ದೇಗುಲ, ಪ್ರವಾಸಿ ತಾಣಗಳಲ್ಲಿ ಮುಂದುವರಿದ ಜನರ ದಟ್ಟಣೆ
Team Udayavani, Apr 17, 2022, 6:35 AM IST
ಬೆಳ್ತಂಗಡಿ: ಸರಣಿ ರಜೆಯ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳು ಹಾಗು ದೇವಸ್ಥಾನಗಳಲ್ಲಿ ಜನರ ದಟ್ಟಣೆ ಶನಿವಾರವೂ ಮುಂದುವರಿದಿದೆ.
ಕುಕ್ಕೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಸಹಿತ ಎಲ್ಲೆಡೆ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಷು ಜಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಭಕ್ತರು ಆಗಮಿಸುತ್ತಿದ್ದಾರೆ. ಸುರ್ಯ ಸದಾಶಿವರುದ್ರ ದೇವಸ್ಥಾನ, ಸೌತಡ್ಕ ಮಹಾಗಣಪತಿ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.
ಕುಕ್ಕೆಯಲ್ಲಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಶನಿವಾರ ದೂರದೂರುಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಪಾರ್ಕಿಂಗ್ ಪ್ರದೇಶದಲ್ಲೂ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂತು.
ಇದನ್ನೂ ಓದಿ:ಕಲ್ಲಂಗಡಿ ಧ್ವಂಸ ಪ್ರಕರಣ : ನಾಲ್ವರು ಆರೋಪಿಗಳಿಗೆ ಜಾಮೀನು
ಪಣಂಬೂರು ಬೀಚ್‌ನಲ್ಲಿ ಪ್ರವಾಸಿಗರ ಕಳೆ
ಪಣಂಬೂರು: ಸತತ ನಾಲ್ಕು ದಿನಗಳ ರಜೆಯ ಕಾರಣ ಪಣಂಬೂರು ಬೀಚ್‌ನಲ್ಲಿ ಪ್ರವಾಸಿಗರ ದಟ್ಟಣೆ ಶನಿವಾರ ಕಂಡುಬಂತು. ಯುಗಾದಿ ಪ್ರಯುಕ್ತ ರಜೆಯಿದ್ದು ವಿವಿಧ ದೇವಸ್ಥಾನ, ಮಠ ಮಂದಿರಗಳಿಗೆ ಭೇಟಿ ನೀಡಿದ ಜನ ಪಣಂಬೂರಿನಲ್ಲಿ ಸಂಜೆ ಸಮುದ್ರದಲ್ಲಿ ಸಮುದ್ರ ಸ್ನಾನಗೈದು, ಒಂಟೆ -ಕುದುರೆ ಸವಾರಿ ಮಾಡಿ ಸಂಭ್ರಮಿಸಿದರು. ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿರುವುದರಿಂದ ಕೊರೊನಾ ನಡುವೆ ವ್ಯಾಪಾರದಿಂದ ಸೊರಗಿದ ಬೀಚ್ ಬದಿಯ ವ್ಯಾಪಾರಿಗಳಿಗೆ ಭರವಸೆಯ ದಿನಗಳು ಎದುರಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.