ನಾಮಪತ್ರ ಸಲ್ಲಿಕೆ ವೇಳೆ ಕೈ-ಕಮಲ ಶಕ್ತಿ ಪ್ರದರ್ಶನ
Team Udayavani, Apr 30, 2019, 3:03 AM IST
ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ತಮ್ಮ, ತಮ್ಮ ಪಕ್ಷದ ನಾಯಕರೊಂದಿಗೆ ಉಮೇದುವಾರಿಕೆ ಸಲ್ಲಿಸಿದರು.
“ಕೈ’ ಮುಖಂಡರ ಸಾಥ್: ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ನಾಮಮತ್ರ ಸಲ್ಲಿಸುವ ಮೆರವಣಿಗೆ ಪಟ್ಟಣದ ಗಾಳಿ ಮಾರೆಮ್ಮಾ ದೇವಸ್ಥಾನದಿಂದ ಆರಂಭವಾಯಿತು. ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯರ್ತರು, ಶಿವಳ್ಳಿ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿದ್ದರು.
ಸಿದ್ದರಾಮಯ್ಯ, ದಿನೇಶ ಗುಂಡೂರಾವ್, ಮಾಜಿ ಸಚಿವರಾದ ಎಚ್.ಕೆ.ಪಾಟೀಲ, ವಿನಯ ಕುಲಕರ್ಣಿ, ಉಮಾಶ್ರೀ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರಡ್ಡಿ, ಮಾಜಿ ಶಾಸಕ ಎಂ.ಎಸ್.ಅಕ್ಕಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ| ಪುಷ್ಪಾ ಅಮರನಾಥ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಬೆಳಗ್ಗೆ 11 ಗಂಟೆ ವೇಳೆಗೆ ಚುನಾವಣಾ ಕಚೇರಿಗೆ ಸ್ಥಳೀಯ ಮುಖಂಡರು ಹಾಗೂ ಪುತ್ರ ಅಮರಶಿವನೊಂದಿಗೆ ಆಗಮಿಸಿದ ಕುಸುಮಾವತಿ ಶಿವಳ್ಳಿ, ನಾಮಪತ್ರ ಸಲ್ಲಿಸಿದ್ದರು.
ಕಣ್ಣೀರಿಟ್ಟ ಕುಸುಮಾ ಶಿವಳ್ಳಿ: ಮೆರವಣಿಗೆಯಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರು ತಮ್ಮ ಪತಿ ಸಿ.ಎಸ್.ಶಿವಳ್ಳಿ ಅವರನ್ನು ನೆನೆದು ಕಣ್ಣೀರಿಟ್ಟರು.
ಶಕ್ತಿ ತೋರಿಸಿದ ಬಿಜೆಪಿ: ಪ್ರವಾಸಿ ಮಂದಿರ ಬಳಿಯ ಮರಾಠ ಭವನದಿಂದ 1.30ರ ಸುಮಾರಿಗೆ ಬಿಜೆಪಿ ಮೆರವಣಿಗೆ ಆರಂಭವಾಯಿತು. ರಸ್ತೆಯುದ್ದಕ್ಕೂ ಕೇಸರಿ ಬಾವುಟಗಳು, ನಾಯಕರ ಕಟೌಟ್‌ಗಳು ರಾರಾಜಿಸುತ್ತಿದ್ದವು. ಮೆರವಣಿಗೆಯುದ್ದಕ್ಕೂ ಮೋದಿ ಪರ ಘೋಷಣೆಗಳು ಮೊಳಗಿದವು.
ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಬಿಜೆಪಿ ಮುಖಂಡ ಎಂ.ಆರ್.ಪಾಟೀಲ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾಥ್ ನೀಡಿದರು. ಮೆರವಣಿಗೆಗೆ ಮುಂಚೆ ಅಭ್ಯರ್ಥಿ ಚಿಕ್ಕನಗೌಡರ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಒಂದು ನಾಮಪತ್ರ ಸಲ್ಲಿಸಿದ್ದರು.
ಓಡಿ ಬಂದ ಬಿಜೆಪಿ ಅಭ್ಯರ್ಥಿ: ಎಸ್.ಐ.ಚಿಕ್ಕನಗೌಡರ ನಾಮಪತ್ರ ಸಲ್ಲಿಸಲು ಲಘುಬಗೆಯಿಂದ ಓಡಿ ಬಂದರು. “ಬಿ’ ಫಾರ್ಮ್ ಸಹಿತ ನಾಮಪತ್ರ ಸಲ್ಲಿಸಲು ಇನ್ನು ಕೇವಲ 9 ನಿಮಿಷ ಬಾಕಿ ಇರುವಾಗ ಚುನಾವಣಾ ಕಚೇರಿ ಆವರಣ ಪ್ರವೇಶಿಸಿದರು. ಒಂದು ತಾಸಿನಲ್ಲಿ ಮೆರವಣಿಗೆ ಚುನಾವಣಾ ಕಚೇರಿ ತಲುಪಲಿದೆ ಎನ್ನುವ ನಿರೀಕ್ಷೆ ಮುಖಂಡರದ್ದಾಗಿತ್ತು. ಆದರೆ, ಮೆರವಣಿಗೆ ವಿಳಂಬವಾಗಿದ್ದರಿಂದ ಇನ್ನೂ ಚುನಾವಣಾ ಕಚೇರಿ ಮುಂದಿರುವಾಗಲೇ ತೆರೆದ ವಾಹನದಿಂದಿಳಿದು ನಾಮಪತ್ರ ಸಲ್ಲಿಸಲು ಅವರು ಓಡಿ ಬರಬೇಕಾಯಿತು.
ಕಾಂಗ್ರೆಸ್ ಕಾರ್ಯಕರ್ತರಿಗೆ ನಮಸ್ಕರಿಸಿದ ಬಿಜೆಪಿ ಮುಖಂಡರು: ಚುನಾವಣಾ ಕಚೇರಿಗೆ ಆಗಮಿಸಿದ ಬಿಜೆಪಿ ಮುಖಂಡರನ್ನು ಕಂಡ ಕಾಂಗ್ರೆಸ್ ಕಾರ್ಯಕರ್ತರು ಶಿವಳ್ಳಿ ಹೆಸರಲ್ಲಿ ಘೋಷಣೆ ಕೂಗಿದರು. ಆಗ ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ, ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ ಅವರು ಕಾಂಗ್ರೆಸ್ ಕಾರ್ಯಕರ್ತರತ್ತ ಕೈ ಬೀಸಿ ನಮಸ್ಕರಿಸಿದರು. ಇದನ್ನು ಗಮನಿಸಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ನವರು ಎಂದು ಹೇಳುತ್ತಿದ್ದಂತೆ ಪರಸ್ಪರ ಮುಖ ನೋಡಿಕೊಂಡು ಮುಗುಳ್ನಗೆ ನಕ್ಕು ಒಳ ನಡೆದರು.
ಬಿಜೆಪಿಯಲ್ಲಿ ಯಾವುದೇ ಅಸಮಾಧಾನಗಳಿಲ್ಲ. ಎಂ.ಆರ್.ಪಾಟೀಲ್ ಇಲ್ಲದೆ ಚಿಕ್ಕನಗೌಡ ಇಲ್ಲ. ಅವರ ಬೆಂಬಲದಿಂದಲೇ ನನ್ನ ಗೆಲುವು ಸಾಧ್ಯ. ಈ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ. ನಮ್ಮ ಸರಕಾರದ ಸಾಧನೆಗಳು, ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಾದ ಅಭಿವೃದ್ಧಿ ಯೋಜನೆಗಳು ನನಗೆ ಗೆಲುವು ತಂದು ಕೊಡಲಿವೆ.
-ಎಸ್.ಐ.ಚಿಕ್ಕನಗೌಡರ, ಬಿಜೆಪಿ ಅಭ್ಯರ್ಥಿ.
ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಒಮ್ಮತದ ಅಭಿಪ್ರಾಯದ ಮೇರೆಗೆ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿದ್ದರಾಮಯ್ಯ ಸಾಹೇಬರು ಈ ಚುನಾವಣೆ ಮಾಡುತ್ತಿದ್ದಾರೆ. ನನ್ನ ಪತಿ ಶಿವಳ್ಳಿ ಅವರು ಕ್ಷೇತ್ರದ ಜನರೊಂದಿಗೆ ಹೊಂದಿದ್ದ ಅವಿನಾಭಾವ ಸಂಬಂಧ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ.
-ಕುಸುಮಾವತಿ ಶಿವಳ್ಳಿ, ಮೈತ್ರಿ ಅಭ್ಯರ್ಥಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.