Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ
ಸಿಎಂ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಗುಲ್ಲು ಹಿನ್ನೆಲೆ
Team Udayavani, Jul 1, 2024, 6:25 AM IST
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಬೇಗುದಿ ಹೆಚ್ಚಾಗಿದೆ. ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಿಎಂ-ಡಿಸಿಎಂ ಬಣಗಳ ನಡುವೆ ನಡೆಯುತ್ತಿರುವ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಪಕ್ಷದ ಪದಾಧಿಕಾರಿಗಳ ಸಭೆ ಕರೆದಿರು ವುದು ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ಹೆಚ್ಚುವರಿ ಡಿಸಿಎಂ, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಬೇಕು ಎಂದು ಡಿಕೆಶಿ ಆಪ್ತರಿಂದ ಒತ್ತಡ ಇರುವ ಹಿನ್ನೆಲೆಯಲ್ಲಿ ಈ ವಿಷಯ ಪ್ರಸ್ತಾವವಾದರೆ ಜಟಾಪಟಿ ನಡೆಯುವುದು “ಗ್ಯಾರಂಟಿ’ ಎಂದೇ ಹೇಳಲಾಗಿದೆ.
ಈಗಾಗಲೇ ಹೈಕಮಾಂಡ್‌ಗೆ ಎರಡೂ ಕಡೆಯಿಂದ ದೂರು ಹೋಗಿದೆ. ದಿಲ್ಲಿಯಲ್ಲಿ ನಾಯಕ ರಾಹುಲ್ ಗಾಂಧಿಗೆ ಸಿಎಂ ದೂರಿತ್ತರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಡಿಕೆಶಿ ದೂರು ನೀಡಿ ಬಂದಿದ್ದಾರೆ. ಈ ಬೆನ್ನಲ್ಲೇ ಡಿಕೆಶಿ ಕರೆದಿರುವ ಸಭೆ ಜಟಾಪಟಿಗೆ ಕಾರಣವಾಗಲಿದೆ ಎಂದೇ ಹೇಳಲಾಗುತ್ತಿದೆ.
ಒಂದು ವೇಳೆ ಈ ವಿಚಾರ ಸಭೆಯಲ್ಲಿ ಪ್ರಸ್ತಾವವಾದರೆ, ಸಿಎಂ ಬಣ ಆಕ್ಷೇಪ ವ್ಯಕ್ತಪಡಿಸಲಿದೆ. ಇದು ಉಭಯ ಬಣಗಳ ನಡುವೆ ಜಟಾಪಟಿಗೂ ಕಾರಣವಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಇದಲ್ಲದೆ ಹೊಸ ಪದಾಧಿಕಾರಿಗಳಿಗೆ ವಿಧಾನಸಭಾ ಕ್ಷೇತ್ರವಾರು ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯವೈಖರಿ ಬಗ್ಗೆ ಚರ್ಚೆ ನಡೆಯಲಿದೆ. ಇದೇ ವೇಳೆ ನಿಗಮ ಮಂಡಳಿಗಳಿಗೆ ಸದಸ್ಯರು, ನಿರ್ದೇ ಶಕರನ್ನು ಆಯ್ಕೆ ಮಾಡಲು ರಚಿಸಲಾಗಿರುವ ಸಮಿತಿಯಿಂದ ಪಕ್ಷದ ಪದಾಧಿಕಾರಿಗಳನ್ನು ಹೊರಗಿಟ್ಟಿರುವ ಬಗ್ಗೆ ಪಕ್ಷದ ವಲಯದಲ್ಲಿ ವಿರೋಧ ವ್ಯಕ್ತವಾಗಿದ್ದು, ಈ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ. ಸಭೆಗೆ ಮುಖ್ಯಮಂತ್ರಿಯವರಿಗೂ ಆಹ್ವಾನ ಹೋಗಿದೆ ಎಂದು ಹೇಳಲಾಗುತ್ತಿದೆ. ಆದರೆ ಮುಖ್ಯಮಂತ್ರಿಯವರ ಸೋಮವಾರದ ಅಧಿಕೃತ ಪ್ರವಾಸ ಪಟ್ಟಿಯಲ್ಲಿ ಈ ಸಭೆಯ ಪ್ರಸ್ತಾಪವಿಲ್ಲ.
ಅದೇ ರೀತಿ ಕೆಪಿಸಿಸಿ ಅಧ್ಯಕ್ಷರು ಸಭೆ ಕರೆದಿದಾರೆ ಎಂದು ಹೇಳಲಾಗಿದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಪ್ರವಾಸ ಪಟ್ಟಿ ಯಲ್ಲೂ ಸಭೆಯ ಪ್ರಸ್ತಾಪವಿಲ್ಲ ದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮುಂದಿನ ಚುನಾವಣೆಗಳ ಬಗ್ಗೆಯೂ ಚರ್ಚೆ?
ಉಪ ಮುಖ್ಯಮಂತ್ರಿಯೂ ಆದ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಾ ಧ್ಯಕ್ಷರು, ಉಪಾಧ್ಯಕ್ಷರು ಭಾಗ ವಹಿಸ ಲಿದ್ದಾರೆ. ಪಕ್ಷದ ಸಂಘಟನೆ, ಬರುವ ಉಪ ಚುನಾವಣೆ, ಸ್ಥಳೀಯ ಸಂಸ್ಥೆ ಗಳ ಚುನಾವಣೆ ಸೇರಿದಂತೆ ವಿವಿಧ ವಿಷಯ ಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಪರಾಮರ್ಶೆ, ಪಂಚಾಯತ್ ಚುನಾವಣೆಗೆ ಪಕ್ಷ ಸಂಘಟನೆ, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದು ದಿಢೀರ್ ಕರೆದ ಸಭೆ ಅಲ್ಲ, ಕಳೆದ ವಾರವೇ ಇದರ ಸೂಚನೆ ಹೋಗಿತ್ತು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಸೋಮವಾರ ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆದಿರುವುದು ಕುತೂಹಲ ಮೂಡಿ ಸಿದೆ. ಸಭೆ ಬಳಿಕ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತ ನಾಡಲಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗ ತಿಳಿಸಿದೆ.
ಸಿಎಂ ಬಣಕ್ಕೆ ಸಂದೇಶ?
ಸಿದ್ದರಾಮಯ್ಯ ಬಣಕ್ಕೆ ಸಂದೇಶ ರವಾನಿಸಲು ಈ ಸಭೆ ಕರೆಯ ಲಾಗಿದೆ. ಹೆಚ್ಚುವರಿ ಡಿಸಿಎಂ, ಅಧ್ಯ ಕ್ಷರ ಬದಲಾವಣೆ ವಿಚಾರವಾಗಿ ಸಭೆ ಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳು ವಂತೆ ಡಿಕೆಶಿ ಆಪ್ತರಿಂದ ಒತ್ತಡ ಇದೆ ಎನ್ನಲಾಗಿದೆ.
ಖರ್ಗೆಗೆ ಡಿಕೆಶಿ ದೂರು?
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಹೆಚ್ಚಾಗುತ್ತಲೇ ಇದೆ. ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದರೆ, ಅತ್ತ ಸಿಎಂ ಬಣವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದರ ಭಾಗವಾಗಿ ಶನಿವಾರವಷ್ಟೇ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿಎಂ ಬಣ ಕೆಲವು ದೂರುಗಳನ್ನು ಅವರ ಕಿವಿಗೆ ಹಾಕಿ ಬಂದಿದೆ ಎಂದು ಹೇಳಲಾಗಿದೆ. ರವಿವಾರ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಮ್ಮ ಕಡೆಯ ವಾದ-ದೂರನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.
ದಿಲ್ಲಿಯಲ್ಲಿ ರವಿವಾರ ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದೊಳಗೆ ನಡೆಯುತ್ತಿರುವ ಇತ್ತೀಚೆಗಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಅಲ್ಲದೆ ತಮ್ಮ ವಿರುದ್ಧ ನಡೆಯುತ್ತಿರುವ ಮಸಲತ್ತುಗಳೇನು, ಸಿಎಂ ಬಣದವರು ಹೂಡುತ್ತಿರುವ ಕಾರ್ಯತಂತ್ರಗಳೇನು, ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಆಗುವ ಘಾಸಿ ಏನು ಎಂಬಿತ್ಯಾದಿ ವಿಷಯಗಳನ್ನು ವಿವರಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.