Congress: ಪ್ಯಾಲೆಸ್ತೀನ್ ಪರ ಕಾಂಗ್ರೆಸ್ ನಿರ್ಣಯ: ಬಿಜೆಪಿ ಆಕ್ರೋಶ
Team Udayavani, Oct 10, 2023, 11:53 PM IST
ಹೊಸದಿಲ್ಲಿ: ಇಸ್ರೇಲ್-ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವೆ ಯುದ್ಧ ಏರ್ಪ ಟ್ಟಿದೆ. ಈ ಸಮಯದಲ್ಲಿ ಪ್ಯಾಲೆಸ್ತೀನ್ ಅನ್ನು ಬೆಂಬಲಿಸಿ ಕಾಂಗ್ರೆಸ್ ನಿರ್ಣಯ ತೆಗೆದುಕೊಂಡಿದೆ. ಕಾಂಗ್ರೆಸ್‌ನ ಈ ನಿರ್ಧಾರದ ಕುರಿತು ಬಿಜೆಪಿ ನಾಯಕರ ಆಕ್ರೋಶ ತೀವ್ರಗೊಂಡಿದೆ.
“ಉಗ್ರರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಇಸ್ರೇಲ್ ಮೇಲೆ ಹಮಾಸ್ ಉಗ್ರರು ಹೇಗೆ ದಾಳಿ ಮಾಡಿದ್ದಾರೆ ಎಂಬುದನ್ನು ವೀಡಿಯೋಗಳ ಮೂಲಕ ನಾವೆಲ್ಲ ಗಮನಿಸಿದ್ದೇವೆ. ಆದರೆ ಕಾಂಗ್ರೆಸ್‌ನವರು ಈಗಲೂ ಹಮಾಸ್ ಮತ್ತು ಪ್ಯಾಲೆಸ್ತೀನ್ ಅನ್ನು ಬೆಂಬಲಿಸುತ್ತಿ ದ್ದಾರೆ. ಈ ಮೂಲಕ ಕಾಂಗ್ರೆಸ್ ಭಯೋ ತ್ಪಾದನೆಗೆ ಬೆಂಬಲ ನೀಡುತ್ತಿದೆ’ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಕಿಡಿಕಾರಿದ್ದಾರೆ.
“ಹಮಾಸ್-ಇಸ್ರೇಲ್ ಯುದ್ಧದಲ್ಲಿ ದೇಶದ ನಿಲುವನ್ನು ಬದಿಗೊತ್ತಿ, ಕಾಂಗ್ರೆಸ್ ಈ ರೀತಿ ನಿರ್ಣಯ ತೆಗೆದುಕೊಂಡಿರುವುದು ದುರ ದೃಷ್ಟಕರ. ಇದರಲ್ಲೂ ಕೂಡ ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಹಾಗೂ ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದೆ’ ಎಂದು ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ. ಶರ್ಮಾ ಆರೋಪಿಸಿದ್ದಾರೆ.
“ಕಾಂಗ್ರೆಸ್ ಯಾವಾಗಲೂ ಭಯೋತ್ಪಾದನೆಯನ್ನು ಬೆಂಬಲಿಸುವ ಬಗ್ಗೆ ಯಾರಿಗಾದರೂ ಅನುಮಾನವಿದ್ದರೆ, ಅದಕ್ಕೆ ಸ್ಪಷ್ಟ ಪುರಾವೆ ಇಲ್ಲಿದೆ. ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯ ಹೇಯ ಕೃತ್ಯವನ್ನು ಖಂಡಿಸುವ ಬದಲು, ಪ್ಯಾಲೆಸ್ತೀನ್ ಅನ್ನು ಬೆಂಬಲಿಸುವ ನಿರ್ಣಯವನ್ನು ಕಾಂಗ್ರೆಸ್ ಮುಸ್ಲಿಂ ಲೀಗ್ ತೆಗೆದುಕೊಂಡಿದೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಅಷ್ಟೊಂದು ಭಯೋತ್ಪಾದಕ ದಾಳಿಗಳು ಏಕೆ ನಡೆದವು ಎಂಬುದು ಈಗ ಸ್ಪಷ್ಟವಾಗಿದೆ’ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.