ಸಿದ್ದರಾಮಯ್ಯ ಮೇಲೆ ಕಾಂಗ್ರೆಸ್‌ ಶಾಸಕರಿಗೆ ವಿಶ್ವಾಸವಿಲ್ಲ: ಶೋಭಾ ಕರಂದ್ಲಾಜೆ


Team Udayavani, Nov 25, 2019, 8:46 PM IST

shobha

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ಹೇರಿ, ಬ್ಲಾಕ್ ಮೇಲ್ ಮಾಡಿ ಸಿದ್ದರಾಮಯ್ಯ ಅವರು‌ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷ ನಾಯಕನ ಆಯ್ಕೆಗೆ ರಹಸ್ಯ ಮತದಾನ ನಡೆದರೆ ಸಿದ್ದರಾಮಯ್ಯ ಅವರಿಗೆ ಶಾಸಕರು ಮತ ಹಾಕುವುದಿಲ್ಲ. ಬೇಕಾದರೆ ಶಾಸಕರಿಂದ ರಹಸ್ಯ ಮತದಾನ ನಡೆಯಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರೇ ಸಿದ್ದರಾಮಯ್ಯ ಅವರನ್ನು ನಾಯಕ ಎಂದು ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಏಕಾಂಗಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಏಕೋಪಾಧ್ಯಾಯ ಶಾಲೆಯ ಮುಖ್ಯೋಪಾಧ್ಯಾಯರಂತಿದ್ದು, ಯಾವ ನಾಯಕರು ಅವರೊಂದಿಗಿಲ್ಲ. ಸರ್ಕಾರದ ಪತನಕ್ಕೆ ಕಾರಣರಾದ ಅವರು ಕಾಂಗ್ರೆಸ್‌ನ ಪತನಕ್ಕೂ ಕಾರಣರಾಗಲಿದ್ದಾರೆ ಎಂದು ಹೇಳಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಹಾಗಾಗಿ ಮೂರನೇ ಸ್ಥಾನದಲ್ಲಿದ್ದ ಜೆಡಿಎಸ್‌ ಮೂರನೇ ಬಾರಿಗೆ ಸರ್ಕಾರ ರಚಿಸಿತು. ಮೂರನೇ ಬಾರಿಯೂ ಆಡಳಿತ ನಡೆಸುವಲ್ಲಿ ಜೆಡಿಎಸ್‌ ವಿಫ‌ಲವಾಯಿತು. ಮೈತ್ರಿ ಸರ್ಕಾರವನ್ನು ಉಳಿಸಲು ಈಗಲ್ಟನ್‌ ರೆಸಾರ್ಟ್‌ನಲ್ಲಿ ಇದೇ ಬೈರತಿ ಬಸವರಾಜು, ಎಸ್‌.ಸೋಮಶೇಖರ್‌, ಎಂ.ಟಿ.ಬಿ.ನಾಗರಾಜ್‌ ರಕ್ಷಕರಾಗಿದ್ದು. ಆದರೆ ಅಧಿಕಾರ ಸಿಕ್ಕಾಗ ಕುಟುಂಬಕ್ಕೆ ಸೀಮಿತವಾಗುವ ಜೆಡಿಎಸ್‌ ನಡೆಯಿಂದ ಬೇಸರಗೊಂಡು ರಾಜೀನಾಮೆ ನೀಡಿದರು. ಆದರೆ ಇದೀಗ ಎಚ್‌.ಡಿ.ಕುಮಾರಸ್ವಾಮಿಯವರು ಬಿಜೆಪಿ ಅಭ್ಯರ್ಥಿಗಳ ಬಗ್ಗೆ ವಿನಾಕಾರಣ ಆರೋಪಿಸುತ್ತಿದ್ದಾರೆ. ಇನ್ನಾದರೂ ವೈಯಕ್ತಿಕ ಟೀಕೆ- ಟಿಪ್ಪಣಿ ಮಾಡುವುದನ್ನು ಬಿಟ್ಟು ಅವರು ಅಭಿವೃದ್ಧಿ ಕಾರ್ಯ, ಕೊಡುಗೆಗಳ ಆಧಾರದಲ್ಲಿ ಪ್ರಚಾರ ನಡೆಸಲಿ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಸೇರಿದಾಗಿನಿಂದ ತಾವೊಬ್ಬ ಹಿಂದುಳಿದ ವರ್ಗಗಳ ಚಾಂಪಿಯನ್‌ ಎಂಬಂತೆ ವರ್ತಿಸುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತಂದ ಎಚ್‌.ವಿಶ್ವನಾಥ್‌ ಅವರು ಪಕ್ಷ ಬಿಟ್ಟು ಹೋಗುವಂತೆ ಮಾಡಿದರು. ಮತ್ತೂಬ್ಬ ಹಿಂದುಳಿದ ವರ್ಗದ ನಾಯಕ ಎ.ಕೃಷ್ಣಪ್ಪ ಅವರು ಪಕ್ಷ ಬಿಡುವಂತೆ ಮಾಡಿದರು. ಇದೀಗ ವಾಲ್ಮೀಕಿ ಸಮುದಾಯದ ಬಿ.ಶ್ರೀರಾಮುಲು ಅವರನ್ನು ಸಿದ್ದರಾಮಯ್ಯ ಅವರು ಟಾರ್ಗೆಟ್‌ ಮಾಡುತ್ತಿದ್ದಾರೆ. ಶ್ರೀರಾಮುಲು ಅವರ ಜನಪ್ರಿಯತೆ ಸಹಿಸದೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದುಳಿದ ವರ್ಗದ ನಾಯಕರು, ಪರಿಶಿಷ್ಟ ಜಾತಿ, ಪಂಗಡದ ನಾಯಕರನ್ನು ಅವಮಾನ ಮಾಡುವುದೇ ಸಿದ್ದರಾಮಯ್ಯ ಅವರ ಜಾಯಮಾನ. ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌, ಬಿ.ಕೆ.ಹರಿಪ್ರಸಾದ್‌, ವೀರಪ್ಪ ಮೊಯಿಲಿ, ಕೆ.ಎಚ್‌.ಮುನಿಯಪ್ಪ, ಎಚ್‌.ಕೆ.ಪಾಟೀಲ್‌ ಎಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಮತ್ತೆ ಹಿಂದುಳಿದ ವರ್ಗದವರ ದಾರಿ ತಪ್ಪಿಸಲು ನೋಡುತ್ತಿದ್ದು, ಸಾಧ್ಯವಿಲ್ಲ ಎಂದು ತಿಳಿಸಿದರು.
ಉಪಚುನಾವಣೆಯಲ್ಲಿ 12 ಸ್ಥಾನ ಗೆದ್ದರೆ ಕಾಂಗ್ರೆಸ್‌ ಸರ್ಕಾರ ಬರಲಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಸದ್ಯ 64 ಕಾಂಗ್ರೆಸ್‌ ಶಾಸಕರಿದ್ದು, 12 ಸ್ಥಾನ ಗೆದ್ದರೂ 76ಕ್ಕೆ ಏರಿಕೆಯಾಗಲಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ 113 ಶಾಸಕರ ಬಲ ಅಗತ್ಯ. ವಕೀಲರಾಗಿದ್ದವರು, ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿರುವುದಾಗಿ ಹೇಳಿಕೊಳ್ಳುವ ಸಿದ್ದರಾಮಯ್ಯ ಅವರು ಯಾವ ಲೆಕ್ಕಾಚಾರದಲ್ಲಿ ಹೇಳುತ್ತಿದ್ದಾರೋ ಗೊತ್ತಿಲ್ಲ. ಜೆಡಿಎಸ್‌ ಬೆಂಬಲದಿಂದ ಸರ್ಕಾರ ರಚಿಸುತ್ತಾರೆಯೇ ಎಂಬುದನ್ನು ಅವರು ಹೇಳಬೇಕು ಎಂದು ತಿಳಿಸಿದರು.

ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ನಡೆಯಲು ಸಿದ್ದರಾಮಯ್ಯ ಅವರೇ ಕಾರಣ. ಕೆಎಫ್ಡಿ, ಎಸ್‌ಡಿಪಿಐ, ಪಿಎಫ್ಐನ ಕೊಲೆ ಆರೋಪಿಗಳ ಪ್ರಕರಣಗಳನ್ನು ಸಿದ್ದರಾಮಯ್ಯ ಹಿಂಪಡೆದಿದ್ದರು. ಟಿಪ್ಪು ಜಯಂತಿ ಆಚರಿಸಿ ಎಂದು ಮುಸಲ್ಮಾನರು ಕೇಳದಿದ್ದರೂ ಸಂಘರ್ಷ ಸೃಷ್ಟಿಸಲು, ಕೇವಲ ಮತ ಬ್ಯಾಂಕ್‌ ಲಾಭಕ್ಕಾಗಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದರು. ಸಮಾಜದಲ್ಲಿ ಭಯ, ಗೊಂದಲ ಸೃಷ್ಟಿಸುವ ಕೆಎಫ್ಡಿ, ಎಸ್‌ಡಿಪಿಐ, ಪಿಡಿಎಫ್ನಂತಹ ಸಂಘಟನೆಗಳು° ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದು, ರಾಜ್ಯಕ್ಕೆ ಹೆಚ್ಚು ಪ್ರಯೊಜನವಾಗಲಿದೆ. ಕಾಂಗ್ರೆಸ್‌, ಜೆಡಿಎಸ್‌ ಗೆದ್ದರು, ಸೋತರೂ ಪ್ರಯೋಜನವಿಲ್ಲ. ಹಾಗಾಗಿ ಮತದಾರರು ತಮ್ಮ ಮತವನ್ನು ವ್ಯರ್ಥ ಮಾಡಿಕೊಳ್ಳಬಾರದು ಎಂದು ತಿಳಿಸಿದರು. ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎ.ಎಚ್‌.ಆನಂದ್‌, ಸಹ ವಕ್ತಾರ ಅನ್ವರ್‌ಮಾಣಿಪ್ಪಾಡಿ ಉಪಸ್ಥಿತರಿದ್ದರು.

ಬಿ.ಎನ್‌.ಬಚ್ಚೇಗೌಡ ಅವರು ಬಿಜೆಪಿಗೆ ಸೇರಿದಾಗ ಟಿಕೆಟ್‌ ನೀಡಿ ಸಚಿವರನ್ನಾಗಿ ಮಾಡಲಾಗಿತ್ತು. ನಂತರ ಲೋಕಸಭಾ ಚುನಾವಣೆಗೆ ಟಿಕೆಟ್‌ ನೀಡಿ ಸಂಸದರನ್ನಾಗಿ ಮಾಡಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಶರತ್‌ ಬಚ್ಚೇಗೌಡ ಅವರಿಗೆ ಪ್ರಮುಖ ಮಂಡಳಿಯ ಅಧ್ಯಕ್ಷ ಸ್ಥಾನವನ್ನೂ ನೀಡಲಾಗಿತ್ತು. ಬಚ್ಚೇಗೌಡರ ಕುಟುಂಬಕ್ಕೆ ಪಕ್ಷ ಯಾವುದೇ ಅನ್ಯಾಯ ಮಾಡಿಲ್ಲ. ಹಾಗಿದ್ದರೂ ಯಾರ ಕುಮ್ಮಕ್ಕಿನಿಂದ ಅವರು ಬಂಡಾಯವಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

2014ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಚ್ಚೇಗೌಡರನ್ನು ಸೋಲಿಸಲೆಂದೇ ಎಚ್‌.ಡಿ.ಕುಮಾರಸ್ವಾಮಿಯವರು ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಶರತ್‌ ಬಚ್ಚೇಗೌಡ ಅವರಿಗೆ ಜೆಡಿಎಸ್‌ ಬೆಂಬಲ ಸೂಚಿಸಿದೆ. ಜೆಡಿಎಸ್‌ಗೆ ಅಭ್ಯರ್ಥಿ ಸಿಕ್ಕಿಲ್ಲ ಎಂದು ಬೆಂಬಲ ನೀಡಿದ್ದಾರೋ ಅಥವಾ ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಒಳ ಒಪ್ಪಂದ ನಡೆಯುತ್ತಿದೆಯೋ ಗೊತ್ತಿಲ್ಲ. ಅವರು ಬೆಂಬಲ ನೀಡಿರುವುದು ಉಳಿಸಲೋ, ಮುಗಿಸಲೋ ಎಂಬುದು ಗೊತ್ತಿಲ್ಲ. ಎಲ್ಲ ಬೆಳವಣಿಗೆಯನ್ನೂ ಹೈಕಮಾಂಡ್‌ ಗಮನಿಸುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.