ಡಿಕೆಶಿಗೆ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ
Team Udayavani, Sep 18, 2019, 3:08 AM IST
ಬೆಂಗಳೂರು: ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಅವರಿಗೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಬಿ.ಪಿ., ಶುಗರ್ ಹಾಗೂ ಎದೆ ನೋವಿನಿಂದ ಬಳಲುತ್ತಿರುವ ಶಿವಕುಮಾರ್ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಣ್ಣನಿಗೆ ಜಾಮೀನು ಸಿಗುವ ವಿಶ್ವಾಸವಿದೆ: ಡಿ.ಕೆ.ಶಿವಕುಮಾರ್ ವಿರುದ್ಧ ಇ.ಡಿ ಅಧಿಕಾರಿಗಳು ಆಧಾರ ರಹಿತ ಆರೋಪ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಬುಧವಾರ ಜಾಮೀನು ಸಿಗುವ ಭರವಸೆ ಇದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ವಿಶೇಷ ಕೋರ್ಟ್‌ನಲ್ಲಿ ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ಮುಂದೂಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಯಾರದೋ ಆಸ್ತಿಯನ್ನು ಯಾರದೋ ಮನೆಯಲ್ಲಿ ದಾಳಿ ಮಾಡಿ, ಅದು ಡಿ.ಕೆ.ಶಿವಕುಮಾರ್ ಆಸ್ತಿ ಎಂದು ತೋರಿಸುತ್ತಿದ್ದಾರೆ. ಆದಾಯದ ಮೂಲ ಇಲ್ಲದೇ ಯಾರೂ ವ್ಯಾಪಾರ ಮಾಡುವುದಿಲ್ಲ. ಎಲ್ಲ ವ್ಯವಹಾರಗಳಿಗೂ ನಾವು ದಾಖಲೆಗಳನ್ನು ಸಲ್ಲಿಸಿದ್ದೇವೆ. 30 ವರ್ಷದ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ. ಎಲ್ಲದಕ್ಕೂ ದಾಖಲೆ ಇದೆ. ಹೀಗಾಗಿ, ಜಾಮೀನು ಸಿಗುವ ವಿಶ್ವಾಸ ಇದೆ. ಆದರೆ, ಇ.ಡಿಯವರಿಗೆ ಒತ್ತಡ ಇರಬಹುದು ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಎಂಜಿನಿಯರ್ ಪದವೀಧರೆಯಾಗಿದ್ದಾಳೆ. ಅವಳು ಬಿಜಿನೆಸ್ ಮಾಡಬೇಕೆಂದು ಆಸೆ ಪಟ್ಟಿದ್ದಳು. ನಾನು ಅವಳಿಗೆ 7 ಕೋಟಿ ರೂ.ಸಾಲ ಕೊಟ್ಟಿದ್ದೇನೆ. ಬೇರೆಯವರು ಸಾಲ ಕೊಟ್ಟಿದ್ದಾರೆ. ಬ್ಯಾಂಕ್‌ನವರು 40 ಕೋಟಿ ಸಾಲ ಕೊಟ್ಟಿದ್ದಾರೆ. ಅಪ್ಪನಾಗಿ ಡಿ.ಕೆ.ಶಿವಕುಮಾರ್ ಬೆಂಬಲ ಕೊಟ್ಟಿದ್ದಾರೆ. ಅವಳು ಒಂದೇ ಒಂದು ರೂಪಾಯಿ ಅವ್ಯವಹಾರ ನಡೆಸಿಲ್ಲ.
ನಮ್ಮ ಕುಟುಂಬದ ಎಲ್ಲ ಆಸ್ತಿಯ ದಾಖಲೆಗಳನ್ನು ಕೋರ್ಟ್ ಮುಂದೆ ಇಟ್ಟಿದ್ದೇವೆ. ನಮ್ಮ ಬ್ಯಾಂಕ್ ಅಕೌಂಟ್‌ಗಳು ಎಷ್ಟಿವೆ ಎಂದು ಕೋರ್ಟ್ ಮುಂದೆ ಹೇಳಿದ್ದೇವೆ. ಇ.ಡಿ ಅಧಿಕಾರಿಗಳು ಹೇಳಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗುವು ದಿಲ್ಲ. ಡಿ.ಕೆ.ಶಿವಕುಮಾರ್ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ಕುರ್ಚಿಯಲ್ಲಿ ಕೂಡಲು ಅವಕಾಶ ನೀಡಿದ ಜಡ್ಜ್: ಡಿ.ಕೆ.ಶಿವಕುಮಾರ್ ಅವರು ಆರೋಗ್ಯದ ಸಮಸ್ಯೆ ಎದುರಿಸುತ್ತಿರುವುದರಿಂದ ವಿಚಾರಣೆ ಸಂದರ್ಭದಲ್ಲಿ ನಿಂತುಕೊಳ್ಳಲು ಆಗುತ್ತಿಲ್ಲ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಅಲ್ಲಿಯೇ ಕುರ್ಚಿಯಲ್ಲಿ ಕುಳಿತುಕೊಳ್ಳಲು ನ್ಯಾಯಾಧೀಶರು ಅವಕಾಶ ನೀಡಿದರು.
ದೆಹಲಿಗೆ ತೆರಳಿದ ಅಭಿಮಾನಿಗಳು: ವಿಚಾರಣೆ ಸಂದರ್ಭದಲ್ಲಿ ದೆಹಲಿಗೆ ಬರಬೇಡಿ ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿಕೊಂಡಿದ್ದರೂ, ಡಿ.ಕೆ.ಶಿವಕುಮಾರ್ ಅಭಿಮಾನಿಗಳು ದೆಹಲಿಗೆ ತೆರಳಿದ್ದರು. ವಿಚಾರಣೆ ಸಂದರ್ಭದಲ್ಲಿ ಯಾರೂ ಕೋರ್ಟ್ ಹಾಲ್‌ಗೆ ಬರದಂತೆ ಡಿ.ಕೆ.ಸುರೇಶ್ ಸೂಚನೆ ನೀಡಿದ್ದರು. ಹೀಗಾಗಿ, ಅಭಿಮಾನಿಗಳು ಕೋರ್ಟ್ ಮುಂದೆಯೇ ವಿಚಾರಣೆ ಮುಗಿಯುವವರೆಗೂ ಕಾಯ್ದು ನಿಂತಿದ್ದರು.
ಅಲ್ಲದೆ, ಯಾವುದೇ ರೀತಿಯ ಗಲಾಟೆ ಮಾಡುವುದಿಲ್ಲ ಎಂದು ಭರವಸೆ ನೀಡಿ, ಶಾಂತ ರೀತಿಯಿಂದ ಕಾಯ್ದರು. ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಕೋರ್ಟ್ ಹಾಲ್‌ಗೆ ಕರೆದುಕೊಂಡು ಹೋಗುವಾಗ, “ಆಲ್ ದಿ ಬೆಸ್ಟ್ ಅಣ್ಣಾ, ಧೈರ್ಯವಾಗಿರಿ’ ಎಂದು ಅಭಿಮಾನಿ ವಿಶ್ ಮಾಡಿದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.