ಮಲೆನಾಡಲ್ಲಿ ಮುಂದುವರಿದ ಹುಬ್ಬೆಯ ಅಬ್ಬರ

Team Udayavani, Sep 9, 2019, 3:10 AM IST

malenad

ಬೆಂಗಳೂರು: ಮಲೆನಾಡು ಭಾಗದಲ್ಲಿ ಹುಬ್ಟಾ ಮಳೆಯ ಅಬ್ಬರ ಹೆಚ್ಚಿದೆ. ಕರಾವಳಿ, ಕೊಡಗು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ, ನೆರೆಯ ಮಹಾರಾಷ್ಟ್ರ, ಬೆಳಗಾವಿ ಜಿಲ್ಲೆಯ ಖಾನಾಪುರ, ಕಣಕುಂಬಿ ಭಾಗದಲ್ಲಿ ಸುರಿಯು ತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪನದಿಗಳಲ್ಲಿ ನೆರೆಯ ಪ್ರಮಾಣ ಹೆಚ್ಚಿದ್ದು, ತೀರದ ಜನರಲ್ಲಿ ಆತಂಕ ಮೂಡಿಸಿದೆ.

ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸಿದ್ದಾಪುರ ಮತ್ತು ಕೊಟ್ಟಿಗೆಹಾರದಲ್ಲಿ ರಾಜ್ಯ ದಲ್ಲಿಯೇ ಅಧಿಕವೆನಿಸಿದ 14 ಸೆಂ.ಮೀ.ಗಳಷ್ಟು ಮಳೆ ಸುರಿಯಿತು. ಈ ಮಧ್ಯೆ, ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಕಚೇರಿಯ ಇಲಾಖೆ ತಿಳಿಸಿದೆ.

21 ಸೇತುವೆಗಳು ಮುಳುಗಡೆ: ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣಾ, ವೇದಗಂಗಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಒಳಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಈಗಾಗಲೇ ಚಿಕ್ಕೋಡಿ ತಾಲೂಕಿನಲ್ಲಿ ಆರು ಸೇತುವೆಗಳು ಮುಳುಗಡೆ ಯಾಗಿದ್ದರೆ, ರಾಯಬಾಗ ತಾಲೂಕಿನಲ್ಲಿ ಕುಡಚಿ ಸೇತುವೆ ಜಲಾವೃತವಾಗಿ ಸಂಚಾರ ಸ್ಥಗಿತಗೊಂಡಿದೆ.

ಘಟಪ್ರಭಾ ನದಿ ವ್ಯಾಪ್ತಿಯಲ್ಲೂ ಪ್ರವಾಹ ಸಂಕಷ್ಟ ಮುಂದುವರಿದಿದ್ದು, ಹಿಡಕಲ್‌ ಜಲಾಶ ಯಕ್ಕೆ 30 ಸಾವಿರ ಕ್ಯೂಸೆಕ್‌ ನೀರು ಹರಿದು ಬರು ತ್ತಿದೆ. ಇದರಿಂದಾಗಿ ಗೋಕಾಕ್‌ ಪಟ್ಟಣ, ಅಡ ಬಟ್ಟಿ, ಢವಳೇಶ್ವರ, ಮುಸಗುಪ್ಪಿ. ಹುಣಶ್ಯಾಳ ಗ್ರಾಮಗಳ ಜನರಲ್ಲಿ ಪ್ರವಾಹದ ಆತಂಕ ಉಂಟಾ ಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ತೀರದ ಗ್ರಾಮಗಳ ಜನರು ತಮ್ಮ ಸಾಮಗ್ರಿಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಮಲಪ್ರಭಾ ನದಿಯಲ್ಲಿಯೂ ಪ್ರವಾಹ ಬಂದಿದ್ದು, ರಾಮದುರ್ಗ ತಾಲೂಕಿನ ಸುನ್ನಾಳ, ಹಂಪಿಹೋಳಿ ಹಾಗೂ ಕಿಲಬನೂರ ಗ್ರಾಮಗಳಿಗೆ ನೀರು ನುಗ್ಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಮಲಪ್ರಭಾ ಜಲಾಶಯಕ್ಕೆ 22,600 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಎದುರಾಗಿದ್ದು, ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ನಂ.218 ಸೇರಿ ಜಿಲ್ಲೆಯಲ್ಲಿ 14 ಸೇತುವೆಗಳು ಜಲಾವೃತಗೊಂಡಿವೆ. ಮುಧೋಳ ತಾಲೂಕಿನ ನಂದಗಾವ ಮತ್ತು ರಬಕವಿ-ಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮಗಳ ಸುತ್ತ ನೀರು ಬಂದಿದ್ದು, ಅಲ್ಲಿನ ಜನರನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ.

ನಾಲ್ವರ ಸಾವು, ಮೂವರಿಗೆ ಗಾಯ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಹಾಗೂ ಉಡುಪಿ ಜಿಲ್ಲೆ ಕೊಲ್ಲೂರುಗಳಲ್ಲಿ ಸಂಭವಿಸಿದ ಪ್ರತ್ಯೇಕ ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ನಾಲ್ವರು ಅಸುನೀಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ಮಲಗಿದ್ದಾಗ ಮನೆಯ ಗೋಡೆ ಕುಸಿದು ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕ ಗುರುಸ್ವಾಮಿ (40) ಎಂಬುವರು ಮೃತಪಟ್ಟಿದ್ದಾರೆ. ಇವರ ಪತ್ನಿ ಗಂಗಮ್ಮ, ಮಕ್ಕಳಾದ ಮಂಜುನಾಥ, ಭೂಮಿಕಾ ಗಾಯಗೊಂಡಿದ್ದಾರೆ.

ಪುತ್ತೂರು ಹೊರವಲಯದ ಕುಂಜೂರು ಪಂಜ ಸಮೀಪದ ಮೇಗಿನಪಂಜದಲ್ಲಿ ಉಮೇಶ್‌ ಪೂಜಾರಿ ಎಂಬುವರು ಹಟ್ಟಿಯಿಂದ ಗೊಬ್ಬರ ತೆಗೆಯುತ್ತಿದ್ದಾಗ ಹಟ್ಟಿಯ ಗೋಡೆ ಕುಸಿದು ಅಲ್ಲಿಯೇ ನಿಂತಿದ್ದ ಅವರ ತಾಯಿ ವಾರಿಜಾ (86)ಮೃತಪಟ್ಟಿದ್ದಾರೆ. ಸಂಜೆ ಸುರಿದ ವಿಪರೀತ ಮಳೆಯಿಂದಾಗಿ ಗೋಡೆ ಹಸಿಯಾಗಿತ್ತು. ಈ ಮಧ್ಯೆ, ಪುತ್ತೂರು ಸಮೀಪದ ಅಜಲಡ್ಕ ಅರ್ತಿಮೂಲೆಯಲ್ಲಿ ಪುರಂದರ (50) ಎಂಬುವರು ಆನಾಜೆ ಬಳಿಯ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಇದೇ ವೇಳೆ, ಕೊಲ್ಲೂ ರು ಸಮೀಪ ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ನೆರೆ ವೀಕ್ಷಣೆಗೆ ಪ್ರಧಾನಿ ಭೇಟಿ ಅಗತ್ಯವಿಲ್ಲ
ಹುಬ್ಬಳ್ಳಿ: ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈಗಾಗಲೇ ಭೇಟಿ ನೀಡಿ ಸಮೀಕ್ಷೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಬೇಕೆಂದೇನಿಲ್ಲ. ಕಾಂಗ್ರೆಸ್‌ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲುಂಟಾದ ಅತಿವೃಷ್ಟಿ ಕುರಿತು ಈಗಾಗಲೇ ಕೇಂದ್ರದ ಅಧ್ಯಯನ ತಂಡ ಹಾಗೂ ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ಮಾಡುತ್ತಿದೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ವತಃ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿದ್ದಾರೆ.

ನೆರೆ ಪರಿಹಾರ ಸಮರ್ಪಕವಾಗಿ ನಡೆಯುತ್ತಿದೆ. ನೆರೆ ಪರಿಹಾರಕ್ಕೆ ಸಂಬಂಧಿಸಿದ ಸಚಿವರೇ ಭೇಟಿ ನೀಡಿ ಸಮೀಕ್ಷೆ ಮಾಡಿದಾಗ ಪ್ರಧಾನಿ ಭೇಟಿಯಾಗುವ ಅಗತ್ಯವಿಲ್ಲ ಎಂದರು. ನೆರೆ ಸಂತ್ರಸ್ತರಿಗೆ 10 ಸಾವಿರ ರೂ. ಕೊಟ್ಟಿದ್ದೇ ದೊಡ್ಡದು ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಅವರ ಮಾತಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಶೇ.25 ಮನೆ ಕುಸಿದವರಿಗೆ 25 ಸಾವಿರ ರೂ., ಶೇ.75 ಕುಸಿದವರಿಗೆ 1 ಲಕ್ಷ ರೂ. ಕೊಡುತ್ತಿದ್ದೇವೆ. ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಲಾಗುತ್ತಿದೆ ಎಂದರು.

ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರರ ರಕ್ಷಣೆ
ಗದಗ: ನರಗುಂದ ತಾಲೂಕಿನ ಕೊಣ್ಣೂರಿ ನಲ್ಲಿ ಭಾನುವಾರ ಉಮೇಶ ಹಾಗೂ ಪ್ರವೀಣ ಎಂಬುವರು ಬಾದಾಮಿ ಕಡೆ ಯಿಂದ ಕೊಣ್ಣೂರು ಗ್ರಾಮಕ್ಕೆ ಮಲಪ್ರಭಾ ನದಿಯ ಪ್ರವಾಹ ಲೆಕ್ಕಿಸದೆ ಬೈಕ್‌ ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ, ಮಲಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ಬೈಕ್‌ ಸಮೇತ ಕೊಚ್ಚಿ ಹೋಗು ತ್ತಿದ್ದರು. ಇದನ್ನು ಗಮನಿಸಿದ ಜೆಸಿಬಿ ಚಾಲಕ ಸದ್ದಾಂ ಎಂಬುವರು, ಜೆಸಿಬಿ ಸಹಾಯ ದಿಂದ ಬೈಕ್‌ ಅಡ್ಡಗಟ್ಟುವ ಮೂಲಕ ಕೊಚ್ಚಿ ಹೋಗುತ್ತಿದ್ದ ಯುವಕರನ್ನು ಬೈಕ್‌ ಸಮೇತ ದಡ ಸೇರಿಸಿದ್ದಾರೆ.

ಹಂಪಿ ಸ್ಮಾರಕಗಳು ಜಲಾವೃತ
ಹೊಸಪೇಟೆ: ತುಂಗ ಭದ್ರಾ ಜಲಾಶಯದ 28 ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಹರಿಸಲಾಗುತ್ತಿದ್ದು, ಹಂಪಿಯ ಪುರಂದರ ಮಂಟಪ ಸಂಪೂರ್ಣ ಮುಳುಗಿದೆ. ವೈದಿಕ ಮಂಟಪ, ಜನಿವಾರ ಮಂಟಪ ಸೇರಿ ಹಲವು ಸ್ಮಾರಕಗಳ ಬಳಿ ನೀರು ನಿಂತಿದೆ. ರಾಮ-ಲಕ್ಷ್ಮಣ ದೇಗುಲಕ್ಕೆ ತೆರಳುವ ಪಾದ ಚಾರಿ ಮಾರ್ಗ, ಹಂಪಿಯಿಂದ ವಿರೂಪಾಪುರ ಗಡ್ಡೆಗೆ ತೆರಳುವ ಮಾರ್ಗ ಜಲಾವೃತಗೊಂಡಿದೆ. ಕಂಪ್ಲಿ, ಗಂಗಾವತಿ ಮಾರ್ಗದ ಸೇತುವೆ ಮುಳುಗುವ ಹಂತ ತಲುಪಿದ್ದು, ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.