Belthangady ಸ್ವಉದ್ಯೋಗದಿಂದ ವಲಸೆ ನಿಯಂತ್ರಣ: ಡಾ| ಡಿ.ವೀರೇಂದ್ರ ಹೆಗ್ಗಡೆ
ರುಡ್‌ಸೆಟ್ ನಿರ್ದೇಶಕರ ವಾರ್ಷಿಕ ಸಮ್ಮೇಳನ
Team Udayavani, Aug 23, 2024, 1:05 AM IST
ಬೆಳ್ತಂಗಡಿ: ಸ್ವ ಉದ್ಯೋಗ ದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯ. ಜತೆಗೆ ವಿದ್ಯಾವಂತರು ಉದ್ಯೋಗ ಅರಸಿ ಮಹಾನಗರಕ್ಕೆ ವಲಸೆ ಹೋಗುವುದು ಕಡಿಮೆಯಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಆ.22ರಂದು ಗ್ರಾಮಾ ಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನವನ್ನು ಉದ್ಘಾ ಟಿಸಿದ ಅವರು, ತರಬೇತಿ ಪಡೆದವರು ಸ್ಥಳೀಯ ಸಂಪನ್ಮೂಲ ಹಾಗೂ ಬೇಡಿಕೆ ಗಳಿಗೆ ಅನುಗುಣವಾಗಿ ಸ್ವ-ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ್ನು ನಡೆಸಬೇಕು. ಈ ಕುರಿತಾಗಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರು ಸಕಾಲಿಕ ಮಾರ್ಗದರ್ಶನ ನೀಡಬೇಕು ಎಂದರು.
ಬ್ಯೂಟಿಪಾರ್ಲರ್, ಛಾಯಾ ಗ್ರಹಣ, ವೀಡಿಯೋಗ್ರಫಿ ಮೊದಲಾದ ಸೇವಾ ಕ್ಷೇತ್ರಗಳಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಬಳಕೆಯಿಂದ ಕ್ಷಿಪ್ರ ಬದಲಾವಣೆಗಳಾಗುತ್ತಿದ್ದು, ಬದಲಾದ ವಿದ್ಯಮಾನಕ್ಕೆ ಸ್ವ ಉದ್ಯೋಗಿಗಳು ಹೊಂದಿಕೊಳ್ಳಬೇಕು ಎಂದು ಎಂದು ಡಾ. ಹೆಗ್ಗಡೆಯವರು ಹೇಳಿದರು.
ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾ ಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಮಾತನಾಡಿ, ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ಸಮಾಜದ ಆರ್ಥಿಕ ಪ್ರಗತಿಗೆ ರುಡ್‌ಸೆಟ್ ಸಂಸ್ಥೆಗಳ ಸೇವೆ, ಕೊಡುಗೆ ಅಮೂಲ್ಯ ಎಂದರು. ಬ್ಯಾಂಕ್‌ನ ಮುಖ್ಯ ಮಹಾಪ್ರಬಂಧಕ ಕೆ.ಜೆ. ಶ್ರೀಕಾಂತ್ ಮಾತನಾಡಿ, ಕೇಂದ್ರ ಸರಕಾರವು ಆರ್ಥಿಕ ಪ್ರಗತಿಗೆ ಆದ್ಯತೆ ನೀಡುತ್ತಿದೆ. ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಸ್ವಯಂ ಉದ್ಯೋಗ ಮಾಡುವವರು ವ್ಯಕ್ತಿತ್ವ ವಿಕಸನದೊಂದಿಗೆ ಉತ್ತಮ ಕೌಶಲವನ್ನೂ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬ್ಯಾಂಕ್‌ನ ಮಂಗಳೂರು ವೃತ್ತದ ಮಹಾಪ್ರಬಂಧಕ ಸುಧಾಕರ ಕೊಠಾರಿ ಮಾತನಾಡಿ, ಇಂದು ಮಹಿಳೆಯರು ಕೂಡ ಸ್ವಯಂ ಉದ್ಯೋಗದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.
ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕ ಅಜೇಯ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯಾ ನಿರ್ವಹಿಸಿದರು.
ಪ್ರಸಕ್ತ ವರ್ಷ 783 ತರಬೇತಿ ಮೂಲಕ 22,264 ಮಂದಿಗೆ ಸ್ವೋಉದ್ಯೋಗ ಕೌಶಲ ಕಲಿಸಿದ್ದು, 17,011 ಮಂದಿ ಸೊÌàದ್ಯೋಗ ಪ್ರಾರಂಭಿಸಿದ್ದಾರೆ. ವಿವಿಧ ಬ್ಯಾಂಕ್‌ಗಳು ಅವರಿಗೆ 42.13 ಕೋಟಿ ರೂ. ಸಾಲ ನೀಡಿವೆ. 1982ರಿಂದ ಈ ವರೆಗೆ 18,592 ತರಬೇತಿ ಮೂಲಕ 5,62,880 ಮಂದಿಗೆ ಸೊÌà ಉದ್ಯೋಗ ತರಬೇತಿ ನಿಇಡಲಾಗಿದೆ. 2,919 ಜಾಗೃತಿ ಶಿಬಿರಗಳನ್ನು ಹಮ್ಮಿಕೊಂಡು ಸೊÌà ಉದ್ಯೋಗದ ಕುರಿತು ಮಾರ್ಗದರ್ಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.