ರೋಹಿತ್, ರಹಾನೆ ಕ್ರಿಕೆಟ್ ಅಭ್ಯಾಸಕ್ಕೆ ಕೋವಿಡ್-19 ಅಡ್ಡಿ
Team Udayavani, May 23, 2020, 6:30 AM IST
ಮುಂಬಯಿ: ಕೋವಿಡ್-19 ಸೋಂಕು ಪ್ರಕರಣಗಳು ಅಧಿಕವಾಗಿರುವ ಮುಂಬಯಿ ಮಹಾನಗರವನ್ನು ಕೆಂಪು ವಲಯವನ್ನಾಗಿ ಗುರುತಿಸಲಾಗಿದ್ದರಿಂದ ಅಲ್ಲಿ ಇನ್ನೂ ಕ್ರೀಡಾ ಚಟುವಟಿಕೆಗಳು ಆರಂಭಗೊಂಡಿಲ್ಲ. ಆದ್ದರಿಂದ ಪ್ರಮುಖ ಕ್ರಿಕೆಟಿಗರಾದ ಭಾರತ ತಂಡದ ಉಪನಾಯಕ ರೋಹಿತ್ ಶರ್ಮ ಹಾಗೂ ಅಜಿಂಕ್ಯ ರಹಾನೆ ಅವರು ವೈಯಕ್ತಿಕ ಅಭ್ಯಾಸಕ್ಕೆ ಇನ್ನಷ್ಟು ದಿನ ಕಾಯಬೇಕಿದೆ.
ಮಹಾರಾಷ್ಟ್ರ ಸರಕಾರವು ಹಸಿರು ಹಾಗೂ ಕಿತ್ತಳೆ ವಲಯಗಳಲ್ಲಿ ಇರುವ ಆ್ಯತ್ಲೀಟ್‌ಗಳಿಗೆ ತರಬೇತಿಗೆ ಅವಕಾಶ ಕಲ್ಪಿಸಿದೆ. ಆದರೆ ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶವಿಲ್ಲ. ಮುಂಬಯಿ ಅಲ್ಲದೆ ಅದರ ಪಕ್ಕದ ಪ್ರದೇಶಗಳಾದ ಥಾಣೆ, ನವಿ ಮುಂಬಯಿ, ಮೀರಾ ಭಾಯಂದರ್, ವಸಯೀ ಹಾಗೂ ಕಲ್ಯಾಣ್ ಡೊಂಬಿವಲಿಗಳನ್ನು ಕೆಂಪು ವಲಯಗಳೆಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ರಹಾನೆ ಮತ್ತು ರೋಹಿತ್ ಅವರ ನಿವಾಸ ಇರುವುದರಿಂದ ಈ ಇಬ್ಬರು ಆಟಗಾರರಿಗೆ ಅಭ್ಯಾಸ ನಡೆಸಲು ಅಸಾಧ್ಯವಾಗಿದೆ.
“ಕ್ರೀಡಾಂಗಣಗಳನ್ನು ಅಭ್ಯಾಸಕ್ಕೆ ಮುಕ್ತವಾಗಿಸುವ ವಿಷಯದಲ್ಲಿ ನಾವು ರಾಜ್ಯ ಸರಕಾರದ ಮಾರ್ಗಸೂಚಿಗಳಿಗೆ ಬದ್ಧರಾಗಿದ್ದೇವೆ’ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಶನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.