Congress:ಲೋಕಾ ಚುನಾವಣೆ ಮುನ್ನ ಕರ್ನಾಟಕ ಮಾಡೆಲ್: “ಗ್ಯಾರಂಟಿ” ಕೈ ಹಿಡಿಯಬಹುದೆಂಬ ಆಶಾವಾದ
Team Udayavani, Aug 30, 2023, 11:19 PM IST
ಬೆಂಗಳೂರು: ಅಧಿಕಾರಕ್ಕೆ ಬಂದ ನೂರು ದಿನಗಳಲ್ಲೇ ಪ್ರಣಾಳಿಕೆಯ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ರಾಜ್ಯ ಸರಕಾರ, ವರ್ಷಾಂತ್ಯದ ವೇಳೆಗೆ ಯುವನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳನ್ನು ಲೋಕಸಭಾ ಚುನಾವಣೆ ದೃಷ್ಟಿಯಿಂದ ಚಿಮ್ಮು ಹಲಗೆಯಾಗಿಸಿಕೊಳ್ಳುವ ಲೆಕ್ಕಾಚಾರ ಹೆಣೆಯುತ್ತಿದೆ.
ಮೊದಲ ಕ್ಯಾಬಿನೆಟ್‌ನಲ್ಲೇ ಒಪ್ಪಿಗೆ
ರಾಜ್ಯ ವಿಧಾನಸಭಾ ಚುನಾವಣ ಪೂರ್ವದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಮತದಾರರ ಮುಂದೆ ಇಟ್ಟಿತ್ತು. ಕೊಟ್ಟ ಮಾತಿನ ಪ್ರಕಾರ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಇವುಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ “ಶಕ್ತಿ’, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ಬದಲು ಅಷ್ಟೇ ಮೊತ್ತದ ಹಣವನ್ನು ಖಾತೆಗೆ ಹಾಕುವ “ಅನ್ನಭಾಗ್ಯ”, 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ’ ಹಾಗೂ ಮೈಸೂರಿನಲ್ಲಿ ಚಾಲನೆ ಪಡೆದ “ಗೃಹಲಕ್ಷ್ಮಿ’ ಯೋಜನೆಯನ್ನು ಸರಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಇದೆಲ್ಲವೂ ಸಾರ್ವಜನಿಕರಲ್ಲಿ ಕಾಂಗ್ರೆಸ್ ಪರವಾಗಿ ಸಕಾರಾತ್ಮಕ ಭಾವನೆಯನ್ನು ಸೃಷ್ಟಿಸುತ್ತಿವೆ.
ಪಂಚ ಗ್ಯಾರಂಟಿಗಳೇ ಕಾಂಗ್ರೆಸ್‌ಗೆ “ಅಸ್ತ್ರ’
ನಗರ ಪ್ರದೇಶದ ಬಡವರು ಹಾಗೂ ದುಡಿಯುವ ವರ್ಗವನ್ನು ಲಕ್ಷ್ಯದಲ್ಲಿಟ್ಟುಕೊಂಡು “ಇಂದಿರಾ ಕ್ಯಾಂಟೀನ್’ ಯೋಜನೆಯನ್ನು ಮರಳಿ ಜಾರಿಗೆ ತರಲಾಗಿದೆ. ಸರಕಾರದ ಮೂಲಗಳ ಪ್ರಕಾರ ಪದವೀಧರ ಹಾಗೂ ಡಿಪ್ಲೋಮಾ ಪಾಸ್ ಮಾಡಿದ ನಿರುದ್ಯೋಗಿ ಯುವಕರಿಗಾಗಿ ರೂಪಿಸಿರುವ “ಯುವನಿಧಿ’ ಯೋಜನೆ ಡಿಸೆಂಬರ್ ತಿಂಗಳಿನಲ್ಲಿ ಜಾರಿಯಾಗಲಿದೆ. ಅಲ್ಲಿಗೆ ಸರಕಾರ ನೀಡಿದ ಪ್ರಮುಖ ಭರವಸೆಗಳೆಲ್ಲವೂ ವರ್ಷ ಕಳೆಯುವಷ್ಟರಲ್ಲಿ ಪೂರ್ಣಗೊಂಡಂತಾಗುತ್ತದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ನುಡಿದಂತೆ ನಡೆದಿದ್ದೇವೆ ಎಂಬುದು ಜಾಹಿರಾತಿಗೆ ಸೀಮಿತವಾದ ಘೋಷವಾಕ್ಯವಲ್ಲ. ಅಕ್ಷರಶಃ ಅದಕ್ಕೆ ಪೂರಕವಾಗಿ ನಡೆದುಕೊಂಡಿದ್ದೇವೆ ಎಂದು ಹೇಳುವುದಕ್ಕೆ ಪಂಚ ಗ್ಯಾರಂಟಿಗಳ ಜಾರಿಯನ್ನೇ ಸಾಕ್ಷಿಯಾಗಿ ಬಳಸಿಕೊಳ್ಳಬೇಕೆಂಬುದು ಕಾಂಗ್ರೆಸ್ ಚಿಂತಕರ ಚಾವಡಿಯ ಲೆಕ್ಕಾಚಾರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.