ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶ
Team Udayavani, Jun 1, 2024, 1:49 AM IST
ಬೆಂಗಳೂರು: ಸಂತೆಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಪ್ರಕರಣದ ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ. ಕೃಷಿ ಇಲಾಖೆ ಕಾಮಗಾರಿ ನಡೆಸಿದ್ದರೂ ಹಣ ಬಿಡುಗಡೆ ಮಾಡದೆ ಕೆಆರ್ಐಡಿಎಲ್ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಗೌಡರ್ ತಮ್ಮ ಮರಣಪತ್ರದಲ್ಲಿ ಬರೆದಿಟ್ಟಿದ್ದರು.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವರು, ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೈಗೊಂಡ ಕಾಮಗಾರಿಯ 40 ಲಕ್ಷ ರೂ. ಹಣ ಸಕಾಲದಲ್ಲಿ ಬಿಡುಗಡೆಯಾಗದೆ ಮನನೊಂದ ಗೌಡರ್ ಆತ್ಮಹತ್ಯೆಗೆ ಶರಣಾಗಿದ್ದರು.
2023-24ನೇ ಸಾಲಿನಲ್ಲಿ ಕೆಲಸ ಮಾಡಿದ್ದ ಕಾಮಗಾರಿಗೆ ಸಂಬಂಧಿ ಸಿ ಹಣ ಬಿಡುಗಡೆಗೆ ಅಧಿ ಕಾರಿಗಳು ಸತಾಯಿಸುತ್ತಿದ್ದರು. ಅಧಿಕಾರಿಗಳ ಧೋರಣೆಗೆ ಬೇಸತ್ತು ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಡೆತ್ನೋಟ್ನಲ್ಲಿ ಬರೆಯಲಾಗಿದೆ. ಪತಿಯ ಸಾವಿನ ಕುರಿತು ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.