![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 3, 2024, 8:20 PM IST
ಉಪ್ಪಿನಂಗಡಿ: ಮಹಿಳಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ಅವರು ದೂರು ನೀಡಿದ್ದು, ಜ.27ರಂದು ಮಧ್ಯಾಹ್ನ ಆರೋಪಿಗಳಾದ ನೆಲ್ಯಾಡಿ ಗ್ರಾಮದ ಸೆಬಾಸ್ಟಿಯನ್ ಮತ್ತು ಡಾನಿಶ್ ಅವರು ಸಂಘಕ್ಕೆ ಬಂದಿದ್ದು, ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, ಸಂಘದಿಂದ 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.