ಶೌಚಾಲಯ ನಿರ್ಮಾಣ ಗುರಿ ಸಾಧನೆಗೂ ಕೋವಿಡ್ -19 ಅಡ್ಡಿ !
Team Udayavani, May 11, 2020, 5:50 AM IST
ಸಾಂದರ್ಭಿಕ ಚಿತ್ರ.
ವಿಶೇಷ ವರದಿ- ಮಂಗಳೂರು: “ಬಯಲು ಶೌಚ ಮುಕ್ತ ಜಿಲ್ಲೆ’ ಎಂದು ಈಗಾಗಲೇ ಘೋಷಿಸಲ್ಪಟ್ಟಿರುವ ದ.ಕ. ಜಿಲ್ಲೆಯಲ್ಲಿ ಬಾಕಿ ಇರುವ ಶೌಚಾಲಯಗಳ ನಿರ್ಮಾಣಕ್ಕೆ ಕೋವಿಡ್ -19 ಅಡ್ಡಿಯಾಗಿದ್ದು, ಮಳೆಗಾಲದೊಳಗೆ ಪೂರ್ಣಗೊಳಿಸುವ ಅನಿವಾರ್ಯ ಸೃಷ್ಟಿಯಾಗಿದೆ.
ಒಂದೂವರೆ ತಿಂಗಳಿನಿಂದ ಎಲ್ಲ ನಿರ್ಮಾಣ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಅಂತೆಯೇ ಸ್ವಚ್ಛ ಭಾರತ್ ಮಿಷನ್‌ನಡಿ ನಿರ್ಮಾಣವಾಗಬೇಕಿದ್ದ 111ಕ್ಕೂ ಅಧಿಕ ಶೌಚಾಲಯಗಳು ಬಾಕಿಯಾಗಿವೆ. 111 ಶೌಚಾಲಯಗಳಿಗೆ ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ.
ಪಡಿತರ ಚೀಟಿ ನವೀಕರಣ ಸಮಸ್ಯೆ
ಶೌಚಾಲಯ ಪ್ರೋತ್ಸಾಹಧನ ಪಡೆಯಲು ಫಲಾನುಭವಿಗಳು ನವೀಕರಣಗೊಂಡ ಪಡಿತರ ಚೀಟಿ, ಆಧಾರ್ ಹೊಂದಿರುವುದು ಕಡ್ಡಾಯ. ಆದರೆ ಪ್ರಸ್ತುತ ಪಡಿತರ ಚೀಟಿ ನವೀಕರಣ ಪ್ರಕ್ರಿಯೆ ಸ್ಥಗಿತಗೊಂಡಿರುವುದು ಕೂಡ ಶೌಚಾಲಯ ನಿರ್ಮಾಣಕ್ಕೆ ತೊಡಕಾಗಿದೆ.
2012ರಲ್ಲಿ ದ.ಕ. ಜಿಲ್ಲೆಯ ಎಲ್ಲ ಗ್ರಾ.ಪಂ.ಗಳು ನಿರ್ಮಲ ಗ್ರಾಮ ಪುರಸ್ಕಾರ ಪಡೆದಿದ್ದವು. 2016ರಲ್ಲಿ ಬಯಲು ಶೌಚ ಮುಕ್ತ ಜಿಲ್ಲೆ ಎಂಬ ಪುರಸ್ಕಾರ ಪಡೆದಿತ್ತು. ಸ್ವಚ್ಛ ಭಾರತ್ ಮಿಷನ್‌ನಡಿ 2015ನೇ ಸಾಲಿನಿಂದ 2019-20ನೇ (ಮಾರ್ಚ್ ವರೆಗೆ) ಸಾಲಿನವರೆಗೆ 4,016 ವೈಯಕ್ತಿಕ ಶೌಚಾಲಯ ನಿರ್ಮಿಸಲಾಗಿದೆ. ಈ ಹಿಂದೆ ವೈಯಕ್ತಿಕ ವೆಚ್ಚದಲ್ಲಿ ನಿರ್ಮಿಸಿ, ಈಗ ಅದು ನಿರುಪಯುಕ್ತ ಸ್ಥಿತಿಗೆ ಬಂದಿದ್ದರೆ ಅಂತಹ ಶೌಚಾಲಯಗಳನ್ನು ತೆರವು ಮಾಡಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಿಸಲಾಗುತ್ತದೆ. ಹೊಸದಾಗಿ ಮನೆ ನಿರ್ಮಿಸಿದ ಕುಟುಂಬಗಳಿಗೆ ಶೌಚಾಲಯ ನಿರ್ಮಿಸಿಕೊಡಲಾಗುತ್ತಿದೆ. ಬಾಕಿ ಇರುವ ಶೌಚಾಲಯಗಳ ಬಗ್ಗೆ ಪುನರ್ ಸರ್ವೆ ನಡೆಯುತ್ತಿದ್ದು ಇನ್ನಷ್ಟು ಕಡೆ ಬಾಕಿಯಾಗಿರುವ ಸಾಧ್ಯತೆಗಳಿವೆ.
ಸಾಮಗ್ರಿ ಕೊರತೆ
ಸ್ವಚ್ಛ ಭಾರತ್ ಮಿಷನ್‌ನಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಘಟಕವೊಂದಕ್ಕೆ 15 ಸಾವಿರ ರೂ., ಇತರರಿಗೆ 12 ಸಾವಿರ ರೂ. ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಸರಕಾರದ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿದ್ದರೆ ಅದರ ಜತೆಗೆ ನಿರ್ಮಿಸುವ ವೈಯಕ್ತಿಕ ಶೌಚಾಲಯಗಳನ್ನು ನರೇಗಾ ಮೂಲಕ ನಿರ್ಮಿಸಲು ಅವಕಾಶವಿದೆ. ಆದರೆ ಲಾಕ್‌ಡೌನ್‌ನಿಂದಾಗಿ ಸಾಮಗ್ರಿಗಳ ಕೊರತೆ ಎದುರಾಗಿದೆ.
ತ್ವರಿತ ಕಾಮಗಾರಿಗೆ ಸೂಚನೆ
6 ತಿಂಗಳ ಹಿಂದೆ 175 ವೈಯಕ್ತಿಕ ಶೌಚಾಲಯ ನಿರ್ಮಾಣ ಗುರಿ ಇತ್ತು. ಅದರಲ್ಲಿ 65 ಶೌಚಾಲಯ ನಿರ್ಮಾಣವಾಗಿದೆ. ಆದರೆ, ಒಂದೂವರೆ ತಿಂಗಳುಗಳಿಂದ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಮಳೆಗಾಲದೊಳಗೆ ಈ ಕಾಮಗಾರಿ ಮುಗಿಸುವಂತೆ ಸೂಚಿಸಲಾಗುತ್ತದೆ. ಕೆಲವು ಪ್ರದೇಶಗಳಲ್ಲಿ ಮಳೆಗಾಲದಲ್ಲಿಯೂ ಕಾಮಗಾರಿ ನಡೆಸಬಹುದು.
-ಮಂಜುಳಾ, ಜಿಲ್ಲಾ ಸಂಯೋಜಕಿ, ಸ್ವಚ್ಛ ಭಾರತ್ ಮಿಷನ್, ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.