ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ : ಸಿದ್ದರಾಮಯ್ಯ
Team Udayavani, Mar 14, 2024, 1:17 AM IST
ಉಡುಪಿ: ಸಂಸದ ಅನಂತ ಕುಮಾರ್ ಹೆಗಡೆ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿಯ ಗುಪ್ತ ಕಾರ್ಯಸೂಚಿ. ಅದಕ್ಕೆ ಯಾರು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು, ಹಿಂದುಳಿದವರು, ದಲಿತರು, ರೈತರು, ಕಾರ್ಮಿಕರು, ಮಹಿಳೆಯರು ಸಂವಿಧಾನ ಬದಲಾ ವಣೆಯಾದರೆ ಬದುಕಲು ಸಾಧ್ಯವಿಲ್ಲ. ಮನುಸ್ಮತಿ, ಅಸಮಾನತೆಗೆ ಮರಳಿ ಹೋಗಲು ಸಾಧ್ಯವಿಲ್ಲ ಎಂದರು.
ಕರಾವಳಿ ಅಭಿವೃದ್ಧಿಗೆ ಒತ್ತು
ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು.
ಬಿಜೆಪಿ ಜನರ ಭಾವನೆ ಜತೆ ಆಟವಾಡಿದರೆ ಕಾಂಗ್ರೆಸ್ ಜನರ ಬದುಕು ಕಟ್ಟುವ ಕೆಲಸ ಮಾಡು ತ್ತಿದೆ. ರಾಜ್ಯ ಸರಕಾರ ಗ್ಯಾರಂಟಿ ಯೋಜ ನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಗ್ಯಾರಂಟಿ ಯೋಜನೆಗಳು ರದ್ದಾಗು ವುದಿಲ್ಲ. ವಿಪಕ್ಷಗಳು ಅನಾವಶ್ಯಕ ಟೀಕೆ ಮಾಡುತ್ತಿವೆ. ಅವುಗಳ ಸುಳ್ಳು ಪ್ರಚಾರಕ್ಕೆ ತಮ್ಮ ಮತಗಳ ಮೂಲಕ ತಡೆ ಹಾಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಅಂಶುಮಾನ್, ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು, ಐಜಿಪಿ ಬೋರಲಿಂಗಯ್ಯ, ಜಿ.ಪಂ. ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಶೆಟ್ಟಿನಿರೂಪಿಸಿದರು.
ಸಿಎಂ ಜತೆಗೆ ಬಂದ ಹೆಗ್ಡೆ
ಮಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಬಂದು ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾಗತಿಸಲಾಯಿತು. ವಿಶೇಷವೆಂದರೆ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಜಯಪ್ರಕಾಶ್ ಹೆಗ್ಡೆ ಕೂಡ ಸಿಎಂ ಅವರೊಂದಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಸಚಿವರು ಜತೆಗಿದ್ದರು. ಮಧ್ಯಾಹ್ನದ ಊಟಕ್ಕೆ ಮುಖ್ಯಮಂತ್ರಿ ನೀರ್‌ದೋಸೆ, ನಾಟಿಕೋಳಿ ಸಾರು ಹಾಗೂ ಮುದ್ದೆ ಸವಿದರು.
ಜಿಲ್ಲೆಯ ಎಲ್ಲ ಗ್ರಾ.ಪಂ., ನಗರಸ್ಥಳೀಯ ಸಂಸ್ಥೆಗಳಿಂದ ಜಿಲ್ಲಾಡಳಿತವೇ ಉಚಿತ ಬಸ್ ವ್ಯವಸ್ಥೆ ಮಾಡಿ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತಂದಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು. ಫಲಾನುಭವಿಗಳಿಗೆ ಊಟ, ಉಪಾಹಾರದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.