Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Team Udayavani, May 4, 2024, 1:14 AM IST

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

ಕಾರ್ಕಳ: ಪ್ರವಾಸಿ ತಾಣ ಕಾರ್ಕಳ ತಾಲೂಕಿನ ಬೈಲೂರು ಉಮಿಕ್ಕಳ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ಒಳಗೊಂಡ ಥೀಂ ಪಾರ್ಕ್‌ನಲ್ಲಿ ಕಾಮಗಾರಿ ಮುಂದುವರಿಸಲು ಅವಕಾಶ ಕೋರಿ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಹೈಕೋರ್ಟ್‌ ಕಾಮಗಾರಿ ಮುಂದುವರಿಸಲು ಅವಕಾಶ ನೀಡಿದೆ. ಅದರಂತೆ ಶುಕ್ರವಾರ ಕಾಮಗಾರಿ ನಡೆಸುತ್ತಿದ್ದ ವೇಳೆ ದಿಢೀರ್‌ ಜಿಲ್ಲಾಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದು ಮಧ್ಯಾಹ್ನದ ವೇಳೆಗೆ ಸ್ಥಗಿತಗೊಂಡಿದೆ.

ಒಪ್ಪಂದದ ಪ್ರಕಾರ ಥೀಂ ಪಾರ್ಕ್‌ನಲ್ಲಿ ನಿಗದಿತ ಸಮಯದೊಳಗೆ ಶಿಲ್ಪಿಯು ಮೂರ್ತಿಯನ್ನು ಪೂರ್ಣಗೊಳಿಸಿ ಕೊಡಬೇಕಾಗಿತ್ತು. ಆದರೆ ಕಾಮಗಾರಿ ಮುಂದುವರಿಸಲು ಪ್ರತಿಮೆಯ ಅರ್ಧ ಭಾಗವನ್ನು ನಿರ್ಮಿತಿ ಕೇಂದ್ರದವರು ತೆಗೆದುಕೊಟ್ಟಿರಲಿಲ್ಲ. ಆ ಭಾಗವನ್ನು ತೆಗೆಯಲು ಅವಕಾಶ ಕೋರಿ ಕೃಷ್ಣ ನಾಯ್ಕ ಹೈಕೋರ್ಟ್‌ ಮೊರೆ ಹೋಗಿದ್ದರು. 14 ದಿನಗಳೊಳಗೆ ಮೂರ್ತಿಯ ಬಾಕಿ ಭಾಗವನ್ನು ತೆರವುಗೊಳಿಸಬೇಕು ಮತ್ತು 4 ತಿಂಗಳೊಳಗೆ ಪೂರ್ತಿಗೊಳಿಸಿ ಮರುಸ್ಥಾಪಿಸಬೇಕು ಎಂದು ಎ. 23ರಂದು ಕೋರ್ಟ್‌ ಆದೇಶಿಸಿತ್ತು. ತೆರವು ಪೂರ್ಣಗೊಳಿಸಲು ಕೇವಲ 5 ದಿನ ಬಾಕಿ ಇರುವಾಗಲೇ ದಿಢೀರಾಗಿ ಕೆಲಸ ಸ್ಥಗಿತಗೊಂಡಿದೆ.

ಸರಕಾರದ ಒತ್ತಡದಿಂದ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಉಮಿಕ್ಕಳ ಬೆಟ್ಟವನ್ನು ಪ್ರವಾಸಿ ತಾಣವಾಗಿಸುವ ಉದ್ದೇಶದಿಂದ 15 ಕೋ.ರೂ. ವೆಚ್ಚದಲ್ಲಿ ಪರಶುರಾಮ ಕಂಚಿನ ಪ್ರತಿಮೆ ಸ್ಥಾಪನೆ ಸಹಿತ ಪರಶುರಾಮ ಥೀಂ ಪಾರ್ಕ್‌ ಯೋಜನೆ ರೂಪಿಸಲಾಗಿತ್ತು.

2023ರ ಜ. 1ರಂದು ಪಾರ್ಕ್‌ ಲೋಕಾರ್ಪಣೆಗೊಂಡಿತ್ತು. ಪ್ರತಿಮೆ ಕಂಚಿನದ್ದಲ್ಲ; ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕಾಂಗ್ರೆಸ್‌ನಿಂದ ವ್ಯಕ್ತವಾಗಿ ಭಾರೀ ಪ್ರತಿಭಟನೆ ನಡೆದಿತ್ತು.

ಕಾಮಗಾರಿ ಪೂರ್ಣವಾಗಿಲ್ಲ: ಪ್ರತಿಮೆಯಲ್ಲಿ ಕೆಲವೊಂದು ಮಾರ್ಪಾಡು ಬಾಕಿಯಿದೆ. ಪೂರ್ಣಗೊಂಡು ಹಸ್ತಾಂತರಕ್ಕೆ ಬಾಕಿಯಿದೆ. ಸರಕಾರದಿಂದ 5 ಕೋ.ರೂ. ಬಿಡುಗಡೆಗೆ ಬಾಕಿಯಿದೆ ಎಂದು ಪಾರ್ಕ್‌ ನಿರ್ಮಾಣದ ಗುತ್ತಿಗೆ ವಹಿಸಿಕೊಂಡ ನಿರ್ಮಿತಿ ಕೇಂದ್ರದವರು ಹೇಳಿದ್ದರು. ಈ ನಡುವೆ ಪ್ರತಿಮೆಯ ಅರ್ಧ ಭಾಗವನ್ನು ತೆರವುಗೊಳಿಸಲಾಗಿತ್ತು. ಬಳಿಕ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ವಾದ-ವಿವಾದಗಳು ಹುಟ್ಟಕೊಂಡಿದ್ದವು. ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಟ್ಟಕ್ಕೆ ಭೇಟಿ ನೀಡಿ ಪಾರದರ್ಶಕ ತನಿಖೆಯ ಭರವಸೆ ನೀಡಿದ್ದರು. ಬಳಿಕ ನಾಗಮೋಹನ್‌ ಸಮಿತಿಗೆ ತನಿಖೆಗೆ ಆದೇಶಿಸಲಾಗಿದ್ದು ಅವರು ಸ್ಥಳ ತನಿಖೆ ನಡೆಸಿ ಹೋಗಿದ್ದರು. ಇದರಿಂದ ಸಮಾಧಾನಿತರಾದ ಸ್ಥಳೀಯ ಕಾಂಗ್ರೆಸ್‌ ಮುಖಂಡರ ಆಗ್ರಹದಂತೆ ಉಸ್ತುವಾರಿ ಸಚಿವೆಯ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದರು.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.