Congress: “ಸಮನ್ವಯ” ಕ್ಕೆ ಪರಮೇಶ್ವರ್- ಸರಕಾರ, ಪಕ್ಷಗಳ ನಡುವೆ ಸಹಮತಕ್ಕೆ ಸಮಿತಿ
Team Udayavani, Oct 28, 2023, 10:06 PM IST
ಬೆಂಗಳೂರು: ಪಕ್ಷ ಮತ್ತು ಸರಕಾರಗಳ ನಡುವೆ ಸಮನ್ವಯ ಸಾಧಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಸಮನ್ವಯ’ದ ದಾಳ ಉರುಳಿಸಿದ್ದು, ಡಾ| ಜಿ. ಪರಮೇಶ್ವರ್ ಅವರನ್ನು ಮುನ್ನೆಲೆಗೆ ತಂದಿದ್ದಾರೆ ಎನ್ನಲಾಗುತ್ತಿದೆ.
ಪಕ್ಷ ಹಾಗೂ ಸರಕಾರಗಳ ನಡುವೆ ಕೆಲವು ವಿಷಯಗಳಲ್ಲಿ ತಮ್ಮ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ “ಉತ್ತರ-ದಕ್ಷಿಣ’ ರೀತಿ ಆಗುತ್ತಿರುವುದನ್ನು ಮನಗಂಡಿರುವ ಸಿಎಂ ಅವರು ಪರಮೇಶ್ವರ್ ಅವರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ ಕಟ್ಟಲು ಮುಂದಾಗಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳಿವೆ.
ಅಧಿಕಾರ ಹಂಚಿಕೆ ಸೂತ್ರದ ವಿಷಯದಲ್ಲಿ ಕಾಂಗ್ರೆಸ್ ಮನೆಯೊಳಗಿನ ಗುಟ್ಟು ಬೀದಿಗೆ ಬಂದು ಶಾಸಕರು, ಸಚಿವರು ಮನಬಂದಂತೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಅದರ ನಡುವೆ ಡಿಸಿಎಂ ಶಿವಕುಮಾರ್ ಏಕಪಕ್ಷೀಯ ನಿರ್ಧಾರಗಳಿಗೆ ಮೂಗುದಾರ ಹಾಕುವ ಸಲುವಾಗಿಯೇ ಸಿಎಂ ಸಮನ್ವಯ ಸಮಿತಿ ರಚನೆಗೆ ಮುಂದಾಗಿದ್ದಾರೆ. ಅದಕ್ಕಾಗಿ ಪರಮೇಶ್ವರ್ ಅವರನ್ನು ನೇಮಿಸಲು ಗಂಭೀರ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಅದರ ಭಾಗವಾಗಿಯೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರಾದ ಡಾ| ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಜತೆಗೆ ಔತಣಕೂಟದ ನೆಪದಲ್ಲಿ ಸದಾಶಿವನಗರದಲ್ಲಿರುವ ಡಾ|ಪರಮೇಶ್ವರ್ ನಿವಾಸಕ್ಕೆ ತೆರಳಿ ಒಂದು ತಾಸಿಗೂ ಹೆಚ್ಚು ಕಾಲ ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳು, ಸರಕಾರ ಹಾಗೂ ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಸಮಾಲೋಚಿಸಿ ಅಂತಿಮವಾಗಿ ಪರಮೇಶ್ವರ್ ಅವರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಪಟ್ಟದ ಆಹ್ವಾನ ನೀಡಿದ್ದಾರೆ ಹೇಳಲಾಗುತ್ತಿದೆ.
ಗೊಂದಲದ ಗೂಡು
ನಿಗಮ, ಮಂಡಳಿಗಳಿಗೆ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ನೇಮಕದ ವಿಚಾರದಲ್ಲಿ ಸಿಎಂ-ಡಿಸಿಎಂ ನಡುವೆ ಒಮ್ಮತ ಮೂಡದ ಕಾರಣ ಈಗ ಅದು ಗೊಂದಲದ ಗೂಡಾಗಿದೆ. ಸಚಿವ ಸ್ಥಾನ ಸಿಗದ ಹಿರಿಯ ಶಾಸಕರನ್ನು ಪ್ರಮುಖ ನಿಗಮ, ಮಂಡಳಿಗಳಿಗೆ ನೇಮಿಸಬೇಕೆಂದು ಸಿಎಂ ಒಂದು ಪಟ್ಟಿ ಸಿದ್ಧ ಮಾಡಿಕೊಂಡಿದ್ದರೆ, ಡಿಕೆಶಿ ಅವರ ಪಟ್ಟಿಯಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿರುವ ಶಾಸಕರ ಪಟ್ಟಿಯೇ ಹೆಚ್ಚಿತ್ತು ಎನ್ನಲಾಗಿದೆ. ಮೊದಲ ಕಂತಿನಲ್ಲಿ ಅಂದಾಜು 25ರಿಂದ 30 ಮಂದಿ ಶಾಸಕರಿಗೆ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆಗಳಿವೆ. ಈ ವಿಷಯದಲ್ಲಿ ಗೊಂದಲ ಉಂಟಾಗಿ ಪಟ್ಟಿ ಅಂತಿಮಗೊಳ್ಳದ ಕಾರಣ ಸಮಸ್ಯೆ ಕಗ್ಗಂಟಾಗಿಯೇ ಉಳಿದಿದೆ. ಹೀಗಾಗಿ ಇದು ಹೈಕಮಾಂಡ್ ಹಂತ ತಲುಪುವ ಮೊದಲೇ ಸ್ಥಳೀಯವಾಗಿಯೇ ಇದಕ್ಕೊಂದು ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಸಿಎಂ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚಿಸಿ ಅಂತಿಮವಾಗಿ ಪರಮೇಶ್ವರ್ ಅವರೇ ಇದಕ್ಕೆ ಸೂಕ್ತ ವ್ಯಕ್ತಿ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಬಹುತೇಕ ಪರಮೇಶ್ವರ್ ಅವರು ಈ ಹೊಸ ಜವಾಬ್ದಾರಿ ವಹಿಸಿಕೊಳ್ಳಲು ಸಮ್ಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಮಿತಿಯಲ್ಲಿ ಸಿಎಂ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷರು ಹಾಗೂ ಎಐಸಿಸಿ ಪ್ರತಿನಿಧಿಗಳು (ರಾಜ್ಯ ಉಸ್ತುವಾರಿ) ಇರಲಿದ್ದಾರೆ. ಆದರೆ ಈ ಸಮನ್ವಯ ಸಮಿತಿ ರಚನೆಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮತಿ ನೀಡುತ್ತಾರೆಯೇ ಎಂಬುದು ಕುತೂಹಲ ಕೆರಳಿಸಿದೆ.
ಕೋಟ್‌ಗಳು
ಇದು ಕೇವಲ ಔತಣಕೂಟವಷ್ಟೇ. ರಾಜಕೀಯ ಸಹಿತ ಬೇರೆ ಯಾವುದೇ ವಿಷಯ ಚರ್ಚೆ ಆಗಿಲ್ಲ.
ಡಾ| ಜಿ. ಪರಮೇಶ್ವರ್, ಗೃಹ ಸಚಿವ
—-
ಊಟದ ಜತೆಗೆ ರಾಜಕೀಯ ವಿಚಾರಗಳು ಚರ್ಚೆ ಆಗಿವೆ. ಅದರಲ್ಲಿ ಮುಚ್ಚುಮರೆ ಇಲ್ಲ. ನಾಲ್ಕಾರು ರಾಜಕಾರಣಿಗಳು ಸೇರಿದರೆ ರಾಜಕೀಯವೇ ಚರ್ಚೆ ಆಗುತ್ತದೆ.
-ಸತೀಶ್ ಜಾರಕಿಹೋಳಿ, ಲೋಕೋಪಯೋಗಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.