ದಕ್ಷಿಣ ಕನ್ನಡದ ಕೋವಿಡ್ ಮೂಲ ಪತ್ತೆ: ಕಾಲಾವಕಾಶ ಕೋರಿದ ತಜ್ಞ ವೈದ್ಯರ ತಂಡ
Team Udayavani, May 12, 2020, 10:07 AM IST
ಮಂಗಳೂರು: ಪಡೀಲ್‌ನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳು ಸಹಿತ ದಕ್ಷಿಣ ಕನ್ನಡದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿರುವುದರ ಮೂಲ ಪತ್ತೆಗೆ ಮತ್ತಷ್ಟು ಕಾಲಾವಕಾಶ ಬೇಕೆಂದು ತಜ್ಞ ವೈದ್ಯರ ತಂಡ ಹೇಳಿದೆ. ಇದರಿಂದಾಗಿ ತನಿಖಾ ವರದಿ ಜಿಲ್ಲಾಡಳಿತದ ಕೈಸೇರುವುದು ಮತ್ತಷ್ಟು ವಿಳಂಬವಾಗಬಹುದು.
ತಜ್ಞರ ವರದಿಯು ಸೋಮವಾರ ಕೈ ಸೇರಬಹುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದರು. ಆದರೆ ಮೂಲ ಪತ್ತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಜ್ಞ ವೈದ್ಯಕೀಯ ತಂಡದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿದ್ದು, ಈ ಸಭೆಯಲ್ಲಿ ತಜ್ಞರ ತಂಡವು ವರದಿ ಸಲ್ಲಿಕೆಗೆ ಮತ್ತಷ್ಟು ಕಾಲಾವಕಾಶ ಕೋರಿದೆ.
ಈ ಬಗ್ಗೆ ಮಾತ ನಾಡಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜನರಲ್ಲಿ ಸಂಶಯ ನಿವಾರಣೆ ಆಗತ್ಯ ಇರುವುದರಿಂದ, ಸೋಂಕಿನ ಮೂಲ ಪತ್ತೆ ಹಚ್ಚುವುದು ಅನಿವಾರ್ಯವಾಗಿದ್ದು, ಇದರ ಬಗ್ಗೆ ಮತ್ತಷ್ಟು ವಿವರಣೆ ಪಡೆಯಬೇಕು ಎಂದರು.
1,000ಕ್ಕೂ ಅಧಿಕ ಮಂದಿ ಪರೀಕ್ಷೆ
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿಗಳು ಮಾತನಾಡಿ, ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1,000ಕ್ಕೂ ಅಧಿಕ ಮಂದಿಯ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 17 ಖಚಿತ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ 8 ಬಂಟ್ವಾಳ, 3 ಫಸ್ಟ್ ನ್ಯೂರೋ ಹಾಗೂ 6 ಬೋಳೂರು ಪ್ರದೇಶಕ್ಕೆ ಸಂಬಂಧಿಸಿವೆ ಎಂದರು.
ಫಸ್ಟ್ ನ್ಯೂರೋ ಸಿಬಂದಿಯೊಬ್ಬರಿಗೆ ಪಾಸಿಟಿವ್ ಬಂದ ಮೇಲೆ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಫಸ್ಟ್ ನ್ಯೂರೋದಲ್ಲಿ ಕೇರಳದ ಹಲವಾರು ಮಂದಿ ಚಿಕಿತ್ಸೆ ಪಡೆದು ತೆರಳಿದ್ದರು. ಅವರ ಗಂಟಲ ದ್ರವ ತಪಾಸಣೆ ಅಗತ್ಯವಾಗಿದ್ದು, ಕೇರಳ ಸರಕಾರದ ಜತೆ ಸಂಪರ್ಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಎಚ್‌ಒ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.