ವೈಫ‌ಲ್ಯದ ವಿರುದ್ಧ ಹೋರಾಡಲು ಕೈ ತೀರ್ಮಾನ

Team Udayavani, Oct 10, 2019, 3:09 AM IST

vypalyada

ಬೆಂಗಳೂರು: ಪ್ರವಾಹ ಪರಿಹಾರ ವಿತರಣೆ, ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಹಾಗೂ ಕಲಾಪ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳ ನಿಷೇಧವನ್ನು ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. ಅಗತ್ಯ ಬಿದ್ದರೆ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಮಾಡುವ ಕುರಿತಂತೆಯೂ ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ.

ಆದರೆ, ಈ ಕುರಿತು ಚರ್ಚಿಸಲು ಗುರುವಾರ ಬೆಳಗ್ಗೆ ಮತ್ತೂಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ಅಧಿಕೃತ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹಕ್ಕೆ ಕೇಂದ್ರ ಸರ್ಕಾರ ನೀಡಿರುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಅಲ್ಲದೆ, ರಾಜ್ಯ ಸರ್ಕಾರ ಪ್ರತಿ ಕುಟುಂಬಕ್ಕೆ ನೀಡಿರುವ 10 ಸಾವಿರ ರೂ.ಎಲ್ಲರಿಗೂ ತಲುಪಿಲ್ಲ. ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತಾದರೂ ಯಾವುದೇ ರೀತಿಯ ಪರಿಹಾರ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ.

ಅದರೊಂದಿಗೆ ಬರ ಪರಿಸ್ಥಿತಿಯೂ ಉಂಟಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪರಿಹಾರ ವಿತರಿಸುವಲ್ಲಿ ಸಂಪೂರ್ಣ ವಿಫ‌ಲವಾಗಿವೆ ಎನ್ನುವುದನ್ನೇ ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಸದನದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ತಮ್ಮ ಬೇಡಿಕೆಗೆ ಸರ್ಕಾರ ಸರಿಯಾಗಿ ಸ್ಪಂದಿಸದೆ ಹೋದರೆ ವಿಧಾನಸಭೆಯಲ್ಲಿಯೇ ಅಹೋರಾತ್ರಿ ಧರಣಿ ಮಾಡುವ ಬಗ್ಗೆಯೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಇದಲ್ಲದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ನೀಡುತ್ತಿದ್ದ ಅನುದಾನ ಕಡಿತಗೊಳಿಸಿ, ಬಿಜೆಪಿ ಶಾಸಕರು ಹಾಗೂ ಕಾಂಗ್ರೆಸ್‌, ಜೆಡಿಎಸ್‌ನಿಂದ ಅನರ್ಹಗೊಂಡಿರುವ ಶಾಸಕರ ಕ್ಷೇತ್ರ ಗಳಿಗೆ ನೀಡುವ ಮೂಲಕ ತಾರತಮ್ಯ ಮಾಡುತ್ತಿದೆ. ಸರ್ಕಾ ರದ ಈ ತಾರತಮ್ಯ ಧೋರಣೆಯನ್ನು ಖಂಡಿಸಿ, ಸರಿ ಪಡಿಸಲು ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಇದೇ ವೇಳೆ, ದೃಶ್ಯ ಮಾಧ್ಯಮಗಳಿಗೆ ಕಲಾಪದ ಚಿತ್ರೀಕರಣಕ್ಕೆ ನಿರ್ಬಂಧ ಹೇರಿ, ಮಾಧ್ಯಮಗಳನ್ನು ದೂರ ಇಡುವ ಪ್ರಯತ್ನ ಮಾಡಲಾಗಿದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಯತ್ನ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದ್ದು, ಈ ಬಗ್ಗೆಯೂ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್‌ ಬೆಂಬಲದ ನಿರೀಕ್ಷೆ: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ನಂತರ ಎರಡೂ ಪಕ್ಷಗಳ ನಾಯಕರು ಬಹಿರಂಗವಾಗಿಯೇ ಆರೋಪ- ಪ್ರತ್ಯಾರೋಪ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಈಗ ವಿಧಾನ ಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಬೆಂಬಲದ ನಿರೀಕ್ಷೆಯಲ್ಲಿದೆ. ಪ್ರಮುಖವಾಗಿ ಪ್ರವಾಹ, ಬರ, ಶಾಸಕರ ಅನುದಾನ ಕಡಿತದಂತಹ ವಿಷಯಗಳು ಎರಡೂ ಪ್ರತಿಪಕ್ಷಗಳಿಗೂ ಅನ್ವಯ ಆಗುವುದರಿಂದ ಜೆಡಿಎಸ್‌ ಬೆಂಬಲ ದೊರೆತರೆ ಬಿಜೆಪಿಯನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಲು ಅನುಕೂಲವಾಗುತ್ತದೆ ಎಂಬ ನಿರೀಕ್ಷೆಯನ್ನು ಕಾಂಗ್ರೆಸ್‌ ನಾಯಕರು ಇಟ್ಟುಕೊಂಡಿದ್ದಾರೆ.

ಉಪ ಸಭಾಪತಿ ಬದಲಾವಣೆಗೆ ಆಗ್ರಹ: ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದರಿಂದ ಸಭಾಪತಿ ಸ್ಥಾನ ಕಾಂಗ್ರೆಸ್‌ಗೆ ದೊರೆತಿದ್ದು, ಜೆಡಿಎಸ್‌ ಉಪ ಸಭಾಪತಿ ಸ್ಥಾನ ಪಡೆದುಕೊಂಡಿದೆ. ಈಗ, ಜೆಡಿಎಸ್‌ನೊಂದಿಗಿನ ಮೈತ್ರಿ ಮುರಿದು ಬಿದ್ದಿರುವುದರಿಂದ ಉಪ ಸಭಾಪತಿ ಸ್ಥಾನವನ್ನೂ ಕಾಂಗ್ರೆಸ್‌ ಪಡೆದುಕೊಳ್ಳಲು ಅವಕಾಶ ಇರುವುದರಿಂದ ಜೆಡಿಎಸ್‌ನ ಉಪ ಸಭಾಪತಿಯಾಗಿರುವ ಧರ್ಮೇಗೌಡ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರು ನಾಯಕರ ಮೇಲೆ ಒತ್ತಡ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಉಪ ಸಭಾಪತಿಯನ್ನು ಪದಚ್ಯುತಿಗೊಳಿಸಲು ಕನಿಷ್ಠ 14 ದಿನ ಮುಂಚೆಯೇ ನೋಟಿಸ್‌ ನೀಡಬೇಕೆಂಬ ನಿಯಮ ಇರುವುದರಿಂದ ಮುಂದಿನ ಅಧಿವೇಶನಕ್ಕೂ ಮುಂಚೆಯೇ ನೋಟಿಸ್‌ ನೀಡಿ, ಉಪ ಸಭಾಪತಿಯನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ದಿನೇಶ್‌ ಗೈರು: ವಿದೇಶ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದರು. ಗುರುವಾರ ತಡ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದರಿಂದ ಗುರುವಾರ ಬೆಳಿಗ್ಗೆ ನಡೆಯುವ ಪಕ್ಷದ ಶಾಸಕಾಂಗ ಸಭೆ ಹಾಗೂ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.