Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್ ಆರ್.
Team Udayavani, Apr 28, 2024, 1:01 AM IST
ಮಂಗಳೂರು: ವಿಪರೀತ ಬೆಲೆ ಏರಿಕೆಯಿಂದಾಗಿ ಜನ ರೋಸಿ ಹೋಗಿದ್ದು, ಕಾಂಗ್ರೆಸ್ ಗ್ಯಾರಂಟಿಯಿಂದ ಮನೆ ಬೆಳಗಿದೆ. ದ.ಕ. ಜಿಲ್ಲೆಯಲ್ಲಿ 33 ವರ್ಷಗಳ ಬಿಜೆಪಿಯ ದುರಾಡಳಿತ ಕೊನೆಗೊಳ್ಳಲಿದ್ದು, ಈ ಬಾರಿ ಸುಮಾರು 1.20 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕುಟುಂಬದ ರೀತಿಯಲ್ಲಿ ಕೆಲಸ ನಿರ್ವಹಿಸಿ ಈ ಚುನಾವಣೆಯನ್ನು ಎದುರಿಸಿದ್ದೆವು. ಚುನಾವಣೆಯ ದಿನ ನಾನು ಪ್ರತೀ ವಿಧಾನಸಭಾ ಕ್ಷೇತ್ರಗಳ ಕೆಲವು ಬೂತ್‌ಗಳಿಗೆ ಭೇಟಿ ನೀಡಿದ್ದೆ. ಇಡೀ ಚುನಾವಣ ಪ್ರಕ್ರಿಯೆಯಲ್ಲಿ ತುಳುನಾಡು ಗೆದ್ದಿದೆ. ಚುನಾವಣೆ ಸಮಯದಲ್ಲಿ ಅಭಿವೃದ್ಧಿ, ಕ್ಷೇತ್ರದ ಸಮಸ್ಯೆಗಳು ಮುನ್ನೆಲೆಗೆ ಬರಬೇಕು, ಆದರೆ ವಿರೋಧ ಪಕ್ಷವು ಕೇವಲ ಅಪಪ್ರಚಾರದಲ್ಲಿ ತೊಡಗಿತ್ತು. ಇದು ಅವರ ಹತಾಶೆ ಮನೋಭಾವ ವ್ಯಕ್ತಪಡಿಸುತ್ತದೆ ಎಂದರು.
ಜನರ ಉತ್ಸಾಹ ಗಮನಿಸಿದರೆ ಜನರು ಬದಲಾವಣೆಯನ್ನು ಬಯಸಿದ್ದು ನಿಜ. ಫಲಿತಾಂಶದ ದಿನ ಇದಕ್ಕೆ ಉತ್ತರ ಸಿಗಲಿದೆ. ಕಾಂಗ್ರೆಸ್ ಸಂಸದರ 40 ವರ್ಷಗಳ ಸಾಧನೆ ಮತ್ತು ಬಿಜೆಪಿಯ 33 ವರ್ಷಗಳ ಸಾಧನೆಯನ್ನು ಜನರು ತುಲನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಧನೆಯಿಂದಾಗಿ ಬಿಜೆಪಿಗರು ಭ್ರಮ ನಿರಸನಗೊಂಡಿದ್ದಾರೆ. ಚುನಾ ವಣೆಯ ಭಾಷಣದಲ್ಲಿ ನಾವು ಎಂದಿಗೂ ದ್ವೇಷ ಸಾರಲಿಲ್ಲ. ಜಾತಿ-ಧರ್ಮದ ಆಧಾರದಲ್ಲಿ ಎಂದೂ ಮತ ಕೇಳಿಲ್ಲ ಎಂದು ಹೇಳಿದರು.
ಇದು ಆರಂಭವಷ್ಟೇ
ಇದು ಕೇವಲ ಆರಂಭವಷ್ಟೆ. ವಾರದ ವಿಶ್ರಾಂತಿಯ ಬಳಿಕ ಪ್ರತೀ ಬ್ಲಾಕ್ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇವೆ. ಬಿಜೆಪಿಯ ಕೆಲವೊಂದು ಕಾರ್ಯಕರ್ತರು ಕಾಂಗ್ರೆಸ್ ಸೇರಲು ಬಯಸುತ್ತಿದ್ದಾರೆ. ಸಾಮರಸ್ಯ ಪುನರ್‌ಸ್ಥಾಪನೆ ಮೂಲಕ ಕಾಂಗ್ರೆಸ್‌ನ ಗತವೈಭವ ಮತ್ತೆ ಮರುಕಳಿಸಲಿದೆ ಎಂದು ಪದ್ಮರಾಜ್ ಹೇಳಿದರು.
ಪೂಜಾರಿ ಅವರನ್ನು ದುರುಪಯೋಗಪಡಿಸಿಲ್ಲ
ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಹರಿಸಿದ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು ಜನಾರ್ದನ ಪೂಜಾರಿ ಅವರೊಡನೆ ನಾನು ಅನೇಕ ವರ್ಷಗಳಿಂದ ಇದ್ದೇನೆ. ಎಂದಿಗೂ ಅವರನ್ನು ರಾಜಕೀಯ ಲಾಭ, ಸ್ವಾರ್ಥಕ್ಕೋಸ್ಕರ ದುರುಪಯೋಗ ಪಡಿಸಿಕೊಂಡಿಲ್ಲ. ಹಿರಿಯರಾದ ಅವರಲ್ಲಿ ಆಶೀರ್ವಾದ ಕೇಳಿದಾಗ ಶುಭ ಹಾರೈಸುವುದು ನಮ್ಮ ಸಂಸ್ಕೃತಿ. ಅದನ್ನು ಅವರು ಮಾಡಿದ್ದಾರೆ ಎಂದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಸುಭೋದಯ ಆಳ್ವ, ಮೊಹಮ್ಮದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.