Sowjanya Case; ಮರು ತನಿಖೆ ಸಾಧ್ಯವಿಲ್ಲ: ಪರಮೇಶ್ವರ್ ಪುನರುಚ್ಚಾರ
Team Udayavani, Aug 27, 2023, 11:41 PM IST
ಅರಸೀಕೆರೆ: ಸೌಜನ್ಯಾ ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರುತನಿಖೆ ಮಾಡುವಂತಿಲ್ಲ. ಆದರೆ ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ಮರುತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು.
ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ರವಿವಾರ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಅಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶಿಸಿದರೆ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣ ದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್‌ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್‌ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.