Congress Government: ಕರ್ನಾಟಕದಲ್ಲಿರುವುದು ದರೋಡೆಕೋರರ ಸರಕಾರ: ಕೇಂದ್ರ ಸಚಿವ ಎಚ್ಡಿಕೆ
ಪ್ರಾಸಿಕ್ಯೂಶನ್ಗೆ ಆದೇಶಿಸಿದಾಗ ರಾಜ್ಯಪಾಲರ ಫೋಟೋಗೆ ಕಾಂಗ್ರೆಸ್ ಚಪ್ಪಲಿ ಹಾರ ಹಾಕಿತ್ತು, ಈಗ ಸಿಎಂಗೆ ಚಪ್ಪಲಿ ಹಾರ ಹಾಕುತ್ತೀರಾ?
Team Udayavani, Sep 26, 2024, 8:38 PM IST
ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಆದೇಶಿಸಿದಾಗ ಕಾಂಗ್ರೆಸ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿತ್ತು. ಈಗ ಹೈಕೋರ್ಟ್ ಆದೇಶ ಸಿದ್ದರಾಮಯ್ಯ ವಿರುದ್ಧ ಬಂದಿದೆ ಅವರಿಗೂ ಚಪ್ಪಲಿ ಹಾರ ಹಾಕುತ್ತೀರಾ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೋರ್ಟ್ ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಹಲವಾರು ಕಾನೂನು ತಜ್ಞರು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಆದೇಶದ ಬಗ್ಗೆ ಮಾಧ್ಯಮಗಳಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸುದ್ದಿ ಪ್ರಸಾರವಾಗಿದೆ. ಆದರೆ ಸಿಎಂ ಸಾಹೇಬರಿಗೆ ಕೋರ್ಟ್ ಆದೇಶದ ಪ್ರತಿಯೇ ಸಿಕ್ಕಿಲ್ಲವಂತೆ. ನಿಮ್ಮ ವಿರುದ್ಧ ಬಂದಿರುವ ಆದೇಶದ ಬಗ್ಗೆ ಮಾತನಾಡಿ ಎಂದರೆ ಜೆಡಿಎಸ್ ಮತ್ತು ಬಿಜೆಪಿ ಒಳಸಂಚು ಮಾಡಿವೆ, ಕುಮಾರಸ್ವಾಮಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಕೇಳುತ್ತಾರೆ ಎಂದು ಲೇವಡಿ ಮಾಡಿದರು.
ಸಿಎಂಗೆ ತಿರುಗೇಟು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ನನ್ನ ರಾಜೀನಾಮೆ ಕೇಳಿದ್ದಾರೆ. ನನ್ನ ಮೇಲಿನ ಆರೋಪ ಮುಕ್ತವಾದ ಮೇಲೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದೇನೆ. ನಾನು ಪಲಾಯನವಾದಿ ಅಲ್ಲ ಎಂದ ಅವರು, ಕರ್ನಾಟಕದಲ್ಲಿರುವುದು ದರೋಡೆಕೋರರ ಸರಕಾರ. ಅವರು ಹಿಂದೆಯೂ ದರೋಡೆ ಮಾಡುತ್ತಿದ್ದರು. ಈಗಲೂ ಮಾಡುತ್ತಿದ್ದಾರೆ. ಕೇರಳದ ಬಸ್ನಲ್ಲಿ ಚಿನ್ನದ ವ್ಯಾಪಾರಿಯಿಂದ ಚಿನ್ನ ಲೂಟಿ ಮಾಡಿದ ನಿಮ್ಮ ಹಣೆಬರಹ ಮರೆತಿದ್ದಾರೆಯೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.