ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ಪೈಪೋಟಿ
Team Udayavani, Sep 17, 2019, 3:08 AM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 13 ಅಕಾಡೆಮಿ ಮತ್ತು 3 ಪ್ರಾಧಿಕಾರಗಳ ಅಧ್ಯಕ್ಷರ ಸ್ಥಾನಕ್ಕೆ ಭಾರೀ ಪೈಪೋಟಿ ಕಂಡು ಬಂದಿದ್ದು, ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರಿಂದಲೂ ಸುಮಾರು 150ಕ್ಕೂ ಹೆಚ್ಚು ಮಂದಿಯ ಶಿಫಾರಸು ಪತ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರವಾನೆಯಾಗಿದೆ.
ಅದರಲ್ಲೂ ರಾಜ್ಯ ಸಚಿವ ದರ್ಜೆ ಸ್ಥಾನಮಾನವಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿರುವುದು ತಿಳಿದು ಬಂದಿದೆ. ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ಆಯ್ಕೆ ಸಂಬಂಧಿಸಿದಂತೆ ಹೆಚ್ಚಿನ ಸಂಖ್ಯೆಯ ಶಿಫಾರಸು ಪತ್ರಗಳು ಇಲಾಖೆ ಕೈ ಸೇರಿವೆ. ಸಚಿವರಾದ ಸಿ.ಟಿ.ರವಿ ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿ, ಅಂತಿಮ ಪಟ್ಟಿ ಸಿದ್ಧಪಡಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕವಿ ದೊಡ್ಡರಂಗೇಗೌಡ, ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ನಿವೃತ್ತ ಐಎಎಸ್ ಅಧಿಕಾರಿ ಸಿ. ಸೋಮ ಶೇಖರ, ವೈ.ಕೆ.ಮುದ್ದುಕೃಷ್ಣ ಸೇರಿ ಹಲವರ ಹೆಸರು ಮುಂಚೂಣಿಯಲ್ಲಿವೆ. ಇನ್ನು, ಜಾನಪದ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗದ ಜಾನಪದ ವಿದ್ವಾಂಸ ಬಸವರಾಜ ನಲ್ಲಿಸರ, ಹಿರಿಯ ಜಾನಪದ ಕಲಾವಿದ ಅಪ್ಪಗೆರೆ ತಿಮ್ಮರಾಜು, ವೇಮಗಲ್ ಡಿ.ನಾರಾಯಣಸ್ವಾಮಿ, ಚಿಕ್ಕಮಗಳೂರಿನ ಸೋಬಾನೆ ಪದ ಹಾಡುಗಾರ್ತಿ ಲಕ್ಷ್ಮೀದೇವಿ, ಜಾನಪದ ಕಲಾವಿದ ಜೋಗಿಲ ಸಿದ್ದರಾಜು ಅವರ ಹೆಸರು ಕೂಡ ಕೇಳಿ ಬಂದಿದೆ.
ಬಯಲಾಟ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಧಾರವಾಡದ ಬಸವಲಿಂಗಯ್ಯ ಹಿರೇಮಠ, ಶಿವಾನಂದ ಸಿಳ್ಳಿಕೇರಿ ಸೇರಿ ಇನ್ನೂ ಕೆಲವು ಹಿರಿಯ ಬಯಲಾಟ ಕಲಾವಿದರ ಹೆಸರು ಕೇಳಿ ಬಂದಿವೆ. ನಾಟಕ ಅಕಾಡೆಮಿ ಅಧ್ಯಕ್ಷರ ಸ್ಥಾನಕ್ಕೆ ಧಾರವಾಡ ಮೂಲದ ಗಂಗಾಧರ ಪಾಟೀಲ್ ಕುಲಕರ್ಣಿ, ರಂಗಾಯಣದ ಮಾಜಿ ನಿರ್ದೇಶಕ ಸುಭಾಷ್ ನರೇಂದ್ರ, ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ಮುಖ್ಯಸ್ಥ ಸಿ.ಬಸವಲಿಂಗಯ್ಯ ಅವರ ಹೆಸರು ಮುಂಚೂಣಿಯಲ್ಲಿವೆ.
ಸಾಹಿತ್ಯ ಅಕಾಡೆಮಿ, ಯಕ್ಷಗಾನ ಅಕಾಡೆಮಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಲವು ವಿದ್ವಾಂಸರು ಪೈಪೋಟಿ ನಡೆಸಿದ್ದು, ಬಾಗಲಕೋಟೆ ಮೂಲದ ಕಲಾವಿದ ರಂಗನಾಥ್ ಬಡಿಗೇರ ಅವರ ಹೆಸರು ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದೆ.
ರಂಗಭೂಮಿ ಸಮಾನಮನಸ್ಕರ ಸಭೆ
ಬೆಂಗಳೂರು: ಅವಧಿ ಪೂರ್ಣಗೊಳ್ಳುವ ಮೊದಲೇ ವಿವಿಧ ಅಕಾಡೆಮಿ, ಪ್ರಾಧಿಕಾರದ ಅಧ್ಯಕ್ಷರ ಮತ್ತು ರಂಗಾಯಣ ನಿರ್ದೇಶಕರ ನಾಮ ನಿರ್ದೇಶನ ರದ್ದು ಪಡಿಸಿರುವ ಸರ್ಕಾರದ ಧೋರಣೆ ವಿರೋಧಿಸಿ, ರಂಗಭೂಮಿಯ ಸಮಾನಮನಸ್ಕರು ಸೋಮವಾರ ಸಭೆ ನಡೆಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಜೆ.ಲೋಕೇಶ್, ರಂಗಕರ್ಮಿ ರಾಮಕೃಷ್ಣ ಬೇಳೂ¤ರು, ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ಸಿ.ಬಸವಲಿಂಗಯ್ಯ, ಶಶಿಕಾಂತ್‌ಯಡಹಳ್ಳಿ, ವಿ.ಎಂ.ನಾಗೇಶ್, ಚಂದ್ರಕಾಂತ್ ಸೇರಿದಂತೆ ಹಲವು ರಂಗಕರ್ಮಿಗಳು ಭಾಗವಹಿಸಿದ್ದರು.
ಸಭೆ ಬಳಿಕ ಮಾತನಾಡಿದ ಜೆ.ಲೋಕೇಶ್, ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನಾ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು ಎಂದು ಹೇಳಿದರು. ರಂಗಾಯಣ ನಿರ್ದೇಶಕರ ಮತ್ತು ವಿವಿಧ ಅಕಾಡೆಮಿ ಅಧ್ಯಕ್ಷರ ನಾಮನಿರ್ದೇಶನ ರದ್ದತಿ ಸಂಬಂಧ ಈ ಹಿಂದಿನ ಸರ್ಕಾರ ಮತ್ತು ಈಗಿನ ಸರ್ಕಾರ ತೆಗೆದುಕೊಂಡಿರುವ ಕ್ರಮ ಸರಿಯಾಗಿಲ್ಲ. ಮುಂದೆ ಬರುವ ಅಧ್ಯಕ್ಷರಿಗೆ ಮತ್ತು ರಂಗಾಯಣ ನಿರ್ದೇಶಕರಿಗೆ ಹೀಗಾಗಬಾರದು ಎಂಬುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಆಯ್ಕೆ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆದರೆ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಪ್ರಾದೇಶಿಕ ಸಮಾನತೆಗೆ ಮನ್ನಣೆ ನೀಡಲಾಗುವುದು.
-ಸಿ.ಟಿ ರವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
* ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.