ಸರಕಾರದಿಂದ ಅವ್ಯವಹಾರ: ಡಿಕೆಶಿ
Team Udayavani, May 2, 2020, 6:13 AM IST
ಬೆಂಗಳೂರು: ಸರಕಾರಕ್ಕೆ ನೀಡಿದ್ದ ಸಹಕಾರ ಕಾಲಾವಕಾಶ ಮುಗಿದಿದೆ. ಬಡವರಿಗೆ ವಿತರಿಸುವ ಅಕ್ಕಿಯಿಂದ ಹಿಡಿದು, ಹಾಲು, ತರಕಾರಿ, ದಿನಸಿ ಹಂಚಿಕೆವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ನೇನಿದ್ದರೂ ನಾವು ಸರಕಾರದ ವೈಫಲ್ಯಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ರೈತರು ಮತ್ತಿತರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ರಾಜಕಾರಣ ಮಾಡಬಾರದು ಮತ್ತು ಮಾನವೀಯತೆ ದೃಷ್ಟಿಯಿಂದ ಸರಕಾರದ ಜತೆ ಕೈ ಜೋಡಿಸಿದ್ದೇವೆ. ಕಳೆದ 40 ದಿನಗಳಲ್ಲಿ ಸರಕಾರ ಏನು ಮಾಡಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಸಚಿವರ ನಡುವೆ ಸಮನ್ವಯತೆ, ಅಧಿಕಾರಿಗಳಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ವಿಚಾರದಲ್ಲೂ ದಂಧೆ ನಡೆಯುತ್ತಿದೆ. ಇದನ್ನು ನೋಡಿಕೊಂಡು ಕುಳಿತುಕೊಳ್ಳಲು ಇನ್ನು ಸಾಧ್ಯವಿಲ್ಲ ಎಂದು ಹೇಳಿದರು.
ಪಿಂಚಣಿ ಹಣ ಸರಿಯಾಗಿ ತಲುಪಿಲ್ಲ
ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ಏನು ಆಶ್ವಾಸನೆ ಕೊಟ್ಟರೋ ಅದರಲ್ಲಿ ಒಂದೇ ಒಂದೂ ಕಾರ್ಯ ರೂಪಕ್ಕೆ ಬಂದಿಲ್ಲ. ಆಹಾರ ವಿತರಣೆಯಲ್ಲಿ ಶೇ. 20ರಷ್ಟು ಕೆಲಸ ಆಗಿರುವುದು ಬಿಟ್ಟರೆ, ಆರೋಗ್ಯ ವಿಷಯದಿಂದ ಹಿಡಿದು ಕಾರ್ಮಿಕರ ಸಮಸ್ಯೆವರೆಗೂ ಎಲ್ಲೂ ಕೆಲಸ ಆಗಿಲ್ಲ. ಆದಾಯ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದಾಗ ಪಿಂಚಣಿ ಹಣ ಕೂಡ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದು ಗೊತ್ತಾಗಿದೆ.ಇದನ್ನು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
“ಎಲ್ಲ ವಿಚಾರಗಳಲ್ಲೂ ಸರಕಾರ ವಿಫಲ’
ಹಾಲು, ಅಕ್ಕಿ ಕೊಡುವುದರಲ್ಲೂ ಅವ್ಯವಹಾರ. ಈವರೆಗೂ ಸರಕಾರ ಒಂದೇ ಒಂದು ಕಡೆ ತರಕಾರಿಗಳನ್ನು ಖರೀದಿ ಮಾಡಿಲ್ಲ. ಇನ್ನು ವಾಹನ ಸಾಲ ಪಡೆದಿರುವವರಿಗೆ ಕಂತಿನ ವಿನಾಯಿತಿ, ಬಡ್ಡಿ ಮನ್ನಾ ಅಥವಾ ವಿಮೆ ಕಂತು ತಡವಾಗಿ ಕಟ್ಟಲು ಅವಕಾಶ ಕಲ್ಪಿಸಲಾಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಲ್ಲ ವಿಚಾರಗಳಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ. ಇಂಥ ಪರಿಸ್ಥಿತಿಯಲ್ಲಿ ಸರಕಾರಗಳು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದನ್ನು ನಾನು ಈವರೆಗೂ ನೋಡಿರಲಿಲ್ಲ. ವಿಪಕ್ಷದ ಪ್ರತಿನಿಧಿಗಳಾಗಿ ನಮ್ಮ ನಾಯಕರು ವಾಹನ ಚಾಲಕರಿಂದ, ಅಸಂಘಟಿತ ಕಾರ್ಮಿಕರವರೆಗೂ ಸಮಾಜದ ಎಲ್ಲ ವರ್ಗದವರನ್ನು ಕರೆದು ಮಾತನಾಡಿ ಅವರ ಕಷ್ಟಕ್ಕೆ ಧ್ವನಿಯಾಗಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.