KARNATAKA POLL: ಟಿಕೆಟ್ ಕುತೂಹಲಕ್ಕೆ ತೆರೆ : Congress 6ನೇ ಪಟ್ಟಿ ರಿಲೀಸ್
ಮಂಗಳೂರು ಉತ್ತರ: ಇನಾಯತ್ ಅಲಿಗೆ ಟಿಕೆಟ್
Team Udayavani, Apr 20, 2023, 7:48 AM IST
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ (6ನೇ ಪಟ್ಟಿ) ಯನ್ನು ರಿಲೀಸ್ ಮಾಡಿದೆ. ಬುಧವಾರ 5ನೇ ಪಟ್ಟಿಯ ಬಳಿಕ ರಾತ್ರೋರಾತ್ರಿ ಸಭೆ ನಡೆಸಿ ಬಾಕಿ ಉಳಿದಿದ್ದ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.
ಮುಖ್ಯವಾಗಿ ಭಾರೀ ಕುತೂಹಲ ಹುಟ್ಟಿಸಿದ್ದ ಮಂಗಳೂರು ಉತ್ತರದ ಅಭ್ಯರ್ಥಿಯನ್ನು ಕೊನೆಗೂ ಘೋಷಣೆ ಮಾಡಿದೆ. ಇಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಇನಾಯತ್ ಅಲಿ ಅವರಿಗೆ ಟಿಕೆಟ್ ಘೋಷಿಸಿದೆ.
ಇನಾಯತ್ ಅಲಿ ಅವರು ಇಂದು (ಏ.20 ) ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಂಡಾಯದ ಸುಳಿವು ನೀಡಿದ ಬಾವ
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಕಾಂಗ್ರೆಸ್ ವಿರುದ್ದ ಬಂಡಾಯದ ಸುಳಿವು ನೀಡಿದ್ದಾರೆ. ವೀಡಿಯೊ ಮೂಲಕ ಸಂದೇ ಕಳುಹಿಸಿರುವ ಅವರು, ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ನನ್ನನ್ನು ಕಾಂಗ್ರೆಸ್ ಪಕ್ಷ ಉಪಯೋಗಿಸಿ ಹಣದ ಆಸೆಗಾಗಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ನನ್ನ ಹೆಸರಿಗಾಗಿದ್ದ ಬಿಫಾರಂ ಅನ್ನು ಎರಡು ಬಾರಿ ತಪ್ಪಿಸಲಾಗಿದೆ. ಇಂದು ಮಧ್ಯಾಹ್ನ ೧೧ ಗಂಟೆಗೆ ಚೊಕ್ಕಬೆಟ್ಟಿನ ನನ್ನ ಮನೆಯಲ್ಲಿ ಬೆಂಬಲಿಗರ ಸಭೆ ಕರೆದಿದ್ದೇನೆ ಎಂದು ತಿಳಿಸಿದ್ದಾರೆ.
ಬಾಕಿ ಉಳಿದುಕೊಂಡಿದ್ದ ರಾಯಚೂರು ನಗರಕ್ಕೆ – ಮೊಹಮ್ಮದ್ ಶಾಲಮ್, ಶಿಡ್ಲಘಟ್ಟ – ಬಿ ವಿ ರಾಜೀವ್ ಗೌಡ, ಸಿ ವಿ ರಾಮನ್ ನಗರ – ಎಸ್ ಆನಂದ್ ಕುಮಾರ್, ಅರಕಲಗೂಡು – ಎಚ್.ಪಿ. ಶ್ರೀಧರ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
#KarnatakaElections2023 | Congress releases the sixth and final list of candidates. pic.twitter.com/UYw0oYmapz
— ANI (@ANI) April 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.