸರ್‌ ಸೇರಿ ಮೇಲಧಿಕಾರಿಗಳು ಸಂಚರಿಸಲು ಸ್ಪಷ್ಟ ಮಾರ್ಗಸೂಚಿ ನೀಡದಿರುವುದರಿಂದ ಸರ್ಕಾರ ಕಾಮಗಾರಿ ಆರಂಭಕ್ಕೆ ಆದೇಶಿಸಿ 4 ದಿನ ಕಳೆದರೂ ರಿಯಲ್‌ ಎಸ್ಟೇಟ್‌ ಸಂಸ್ಥೆಗಳಿಗೆ ವಾಸ್ತವವಾಗಿ ಕೆಲಸ ಆರಂಭಿಸಲು ಸಾಧ್ಯವಾಗುತ್ತಿಲ್ಲ.

ಸರ್ಕಾರದ ಆದೇಶ ಪೊಲೀಸರಿಗಿಲ್ಲ ಸ್ಪಷ್ಟ ಸೂಚನೆ
ಸರ್ಕಾರ ಆದೇಶ ಮಾಡಿದ ನಂತರ ಅದಕ್ಕೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಮಾರ್ಗಸೂಚಿ ರೂಪಿಸದೆ ಇರುವುದರಿಂದ ಪೊಲೀಸರು, ಸಾರ್ವಜನಿಕರ ನಡುವೆ ಸಾಕಷ್ಟು ವಾಗ್ವಾದಗಳಿಗೂ ಕಾರಣವಾಗುತ್ತಿದೆ. ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಿಗೆ ಕೂಲಿ ಕೆಲಸಕ್ಕೆ ಆಗಮಿಸುವ ಕಾರ್ಮಿಕರು ಬಹುತೇಕ ಗ್ರಾಮೀಣ ಪ್ರದೇಶದಿಂದಲೇ ನಿತ್ಯ ಸಂಚರಿಸುತ್ತಾರೆ. ಅವರಿಗೆ ಯಾವುದೇ ಸಂಸ್ಥೆಯ ಅಧಿಕೃತ ಗುರುತಿನ ಚೀಟಿ ಇಲ್ಲ. ಅಂತಹ ಕಾರ್ಮಿಕರು ತಮ್ಮ ಊರಿನಿಂದ ಕಟ್ಟಡ ಅಥವಾ ಇತರ ಕಾಮಗಾರಿಗೆ ತೆರಳಿದರೆ, ಅಂತಹವರನ್ನು ತಡೆದು ಪೊಲೀಸರು ಅವರ ಬೈಕ್‌ ಅಥವಾ ಬೇರೆ ವಾಹನ ಸೀಜ್‌ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿವೆ. ಹೀಗಾಗಿ ಸರ್ಕಾರ ಕೇವಲ ಆದೇಶ ಮಾಡಿ ಕೂರದೇ ಅದಕ್ಕೆ ಸಂಬಂಧಿಸಿದ ಸ್ಪಷ್ಟ ಮಾರ್ಗಸೂಚಿ, ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂಬ ಅಭಿಪ್ರಾಯ ಕಾರ್ಮಿಕರು- ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಂದ ವ್ಯಕ್ತವಾಗುತ್ತಿದೆ.

ಕಡ್ಡಾಯವಲ್ಲ; ಹಕ್ಕು ಕಲ್ಪಿಸಿದೆ
ಕಾರ್ಮಿಕರನ್ನು ಕಡ್ಡಾಯವಾಗಿ ಊರಿಗೆ ಹೋಗಿ ಎಂದು ಸರ್ಕಾರ ಹೇಳುತ್ತಿಲ್ಲ. ಊರಿಗೆ ಹೋಗುವುದು ಅವರ ಹಕ್ಕು. ಊರಿಗೆ ಹೋಗುತ್ತೇವೆ ಎಂದವರನ್ನು ಕಳುಹಿಸುವುದು ಸರ್ಕಾರದ ಜವಾಬ್ದಾರಿ. ನಾವು ಅದನ್ನು ಮಾಡುತ್ತಿದ್ದೇವೆ. ನಿರ್ಮಾಣ ಸಂಸ್ಥೆಗಳು ಕಾರ್ಮಿಕರನ್ನು ಉಳಿಸಿಕೊಂಡರೆ ಸರ್ಕಾರದ ಅಭ್ಯಂತರವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌ ತಿಳಿಸಿದ್ದಾರೆ.

ಅಗತ್ಯ ಕಾರ್ಖಾನೆಗೆ ಮಾತ್ರ ಅವಕಾಶ
ಹಸಿರು ವಲಯದ ಜಿಲ್ಲೆಗಳು ಮತ್ತು ಮಹಾ ನಗರಗಳ ವ್ಯಾಪ್ತಿಯಿಂದ ಹೊರಗಿರುವ ಪ್ರದೇಶಗಳಲ್ಲಿ ಅಗತ್ಯ ಸೇವೆ ಒದಗಿಸುವ ಕಾರ್ಖಾನೆಗಳನ್ನು ಮಾತ್ರ ತೆರೆಯಲು ಅವಕಾಶ ಕೊಡಲಾಗಿದೆ. ಬಹುತೇಕ ಕಾರ್ಮಿಕರ ಓಡಾಟಕ್ಕಿಂತ ಕಾರ್ಖಾನೆ ಹತ್ತಿರವೇ ಕ್ಯಾಂಪ್‌ ಮಾಡಿ ಅಲ್ಲಿಯೇ ಊಟ ವಸತಿ ಕಲ್ಪಿಸಲು ಕಾರ್ಖಾನೆ ಮಾಲಿಕರಿಗೆ ಸೂಚಿಸಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಸರ್ಕಾರ ಕಟ್ಟಡ ಕಾಮಗಾರಿಗೆ ಅವಕಾಶ
ನೀಡಿ ಇನ್ನೊಂದೆಡೆ ಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕಲ್ಪಿಸಿದರೆ ಹೇಗೆ ಕೆಲಸ ಮಾಡುವುದು?. ಇನ್ನು ಸಂಸ್ಥೆ ಸಿಬ್ಬಂದಿ ಕಾಮಗಾರಿ ನಡೆಯುವ ಸ್ಥಳಕ್ಕೆ ತೆರಳಲು ಯಾವ ಇಲಾಖೆಯವರೂ ಅನುಮತಿ ನೀಡುತ್ತಿಲ್ಲ. ಈ ರೀತಿ ಗೊಂದಲದ ಆದೇಶ ಮಾಡಿದರೆ ಹೇಗೆ ಕೆಲಸ ಆರಂಭಿಸುವುದು?.
ರಿಯಲ್‌ ಎಸ್ಟೇಟ್‌ ಸಂಸ್ಥೆ, ಹೆಸರು ಹೇಳಲಿಚ್ಚಿಸದ ಅಧಿಕಾರಿ

ಕಟ್ಟಡ ಕೆಲಸಕ್ಕೆ ಹೋಗಬಹುದು ಅಂತ ಹೇಳಿದ್ದಾರೆ. ಆದರೆ, ಕೆಲಸಕ್ಕೆ ಹೋಗುವಾಗ ಪೊಲೀಸರು ತಡೆದು ನಮ್ಮ ಬೈಕ್‌ ಜಪ್ತಿ ಮಾಡುತ್ತಿದ್ದಾರೆ. ಹೀಗಾಗಿ ಕೆಲಸಕ್ಕೆ ಹೋಗಲು ಆಗುತ್ತಿಲ್ಲ.
ಅರ್ಜುನ್‌ ಕಳೆ, ಕಟ್ಟಡ ಕಾರ್ಮಿಕ

●ಶಂಕರ ಪಾಗೋಜಿ

ಟಾಪ್ ನ್ಯೂಸ್

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.