Congress Election campaign; ಇಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ
Team Udayavani, Apr 23, 2024, 6:50 AM IST
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿನ ಚುನಾವಣ ಪ್ರಚಾರದ ಕೊನೆಯ ಹಂತ ತಲುಪುತ್ತಿರುವಂತೆ ಕಾಂಗ್ರೆಸ್ ತನ್ನ ಪ್ರಚಾರಕ್ಕೆ ಇನ್ನಷ್ಟು ಬಿರುಸು ನೀಡಲು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಳಸಿಕೊಳ್ಳಲಿದೆ.
ಅವರು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ಪರವಾಗಿ ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಪ್ರಚಾರ ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಸಂಜೆ 6 ಗಂಟೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ, ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.