Karnataka: ಆನೆ ಹಾವಳಿ ತಡೆಗೆ 120 ಕಿ.ಮೀ.ರೈಲ್ವೆ ಬ್ಯಾರಿಕೇಡ್ ನಿರ್ಮಾಣ- ಈಶ್ವರ ಖಂಡ್ರೆ
Team Udayavani, Dec 14, 2023, 9:31 PM IST
ಬೆಳಗಾವಿ: ರಾಜ್ಯದಲ್ಲಿ ಆನೆಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಅಂದಾಜು 200 ಕೋಟಿ ರೂ.ವೆಚ್ಚದಲ್ಲಿ ಸುಮಾರು 120 ಕಿ.ಮೀ.ನಷ್ಟು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಟಿ.ಡಿ.ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಆನೆಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಸ್ತುತ ಸುಮಾರು 6,395 ಆನೆಗಳಿದ್ದು, ದೇಶದಲ್ಲಿಯೇ ಇದು ಅತಿ ಹೆಚ್ಚಿನದಾಗಿದೆ. ಆನೆಗಳ ತಡೆಗೆ ಕಂದಕ, ತಂತಿಬೇಲಿ ನಿರ್ಮಾಣ ಫಲ ನೀಡಿಲ್ಲ. ಈಗ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದ್ದು, ಬ್ಯಾರಿಕೇಡ್ ನಿರ್ಮಾಣ ಮಾಡುವ ಮೊದಲ ರಾಜ್ಯ ನಮ್ಮದಾಗಿದೆ.
ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷ ತಡೆ ನಿಟ್ಟಿನಲ್ಲಿ ಕ್ರಮಕ್ಕೆ ಬಜೆಟ್‌ನಲ್ಲಿ 100 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿತ್ತು. ಆನೆ ಹಾವಳಿಯಿಂದ ಬೆಳೆ ನಷ್ಟ, ಪ್ರಾಣ ಹಾನಿ ಹೆಚ್ಚುತ್ತಿದ್ದರಿಂದ ಮುಖ್ಯಮಂತ್ರಿ ಜತೆಗೆ ಚರ್ಚಿಸಿ 120 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಆನೆಗಳ ಹಾವಳಿ ತಡೆ ಹಾಗೂ ಪರಿಹಾರಕ್ಕೆ ರಾಜ್ಯದ ಏಳು ಕಡೆ ಕಾರ್ಯಪಡೆ ರಚಿಸಲಾಗಿದ್ದು, ಶಾಸಕರ ಕೋರಿಕೆಯಂತೆ ಶೃಂಗೇರಿಯಲ್ಲೂ ಕಾರ್ಯಪಡೆ ರಚನೆಗೆ ಕ್ರಮ ಕೈಗೊಳ್ಳಲಾಗುವುದು. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7.1ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಬೇಡಿಕೆ ಇದ್ದು, 3-4 ಕಿ.ಮೀ.ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದರು.
ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ನನ್ನ ಕ್ಷೇತ್ರ ವ್ಯಾಪ್ತಿಯ 18 ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಿದೆ. ಇದರ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಅವಶ್ಯ ಎಂದರು. ಶಾಸಕರಾದ ಆರಗ ಜ್ಞಾನೇಂದ್ರ, ಹರೀಶ ಪೂಂಜ, ತಮ್ಮಯ್ಯ ಮುಂತಾದ ಶಾಸಕರು ಇದಕ್ಕೆ ಧ್ವನಿಗೂಡಿಸಿದರು.
ಅರಣ್ಯ ಗಡಿ ಗುರುತು; ಮನೆ-ದೇಗುಲಗಳಿಗೆ ವಿನಾಯಿತಿಗೆ ಸೂಚನೆ: ಸಚಿವ ಖಂಡ್ರೆ
ಬೆಳಗಾವಿ: ಅರಣ್ಯದ ಗಡಿ ಸಮೀಕ್ಷೆ ಹಾಗೂ ಮೀಸಲು ಅರಣ್ಯ ಪ್ರದೇಶ ಗುರುತಿಸುವ ವೇಳೆ ಮೊದಲಿನಿಂದಲು ವಾಸವಿದ್ದ ಮನೆ, ದೇವಸ್ಥಾನ, ಶ್ಮಶಾನಗಳನ್ನು ಹೊರಗಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರ ಪಶ್ನೆಗೆ ಉತ್ತರಿಸಿದ ಅವರು, ಪ್ರತಿ 10 ವರ್ಷಗಳಿಗೊಮ್ಮೆ ಅರಣ್ಯ ಗಡಿ ಗುರುತಿಸುವ ಕಾರ್ಯ ನಡೆಯುತ್ತದೆ. ಗಡಿ ಗುರುತಿಸುವಾಗ ಕೃಷಿ ಭೂಮಿ, ಮನೆ, ದೇಗುಲಗಳಿಗೆ ವಿನಾಯಿತಿ ನೀಡಲು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಹೋಗಿ ಪರಿಶೀಲಿಸಲು ಹಾಗೂ ಕಂದಾಯ ಇಲಾಖೆ ಜತೆಗೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 60-70 ಗ್ರಾಮಗಳ ವ್ಯಾಪ್ತಿಯನ್ನು ಮೀಸಲು ಅರಣ್ಯ ಪ್ರದೇಶವೆಂದು ಹೇಳಿ ಗಡಿ ಕಲ್ಲು ಹಾಕಲಾಗಿದೆ. ಮಹಾರಾಜರ ಕಾಲದಿಂದಲೂ ಕೃಷಿ ಮಾಡಿಕೊಂಡ ರೈತರು, ಹಲವಾರು ವರ್ಷಗಳಿಂದ ಇರುವ ಮನೆ, ದೇಗುಲ, ಶ್ಮಶಾನಗಳೂ ಇದರ ವ್ಯಾಪ್ತಿಯೊಳಗಿದೆ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ವೆಯಲ್ಲಿ ಕಂದಾಯ ಇಲಾಖೆ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದರೆ ಅದನ್ನು ಕಂದಾಯ ಇಲಾಖೆಗೆ ವಾಪಸ್ ನೀಡಲಾಗುವುದು. ಸಾಗುವಳಿ ಭೂಮಿ ಅರಣ್ಯ ಇಲಾಖೆ ಭೂಮಿಯ 100 ಮೀಟರ್ ಅಂತರದೊಳಗಿದ್ದರೆ ಹಾಗೂ ಅಲ್ಲಿ ಗಿಡಮರಗಳಿದ್ದರೆ ರಾಜ್ಯ ಮತ್ತು ಕೇಂದ್ರ ಅರಣ್ಯ ಇಲಾಖೆಯ ಪರವಾನಿಗೆ ಪಡೆದುಕೊಳ್ಳಬೇಕೆಂಬ ನಿಯಮ ಇದ್ದು, ಇದು ಬಹುತೇಕರಿಗೆ ತಿಳಿದಿಲ್ಲ ಎಂದರು.
ರಬ್ಬರ್ ಕಾರ್ಮಿಕರಿಗೆ ಬೋನಸ್ ನೀಡಿ: ಭಾಗೀರಥಿ
ಸುಳ್ಯ ಶಾಸಕಿ ಭಾಗೀರಥಿ ಅವರು ರಬ್ಬರ್ ಕಾರ್ಮಿಕರಿಗೆ ಬೋನಸ್ ಹಾಗೂ ಆನೆ ದಾಳಿಯಿಂದ ಮೃತಪಟ್ಟವರಿಗೆ 25 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಬ್ಬರ್ ಕಾರ್ಮಿಕರಿಗೆ ಶೇ.8.33ರಷ್ಟು ಬೋನಸ್ ನೀಡಲಾಗಿದೆ. ಕಾರ್ಖಾನೆ ನಷ್ಟದಲ್ಲಿದ್ದರೂ ಬೋನಸ್ ನೀಡಲಾಗಿದೆ. ಆನೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.