ಕಲಾಪಗಳಿಂದ ಕಾಂಗ್ರೆಸ್ ಪಲಾಯನ: ಅಶ್ವತ್ಥ ನಾರಾಯಣ
ಸಂತ್ತಿನಲ್ಲಿ ಗದ್ದಲ ಸಂವಿಧಾನಕ್ಕೆ ತತ್ವಗಳಿಗೆ ಧಕ್ಕೆ
Team Udayavani, Aug 8, 2021, 3:59 PM IST
ರಾಮನಗರ: ದೇಶವನ್ನು ಕಾಡುತ್ತಿರುವ ಕೋವಿಡ್ ಸೋಂಕು, ಆರ್ಥಿಕ ಸಮಸ್ಯೆಗಳು ಮುಂತಾದ ವಿಚಾರಗಳಲ್ಲಿ ಸಂಸತ್ತಿನ ಸದನದಲ್ಲಿ ಚರ್ಚೆ ನಡೆಸದೆ ಕಾಂಗ್ರೆಸ್ ಪಲಾಯನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಲಿಖಿತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಕೋವಿಡ್ ಸೋಂಕು, ಸೋಂಕಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ಆರ್ಥಿಕ ಸಮಸ್ಯೆಗಳು, ಉತ್ಪಾದನಾ ಕ್ಷೇತ್ರದ ಸವಾಲುಗಳು, ಆಫಘಾನಿಸ್ಥಾನದಲ್ಲಿನ ಬೆಳೆವಣಿಗೆ, ಪಾಕಿಸ್ತಾನ ಮತ್ತು ಚೀನಾದ ಷಡ್ಯಂತ್ರಗಳಿಂದಾಗಿ ದೇಶದ ಮೇಲೆ ಆಗಬಹುದಾದ ಪರಿಣಾಮಗಳು ಹೀಗೆ
ಅನೇಕ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗಳಿಂದ ಜು. 19ರಿಂದ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ಮತ್ತು ರೈತರ ಸಮಸ್ಯೆಗಳ ಕುರಿತು ವಿರೋಧ ಪಕ್ಷಗಳ ನಿರಂತರ ಪ್ರತಿಭಟನೆಗಳಿಂದ ಲೋಕಸಭೆ ಮತ್ತು ರಾಜ್ಯಸಭೆಗಳು ಯಾವುದೇ ಮಹತ್ವದ ವ್ಯವಹಾರಗಳನ್ನು ನಡೆಸಲು ವಿಫಲವಾಗಿದೆ. ಈ ಧೋರಣೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಚಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಬೌಧಿಕ ದಿವಾಳಿತನ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತು ಪವಿತ್ರ ದೇವಾಲಯವಿದ್ದಂತೆ, ಸಂಸತ್ತಿನ ಒಳಗೆ ರಾಹುಲ್ ಗಾಂಧಿಯ ಅನುಯಾಯಿಗಳು ಮತ್ತು ಪ್ರತಿಪಕ್ಷಗಳು ಅತ್ಯಂತ ಬೇಜವಾಬ್ದಾರಿಯಿಂದ ಕಲಾಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹರಿದು ಹಾಕುತ್ತ ಸಂಸತ್ತಿನ ಕಾರ್ಯನಿರ್ವಹಣೆಗೆ ತಡೆ ಉಂಟು ಮಾಡುತ್ತಿರುವುದು ಅತ್ಯಂತ ಶೋಚನೀಯ ಎಂದಿದ್ದಾರೆ.
ಇದನ್ನೂ ಓದಿ:ಸುಳ್ಳು ಹೇಳಿ ನನ್ನನ್ನು ದಾರಿ ತಪ್ಪಿಸಲಾಗಿತ್ತು:ರಾಜ್ ಕುಂದ್ರಾ ವಿರುದ್ಧ ನಟಿ ಶೆರ್ಲಿನ್ ಆರೋಪ
ಕೇಂದ್ರ ಸರ್ಕಾರ ಅತ್ಯಂತ ಜವಾಬ್ದಾರಿಯಿಂದ ಸದನಗಳು ಸುಸೂತ್ರವಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಬಿಕ್ಕಟ್ಟನ್ನು ಕೊನೆಗೊಳಿಸಲು ಮಾಡಿರುವ ಎಲ್ಲ ಪ್ರಯತ್ನಗಳನ್ನು ವಿಫಲಗೊಳಿಸಿವೆ.
ಕೇವಲ ಗದ್ದಲ, ಗಲಾಟೆ ಮತ್ತು ಅಸಂವಿಧಾನಿಕ ಪ್ರಕ್ರಿಯೆಗಳ ಮೂಲಕ ವಿರೋಧ ಪಕ್ಷಗಳು ನಡೆಸಿರುವ ಕೃತ್ಯಗಳು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಗೆ ಮಾಡಿರುವ ದ್ರೋಹ ಎಂದರು.
ಸೇವಾಹಿ ಸಂಘಟನ್: ಸೇವಾಹಿ ಸಂಘಟನ್ ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಬಿಜೆಪಿ ಪಕ್ಷವು ದೇಶಾದ್ಯಂತ 60 ಕೋಟಿ ರೂ ಮೌಲ್ಯದ ಆಹಾರ ಪ್ಯಾಕೆಟ್‌ಗಳು, 25 ಕೋಟಿ ಫೇಸ್ ಮಾಸ್ಕ್ ಗಳು, 20 ಕೋಟಿ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ವಿತರಿಸಿದೆ. ಅನ್ಯ ಪಕ್ಷಗಳು ಕೇವಲ ಹೇಳಿಕೆಗಳಿಗೆ ಸೀಮಿತವಾಗಿರುವ ಸನ್ನಿವೇಶದಲ್ಲಿ ಬಿಜೆಪಿ ತನ್ನ ಲಕ್ಷಾಂತರ ಕಾರ್ಯಕರ್ತರ ಮೂಲಕ ಜನರನ್ನು ತಲುಪುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.