ಕೊರೊನಾ: ಆರೋಗ್ಯ ಇಲಾಖೆಗೆ ಸೂಕ್ತ ಮಾಹಿತಿ ನೀಡಿ
Team Udayavani, Mar 15, 2020, 3:07 AM IST
ಬೆಂಗಳೂರು: ವಿದೇಶದಿಂದ ಬರುವ ಪ್ರಯಾಣಿಕರು ಆರೋಗ್ಯ ಇಲಾಖೆಗೆ ಸೂಕ್ತ ಮಾಹಿತಿ ನೀಡುವ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಡೆಗೆ ಸಹಕರಿಸಬೇಕು ಎಂದು ಡಾ.ಕೆ.ಸುಧಾಕರ್ ತಿಳಿಸಿದರು. ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ದೇಶದ ಇತರ ಭಾಗ ಹಾಗೂ ವಿದೇಶದ ವಿಮಾನ ನಿಲ್ದಾಣಗಳಿಗೆ ಹೋಲಿಸಿದರೆ ಕರ್ನಾಟಕದ ವಿಮಾನ ನಿಲ್ದಾಣಗಳಲ್ಲಿ ಉತ್ತಮವಾಗಿ ತಪಾಸಣೆ ನಡೆಸಲಾಗುತ್ತಿದೆ.
ಇದಕ್ಕೆ ಪ್ರಯಾಣಿಕರ ಸಹಕಾರ ಕೂಡ ಅಗತ್ಯ. ವಿದೇಶದಿಂದ ಬರುತ್ತಿರುವ ಪ್ರಯಾಣಿಕರು ನಿಖರ ಹಾಗೂ ಸಂಪೂರ್ಣ ಮಾಹಿತಿಯನ್ನು ತಪಾಸಣಾ ಸಿಬ್ಬಂದಿಗೆ ಅಥವಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡಿದರೆ ಅಗತ್ಯ ಕ್ರಮ ಕೈಗೊಂಡು ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಇನ್ನಷ್ಟು ಸಹಕಾರಿಯಾಗಲಿದೆ. ಪ್ರಮುಖವಾಗಿ ಶಂಕಿತರು ಯಾವುದೇ ಅಂಶವನ್ನು ಮುಚ್ಚಿಡದೇ, ಯಾವುದೇ ಕಾಯ್ದೆ ಕಾನೂನುಗಳಿಗೂ ಭಯಪಡದೆ ತಮ್ಮ ಚಲನವಲನದ ನೈಜ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ವಿದೇಶಿ ಪ್ರಯಾಣಿಕರ ವಿಂಗಡಣೆ: ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಅಪಾಯ ಸಾಧ್ಯತೆಯ ಆಧಾರದ ಮೇಲೆ ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. 14 ದಿನಗಳಿಂದ ಈಚೆಗೆ ಕೊರೊನಾ ಬಾಧಿತ ದೇಶಗಳಿಂದ ಬಂದಿ ರುವ ಹಿನ್ನೆಲೆ ಹೊಂದಿದ್ದು ನೆಗಡಿ, ಜ್ವರದಂತಹ ಸೋಂಕು ಲಕ್ಷಣಗಳಿರುವ ಪ್ರತಿಯೊಬ್ಬರನ್ನೂ “ಎ- ಅಪಾಯ ವಿಭಾಗ’ ಎಂದು ವಿಂಗಡಿಸಿ ಕೂಡಲೇ ವೈದ್ಯಕೀಯ ವ್ಯವಸ್ಥೆಯೊಂದಿಗೆ ಪ್ರತ್ಯೇಕವಾಗಿರಿಸಿ, ಕೊರೊನಾ ಪರೀಕ್ಷೆ ನಡೆಸಲಾಗುವುದು.
ಪ್ರಯಾಣಿ ಕರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಳ್ಳದಿದ್ದರೂ ಮಧುಮೇಹ, ಅಧಿಕ ರಕ್ತದ ಒತ್ತಡ ಸೇರಿದಂತೆ ಇತರ ಆರೋಗ್ಯ ಸಮಸ್ಯೆ ಹೊಂದಿರುವವರು ಹಾಗೂ ವಯೋವೃದ್ಧರನ್ನು “ಬಿ ವಿಭಾಗ’ ಎಂದು ಪರಿಣಿಸಿ ಮನೆಯಲ್ಲೇ ಪ್ರತ್ಯೇಕವಾಗಿ ನಿಗಾ ವಹಿಸಲಾಗುವುದು. ತಪಾಸಣೆಯಲ್ಲಿ ಸೋಂಕು ದೃಢಪಡದ, ಆರೋಗ್ಯವಂತ ಯುವಜನರನ್ನು “ಸಿ ವಿಭಾಗ’ಕ್ಕೆ ಸೇರಿಸಿ ಅವರೂ ಸಹ 14 ದಿನಗಳ ಕಾಲ ಯಾರ ಸಂಪರ್ಕಕ್ಕೂ ಬಾರದಂತೆ ಮನೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರಿಸುವುದು.
ಬಿ ಮತ್ತು ಸಿ ವಿಭಾಗದವರನ್ನು 104 ಸಹಾಯ ವಾಣಿ ಕಾರ್ಯ ಕರ್ತರು ನಿತ್ಯ ಎರಡು ಬಾರಿ ಕರೆ ಮಾಡಿ ದೂರವಾಣಿ ಮೂಲಕ ಕೌನ್ಸೆಲಿಂಗ್ ನಡೆಸುತ್ತಾರೆ. ಈ ಅವಧಿಯಲ್ಲಿ ಅವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಅಲ್ಲದೆ, ಕೊರೊನಾದಿಂದ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದಿಂದ ಯಾವುದೇ ಪರಿಹಾರವನ್ನು ನೀಡಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಬೆಂಗಳೂರು ನಗರ ಪ್ರವೇಶಿಸಿಲ್ಲ: ಗ್ರೀಸ್ ಪ್ರವಾಸದಿಂದ ಬಂದ ಟೆಕ್ಕಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಆಗ್ರಾದಲ್ಲಿರುವ ಆತನ ಹೆಂಡತಿಗೂ ಸೋಂಕು ದೃಢಪಟ್ಟಿದೆ. “ಆಕೆ ಪತಿಯೊಂದಿಗೆ ಮಾರ್ಚ್ 8ರಂದು ಬೆಂಗಳೂರಿಗೆ ಬಂದು ನಾಲ್ಕು ತಾಸು ವಿಮಾನ ನಿಲ್ದಾಣದಲ್ಲಿಯೇ ಕಾಲಕಳೆದು ದೆಹಲಿಗೆ ತೆರಳಿದ್ದಾಳೆ. ಹೀಗಾಗಿ, ಬೆಂಗಳೂರು ನಗರವನ್ನು ಪ್ರವೇಶಿಸಿಲ್ಲ. ವಿಮಾನ ನಿಲ್ದಾಣದಲ್ಲಿ ನೆರೆ ಸಂಪರ್ಕಿತರ ತಪಾಸಣೆ ನಡೆಸಲಾಗುತ್ತಿದೆ. ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಹೇಳಿದರು.
ಐಟಿ ಬಿಟಿ ಕಂಪನಿಗೆ ಮತ್ತೂಮ್ಮೆ ಸಲಹೆ: ಟೆಕ್ಕಿಗಳಲ್ಲಿ ಹೆಚ್ಚು ಕೊರೊನಾ ಸೋಂಕು ಕಾಣಿಸಿ ಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಐಟಿ-ಬಿಟಿ ಕಂಪನಿಗಳು “ಮನೆಯಿಂದಲೇ ಕಾರ್ಯ ನಿರ್ವ ಹಿಸುವ ವ್ಯವಸ್ಥೆ’ (ವರ್ಕ್ ಫ್ರಾಮ್ ಹೋಮ್) ಯನ್ನು ಕಡ್ಡಾಯವಾಗಿ ಅಳವಡಿಸಿ ಕೊಳ್ಳುವಂತೆ ಮತ್ತೂಮ್ಮೆ ಸಲಹೆ ನೀಡುತ್ತೇವೆ. ಇನ್ನು ಐಟಿ-ಬಿಟಿ ಸಂಸ್ಥೆಗಳು ಇಂತಹ ವ್ಯವಸ್ಥೆಗಳನ್ನು ಸ್ವಯಂ ಪ್ರೇರಿತವಾಗಿ ಅಳವಡಿಸಿ ಕೊಳ್ಳುವ ಮೂಲಕ ಸಾಮಾಜಿಕ ಜವಾಬ್ದಾರಿ ತೋರಬೇಕು ಎಂದು ಸಚಿವರು ತಿಳಿಸಿದರು.
ಆಸ್ಪತ್ರೆಗೆ 11 ಇನ್ 11 ಔಟ್; ನೋ ಪಾಸಿಟಿವ್: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಶನಿವಾರ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 11 ಮಂದಿ ಶಂಕಿತರು ಒಳರೋಗಿಗಳಾಗಿ ದಾಖಲಾಗಿದ್ದು, ಶಂಕಿತರ ಪೈಕಿ 11 ಮಂದಿಯ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಮನೆಗೆ ತೆರಳಿದ್ದಾರೆ. ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಐವರು ಕೊರೊನಾ ಸೋಂಕಿತರು ಹಾಗೂ 27 ಕೊರೊನಾ ಶಂಕಿತರು ಆಸ್ಪತ್ರೆಯಲ್ಲಿದ್ದಾರೆ. ಶನಿವಾರ ಹೊಸದಾಗಿ ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ಬೆಂಗಳೂರಿನ ರಾಜೀವ್‌ಗಾಂಧಿ ಎದೆ ರೋಗಗಳ ಸಂಸ್ಥೆಯಲ್ಲಿ ಮೂರು ಮಂದಿ, ಹಾಸನದಲ್ಲಿ ನಾಲ್ಕು ಮಂದಿ, ಕಲಬುರಗಿಯಲ್ಲಿ ನಾಲ್ಕು ಮಂದಿ, ಉಡುಪಿಯಲ್ಲಿ ಇಬ್ಬರು, ಕೊಡಗು,
ಚಿಕ್ಕಮಗಳೂರಿನಲ್ಲಿ ತಲಾ ಒಬ್ಬ ಕೊರೊನಾ ಶಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತರ ಪೈಕಿ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿನ ಮೂವರು ಹಾಗೂ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಸೇರಿ ಐದು ಮಂದಿಯನ್ನು ರಕ್ತದ ಮಾದರಿ ನೆಗೆಟಿವ್ ಬಂದ ಹಿನ್ನೆಲೆ ಆಸ್ಪತ್ರೆಯಿಂದ ಡಿಸಾcರ್ಜ್ ಮಾಡಲಾಗಿದೆ. ಶನಿವಾರ ಹೊಸದಾಗಿ 92 ಶಂಕಿತರಿಂದ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಈ ಹಿಂದೆ ಸಂಗ್ರಹಿಸಿದ್ದ 50 ಮಂದಿ ಶಂಕಿತರ ವರದಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕಲಬುರಗಿ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ: ಕಲಬುರಗಿಯಲ್ಲಿ ಕೊರೊನಾ ಸೋಂಕು ದೃಢಪಟ್ಟು ಸಾವಿಗೀಡಾದ ವೃದ್ಧನ ಚಿಕಿತ್ಸೆ ವಿಚಾರದಲ್ಲಿ ಸ್ಥಳೀಯ ಆಸ್ಪತ್ರೆಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುಧಾಕರ್ ಹೇಳಿದರು.
ಮುಂದುವರಿದ ಶಂಕಿತರ ತಪಾಸಣೆ
ಬೆಂಗಳೂರು/ಹುಬ್ಬಳ್ಳಿ: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಿಂದ ಮರಳುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಅವರನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ದುಬೈ ಪ್ರವಾಸಕ್ಕೆ ತೆರಳಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ|ಶರಣಪ್ಪ ವಿ.ಹಲಸೆ ಶನಿವಾರ ನಗರಕ್ಕೆ ಹಿಂತಿರುಗಿದ್ದು, ಅವರನ್ನು ತಪಾಸಣೆಗೊಳಪಡಿಸಲಾಗಿದೆ. ಅವರಿಗೆ ಕೊರೊನಾ ಸೋಂಕು ಕಂಡು ಬಂದಿಲ್ಲ. ಆದರೂ, ಅವರ ನಿವಾಸದಲ್ಲಿ 14 ದಿನಗಳ ನಿಗಾ ವಹಿಸಲಾಗುವುದು. ಚನ್ನಗಿರಿ ತಾಲೂಕಿನ ವ್ಯಕ್ತಿಯೊಬ್ಬರು ಸಹ ದುಬೈನಿಂದ ಶುಕ್ರವಾರ ಹಿಂತಿರುಗಿದ್ದು, ಅವರನ್ನು ಸಹ ತಾಲೂಕು ವೈದ್ಯಾಧಿಕಾರಿ ನೇತೃತ್ವದ ತಂಡ ತಪಾಸಣೆಗೊಳಪಡಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ ಇತ್ತೀಚೆಗೆ ವಿದೇಶದಿಂದ ಬಂದ ಒಟ್ಟು 38 ಮಂದಿ ಬಗ್ಗೆಯೂ ತೀವ್ರ ನಿಗಾ ವಹಿಸಲಾಗಿದೆ. ಯಾರಲ್ಲಿಯೂ ಕೊರೊನಾ ವೈರಸ್ ಸೋಂಕು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಫಿನಾಡಿನ ಮಹಿಳೆಗೆ ಕೊರೊನಾ ಇಲ್ಲ
ಚಿಕ್ಕಮಗಳೂರು/ಹಾಸನ: ಸಿಂಗಾಪುರ ಪ್ರವಾಸ ಮುಗಿಸಿ ಮರಳಿದ ಚಿಕ್ಕಮಗಳೂರಿನ ಮಹಿಳೆಯೊಬ್ಬರು ಜ್ವರಕ್ಕೆ ತುತ್ತಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ, ಕಫ ಮತ್ತು ರಕ್ತದ ಮಾದರಿ ಯನ್ನು ಹಾಸನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ನೆಗೆಟಿವ್ ಎಂಬ ವರದಿ ಬಂದಿದೆ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಮತ್ತು ಹಾಸನ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿ ಹಾಗೂ ಹಾಸನ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಆತಂಕ ಬೇಡ: ಮಾಧುಸ್ವಾಮಿ
ಧಾರವಾಡ: ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳುತ್ತಿದ್ದು, ಜನರಿಗೆ ಆತಂಕ ಬೇಡ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಸರ್ಕಾರ ಮಾಡಬೇಕಾದ ಆರೈಕೆ ಮತ್ತು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಬಗ್ಗೆ ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ನಮ್ಮಲ್ಲಿ ಪಾಸಿಟಿವ್ ಕಡಿಮೆ ಇದೆ ಎಂದರು. ಸರ್ಕಾರ ಸಾರ್ವಜನಿಕ ಸಭೆ-ಸಮಾರಂಭ ನಡೆಸದಂತೆ ಶುಕ್ರವಾರ ಆದೇಶ ಹೊರಡಿಸಿದೆ. ಆದರೆ ಅಷ್ಟರೊಳಗೆ ಹೊರಗಡೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಘಟಿಕೋತ್ಸವಕ್ಕೆ ಆಗಮಿಸಿದ್ದರಿಂದ ಸರ್ಕಾರದ ಅನುಮತಿ ಪಡೆದೇ ಘಟಿಕೋತ್ಸವ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.