ಕೆ.ಎಸ್.ಎಸ್. ವಿದ್ಯಾರ್ಥಿಗಳಿಂದ ಕೋವಿಡ್ 19 ಜಾಗೃತಿ; ಪರಿಸರ ಪ್ರೀತಿ
ಲಾಕ್ ಡೌನ್ ಸಮಯ ಸದುಪಯೋಗ
Team Udayavani, Apr 28, 2020, 6:26 AM IST
ಸುಬ್ರಹ್ಮಣ್ಯ: ಮಾರಕ ಕೋವಿಡ್ ಹಾವಳಿಗೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದ್ದು, ಇದನ್ನು ಹಲವೆಡೆ ವಿವಿಧ ರೀತಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಬಳಕೆ ಮಾಡಿಕೊಳ್ಳಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಈ ಸಮಯದಲ್ಲಿ ಸಮಾಜಕ್ಕೆ ಜಾಗೃತಿ ಮೂಡಿಸುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕೋವಿಡ್ ಬಗ್ಗೆ ಜಾಗೃತಿ ಹಾಗೂ ಪರಿಸರ ಪೊಷಣೆ ಬಗ್ಗೆ ಜಾಗೃತಿ ಕೆಲಸಕ್ಕೆ ಸಂಸ್ಥೆಯ ಉಪನ್ಯಾಸಕರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ.
ಪರಿಸರ ಪ್ರೀತಿ;
ಸಂಸ್ಥೆಯ ಯೂತ್ ರೆಡ್ ಕ್ರಾಸ್(ವೈ.ಆರ್.ಸಿ.) ಘಟಕದ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ಜಮೀನಿನಲ್ಲಿ ಗಿಡಗಳನ್ನು ನೆಟ್ಟು ಬೆಳೆಸಿ, ಪೋಷಿಸುವ ಮಹತ್ಕಾರ್ಯದಲ್ಲಿ ಈ ಲಾಕ್ ಡೌನ್ ಸಮಯವನ್ನು ಬಳಸಿಕೊಂಡು ಪರಿಸರ ಜಾಗೃತಿಗೆ ಎಚ್ಚರಗೊಳ್ಳುವಂತೆ ಕರೆ ನೀಡಿದ್ದಾರೆ. ಈ ಬಗ್ಗೆ ಗಿಡ ನೆಟ್ಟು ಪೋಷಿಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಮಾಹಿತಿ ನೀಡಿ, ಇತರರೂ ಕೂಡ ಪರಿಸರ ಜಾಗೃತಿಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡುತ್ತಿದ್ದಾರೆ.
ಕೋವಿಡ್ ಜಾಗೃತಿ;
ಸಂಸ್ಥೆಯ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಕೋವಿಡ್ ವೈರಸ್ ಭೀತಿಯಿಂದ ಜನತೆ ಸಾರ್ವಜನಿಕವಾಗಿ ಹೊರ ಬಾರದೇ ಮನೆಯಲ್ಲೇ ಇರುವಂತೆ ತಮ್ಮ ಭಾವಚಿತ್ರದೊಂದಿಗೆ “ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ನಾವು ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೂಡದೆ ಸರಕಾರದ ಸೂಚನೆ ಮತ್ತು ನಿಯಮಗಳನ್ನು ಪಾಲಿಸಿ ಮನೆಯಲ್ಲಿಯೇ ಇದ್ದು ನಮ್ಮ ಕುಟುಂಬ ಮತ್ತು ಸಮಾಜದ ರಕ್ಷಣೆಗೆ ಬದ್ಧರಾಗಿದ್ದೇವೆ. ನೀವು.? ಸ್ಟೇ ಹೋಂ ಸ್ಟೇ ಸೇಫ್” ಎಂಬ ಸಂದೇಶದ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿ, ತಮ್ಮ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿಸಿ ಜಾಗೃತಿ ಮೂಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.