ಸ್ಥಳೀಯ ವ್ಯವಸ್ಥೆಗೆ ಶಕ್ತಿ ತುಂಬಿದ್ದೇ ಕಾಂಗ್ರೆಸ್; ಸಿದ್ದರಾಮಯ್ಯ
ಐದು ವರ್ಷದ ಅಧಿಕಾರಾವಧಿಯಲ್ಲಿ 165 ಭರವಸೆಯಲ್ಲಿ 164 ಬೇಡಿಕೆಗಳನ್ನು ಈಡೇರಿಸಿದ್ದಾರೆ.
Team Udayavani, Dec 7, 2021, 5:56 PM IST
ಬಾದಾಮಿ: ಬಿಜೆಪಿ ಸರಕಾರ ತಾಪಂ, ಜಿಪಂ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಮುಂದೂಡಿದ್ದಾರೆ. ಪಂಚಾಯತ ರಾಜ್ ವ್ಯವಸ್ಥೆಗೆ ಶಕ್ತಿ ತುಂಬಿದ್ದು ಕಾಂಗ್ರೆಸ್ ಪಕ್ಷ ಎಂದು ವಿರೊಧ ಪಕ್ಷದ ನಾಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಸೋಮವಾರ ವಿಧಾನ ಪರಿಷತ್ ಚುನಾವಣೆ ಪ್ರಚಾರದ ನಿಮಿತ್ತ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಪರ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ತಾಪಂ, ಜಿಪಂ ಚುನಾವಣೆ ಅವಧಿ ಮುಗಿದ ತಕ್ಷಣ ನಡೆಸಬೇಕು. ಬಿಜೆಪಿಯವರಿಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆ ಇಲ್ಲ. ಒಂದು ಆಯೋಗ ರಚನೆ ಮಾಡಿ ಮುಂದೊಡಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಪಂಚಾಯತ ವ್ಯವಸ್ಥೆ ಜಾರಿಗೆ ಬಂದಿತು. ನಾನು ತಾಲೂಕು ಬೋರ್ಡ್ ಮೆಂಬರ್ ಆಗಿದ್ದೆ.
1983ರಲ್ಲಿ ಶಾಸಕನಾದೆ. ರಾಮಕೃಷ್ಣ ಹೆಗಡೆ ಸಿಎಂ ಮತ್ತು ರಾಜೀವ್ ಗಾಂಧಿ ಪ್ರಧಾನಿಯಾದಾಗ ಕಲಂ 73, 74ಕ್ಕೆ ತಿದ್ದುಪಡಿ ಮಾಡಿ ಗ್ರಾಪಂ, ತಾಪಂ, ಜಿಪಂ ಮೂರು ಅಂತಸ್ತು ಮಾಡಿದರು ಎಂದು ಸ್ಮರಿಸಿದರು. ಸಮಾಜದ ಹೆಚ್ಚು ಜನರನ್ನು ಚುನಾವಣೆಯಲ್ಲಿ ಭಾಗವಹಿಸುವುದು ಸೇರಿದಂತೆ ಈ ತಿದ್ದುಪಡಿ ಪೂರ್ವದಲ್ಲಿ ಹಿಂದುಳಿದವರಿಗೆ, ಅಲ್ಪಸಂಖ್ಯಾತ, ಮಹಿಳೆಯರಿಗೆ ಮೀಸಲಾತಿ ದೊರೆಯಿತು. ಸಾಮಾಜಿಕ ನ್ಯಾಯ ಹೇಳುವುದಲ್ಲ. ಅನುಷ್ಠಾನವಾಗಬೇಕು.
ಕುರುಬ, ನೇಕಾರ, ಮುಸ್ಲಿಂ, ಎಸ್‌ಟಿ, ಎಸ್‌ಸಿ ಸೇರಿದಂತೆ ಸಮಾಜದ ಎಲ್ಲ ವರ್ಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಎಲ್ಲ ವರ್ಗದವರಿಗೆ ಜನಪ್ರತಿನಿಧಿ ಯಾಗಲು ಅವಕಾಶ ಕಲ್ಪಿಸುವ ಬದ್ಧತೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದರು.
ಬಿಜೆಪಿ ಸರ್ಕಾರ ಪಂಚಾಯತಿಗೆ ಶಕ್ತಿ ತುಂಬುವ ಕೆಲಸ ಮಾಡಿಲ್ಲ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದವರು ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್. ಬಿಜೆಪಿ ಸರಕಾರ ಕಳೆದ ಎರಡು ವರ್ಷವಾದರೂ ಒಂದು ಮನೆ ಕಟ್ಟಿಲ್ಲ. ಕೊಟ್ಟ ಹಣ ವಾಪಸ್ಸು ತೆಗೆದುಕೊಂಡಿದ್ದಾರೆ. ಮಾತು ಕೊಟ್ಟಂತೆ ನಡೆದುಕೊಂಡವರು ನಾವು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಒಳ್ಳೆಯ ದಿನಗಳು ಬರುತ್ತವೆ ಎನ್ನುತ್ತಿದ್ದರು. ಗ್ಯಾಸ್, ಪೆಟ್ರೋಲ್ ಡಿಸೇಲ್ ದರ ಗಗನಕ್ಕೇರಿದೆ. ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ. ಪ್ರತಿ ವರ್ಷ ಯುವಕರಿಗೆ ಉದ್ಯೋಗ ನೀಡಲಿಲ್ಲ ಇದೇನಾ ಅಚ್ಚೇದಿನ್ ಎಂದು ಪ್ರಶ್ನಿಸಿದರು.
ಮಾಜಿ ಸಚಿವ ಶಾಸಕ ಎಂ.ಬಿ. ಪಾಟೀಲ ಮಾತನಾಡಿ, ಕಾಂಗ್ರೆಸ್ ಪಕ್ಷ ಪಂಚಾಯತ ರಾಜ್ ವ್ಯವಸ್ಥೆಗೆ ಶಕ್ತಿ ತುಂಬಿದೆ. ಸಿದ್ದರಾಮಯ್ಯ ಅವರ ಐದು ವರ್ಷದ ಅಧಿಕಾರಾವಧಿಯಲ್ಲಿ 165 ಭರವಸೆಯಲ್ಲಿ 164 ಬೇಡಿಕೆಗಳನ್ನು ಈಡೇರಿಸಿದ್ದಾರೆ. ಉಚಿತ ಅಕ್ಕಿ, ಶಾಲಾ ಮಕ್ಕಳಿಗೆ ಹಾಲು ಸೇರಿದಂತೆ ಸಮಾಜದ ಎಲ್ಲ ವರ್ಗದವರು ಜನಪರ ಕಾರ್ಯಕ್ರಮ ನೀಡಿದ್ದಾರೆ. ಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆಲ್ಲುವ ಮೂಲಕ ಸಿದ್ದರಾಮಯ್ಯ ನೇತೃತ್ವದಲ್ಲಿ
ಪುನಃ ಅ ಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿ ಸುನೀಲಗೌಡ ಪಾಟೀಲ ಮಾತನಾಡಿ, ನನಗೆ ಮೊದಲ ಬಾರಿ ವಿಧಾನಪರಿಷತ್ ಆಯ್ಕೆಯಾಗಿ ಕಡಿಮೆ ಅವ ಧಿಯಲ್ಲಿ ಕೆಲಸ ಮಾಡಿದ್ದೇನೆ. ಪ್ರತಿ ಗ್ರಾಪಂ ಸ್ಯಾನಿಟೈಸರ್ ಮಷಿನ್ ಕೊಡಲಾಗಿದೆ. ಗ್ರಾಪಂ ಅಹವಾಲು ಸ್ವೀಕರಿಸಲಾಗಿದೆ. 6800 ಜನರಲ್ಲಿ 6500 ಜನ ಗ್ರಾಮ ಪಂಚಾಯತಿ ಸದಸ್ಯರಿಗೆ ಸನ್ಮಾನ ಮಾಡಲಾಗಿದೆ. ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ.
ಸದಸ್ಯರ ಗೌರವಧನ ಹೆಚ್ಚಳ ಕುರಿತು ವಿಧಾನಸಭೆಯಲ್ಲಿ ಒತ್ತಾಯಿಸಲಾಗಿದೆ. ಗ್ರಾಪಂ ಸದಸ್ಯರಿಗೆ ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಲಾಗಿದೆ. ಮಾಸಿಕ ಪಿಂಚಣಿ ನೀಡಲು ಒತ್ತಾಯಿಸಲಾಗಿದೆ. ಸಿದ್ದರಾಮಯ್ಯ ಅವ ಧಿಯಲ್ಲಿ ಸುಮಾರು 15 ಲಕ್ಷ ಮನೆ ನಿರ್ಮಿಸಿ ಕೊಡಲಾಗಿದೆ. ಬಿಜೆಪಿ ಅಧಿಕಾರಾವಧಿಯಲ್ಲಿ ಒಂದೂ ಮನೆ ಕೊಟ್ಟಿಲ್ಲ. ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ತೀವ್ರ ವಾಗ್ಧಾಳಿ ನಡೆಸಿದರು. ಬಿಜೆಪಿ, ಜೆಡಿಎಸ್ ಪಕ್ಷ ತೊರೆದು ಹಲವರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಸಚಿವರಾದ ಉಮಾಶ್ರೀ, ಆರ್.ಬಿ. ತಿಮ್ಮಾಪೂರ, ಬಿ.ಬಿ. ಚಿಮ್ಮನಕಟ್ಟಿ, ಎಚ್.ವೈ. ಮೇಟಿ, ಮಾಜಿ ಸಂಸದ ಐ.ಜಿ. ಸನದಿ, ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಅಲಗೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಮುಖಂಡರಾದ ಡಾ|ಎಂ.ಎಚ್. ಚಲವಾದಿ, ಡಾ|ಎಂ.ಜಿ. ಕಿತ್ತಲಿ, ಎನ್.ಬಿ. ಬನ್ನೂರ, ಮಹೇಶ ಹೊಸಗೌಡ್ರ, ಭೀಮಸೇನ ಚಿಮ್ಮನಕಟ್ಟಿ, ಅಬ್ದುಲ್ ಮುಸಿ, ರಕ್ಷಿತಾ ಈಟಿ, ಶೈಲಾ ಪಾಟೀಲ, ಗಿರೀಶ ಅಂಕಲಗಿ, ಎಸ್.ವೈ. ಕುಳಗೇರಿ, ಮಹಾಂತೇಶ ಹಟ್ಟಿ, ಎಂ.ಡಿ. ಯಲಿಗಾರ ಸೇರಿದಂತೆ ಹಲವರಿದ್ದರು.
ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎಂದು ಮೋದಿ ಸರ್ವನಾಶ ಮಾಡಿದರು. ಬಸವತತ್ವದಲ್ಲಿ ನಂಬಿಕೆ ಇಟ್ಟವರು ನಾವು. ಉಚಿತ ಅಕ್ಕಿ ಕೇಂದ್ರ ಸರಕಾರದ ಯೋಜನೆಯಾದರೆ ಗುಜರಾತ್ ರಾಜ್ಯದಲ್ಲಿ ಯಾಕೆ ಅನುಷ್ಟಾನ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ವಯಸ್ಸಾಗಿದೆ ವಿಸರ್ಜನೆ ಮಾಡಲಿ ಎಂದು ಸಿಎಂ ಬೊಮ್ಮಾಯಿ ಹೇಳುತ್ತಿದ್ದಾರೆ. ಆರ್‌ಎಸ್‌ಎಸ್‌ಗೂ ವಯಸ್ಸಾಗಿದೆ ವಿಸರ್ಜನೆ ಮಾಡಲಿ. ದೇಶಕ್ಕಾಗಿ ಹೋರಾಡಿದವರು ಕಾಂಗ್ರೆಸ್‌ನವರು. ಬಿಜೆಪಿಯವರು ಒಬ್ಬರಾದರೂ
ಹೋರಾಡಿದ್ದಾರೆಯೇ?
ಸಿದ್ದರಾಮಯ್ಯ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.