ಕೋವಿಡ್ -19 ಆತಂಕ: ದ.ಕ.: ಪ್ರವಾಸೋದ್ಯಮ ಕ್ಷೇತ್ರ ತತ್ತರ


Team Udayavani, Apr 10, 2020, 11:55 AM IST

ಕೊರೊನಾ ಆತಂಕ: ದ.ಕ.: ಪ್ರವಾಸೋದ್ಯಮ ಕ್ಷೇತ್ರ ತತ್ತರ

ಸಾಂದರ್ಭಿಕ ಚಿತ್ರ

ಮಹಾನಗರ: ಸಾಮಾನ್ಯವಾಗಿ ವಿದ್ಯಾರ್ಥಿಗಳ ಬೇಸಗೆ ರಜೆ ಸಮಯದಲ್ಲಿ ಕರಾವಳಿ ಭಾಗದ ಪ್ರವಾಸಿ ತಾಣಗಳು ಫುಲ್‌ ರಶ್‌ ಇರುತ್ತದೆ. ದೇಶ-ವಿದೇಶದ ಪ್ರವಾಸಿಗರು ಇಲ್ಲಿನ ಸೌಂದರ್ಯ ನೋಡಲು ಬರುತ್ತಾರೆ. ಆದರೆ ಈ ಬಾರಿ ಕೋವಿಡ್ -19 ಕರಿಛಾಯೆಯು ಪ್ರವಾಸೋದ್ಯಮ ಕ್ಷೇತ್ರಕ್ಕೂ ಬಹುದೊಡ್ಡ ಹೊಡೆತವುಂಟು ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ ನಾಲ್ಕು ವರ್ಷಗಳಿಂದಲೂ ವರ್ಷದಿಂದ ವರ್ಷಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು. ಆದರೆ ಈ ವರ್ಷ ಪ್ರವಾಸಿಗರ ಪ್ರಮಾಣ ಇಳಿಮುಖವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಕಳೆದ ವರ್ಷ ಸುಮಾರು 2 ಕೋಟಿಯಷ್ಟು ಪ್ರವಾಸಿಗರು ಜಿಲ್ಲೆಯ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ್ದರು. ಅದು ಈ ಬಾರಿ ಶೇ.50ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.

ಪ್ರವಾಸಕ್ಕೆಂದು ಆಗಮಿಸುವ ಮಂದಿ ಪ್ರಮುಖ ಬೀಚ್‌ಗಳು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದೇವಸ್ಥಾನ, ಪುತ್ತೂರು ದೇವಸ್ಥಾನ, ಉಪ್ಪಿನಂಗಡಿ ದೇವಸ್ಥಾನ, ಮೂಡುಬಿದಿರೆ ಸಾವಿರಕಂಬ ಬಸದಿ, ಜೈನಮಠ, ಪಿಲಿಕುಳ ನಿಸರ್ಗಧಾಮ ಸಹಿತ ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಕೊರೊನಾ ಆತಂಕವು ಈಗ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಪರಿಣಾಮ ಬೀರಿದೆ.

ಮುಂಬರುವ ದಿನಗಳಲ್ಲಿ ಚೇತ ರಿಕೆ ಕಾಣಲು ಕೆಲವು ತಿಂಗಳು ತಗಲ ಬಹುದು. ಮಾರ್ಚ್‌ ತಿಂಗಳ ಎರಡನೇ ವಾರದಿಂದಲೇ ಕೊರೊನಾ ಆತಂಕ ಆರಂಭವಾಗಿದ್ದು, ಮುಂಜಾಗ್ರತಾ ದೃಷ್ಟಿಯಿಂದ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್‌ ಘೋಷಿಸಲಾಯಿತು. ಇದ ರಿಂದ ಪ್ರವಾಸಿತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಅದೇ ರೀತಿ ಬೇಸಗೆ ರಜೆ ವೇಳೆ ಸಾಮಾನ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವ ಮಂದಿಯೂ ತಮ್ಮ ವಿಮಾನ, ರೈಲು ಟಿಕೆಟ್‌ ರದ್ದು ಗೊಳಿಸಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರವನ್ನು ಅಲವಂಭಿಸಿರುವ ಟ್ಯಾಕ್ಸಿ ಚಾಲಕರು, ಏಜೆಂಟ್‌ಗಳು, ಪ್ರವಾಸಿ ವಾಹನಗಳ ಮಾಲಕರು ಕೂಡ ಈಗ ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರಕ್ಕೆ ಪರಿಣಾಮ
ಕೊರೊನಾ ಆತಂಕದ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರಕ್ಕೂ ಬೀರಿದೆ. ಮಾರ್ಚ್‌ ತಿಂಗಳ ಎರಡನೇ ವಾರದಿಂದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಯಿತು. ಲಾಕ್‌ಡೌನ್‌ ಪೂರ್ಣಗೊಂಡ ಬಳಿಕವೂ ಪ್ರವಾಸೋದ್ಯಮ ಕ್ಷೇತ್ರ ಚೇತರಿಕೆ ಕಾಣಲು ಕೆಲವು ತಿಂಗಳು ಬೇಕಾಗಬಹುದು.
 - ಸುಧೀರ್‌ ಗೌಡ, ದ.ಕ. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ

ಆರ್ಥಿಕತೆಗೆ ಭಾರೀ ಹೊಡೆತ
ಪ್ರವಾಸಿಗರು ಇಲ್ಲದಿರುವುದರಿಂದ ಜಿಲ್ಲೆಯ ಆರ್ಥಿಕತೆಯ ಮೇಲೆಯೂ ತೀವ್ರ ಪರಿಣಾಮ ಬೀಳುತ್ತಿದೆ. ದೇಗುಲ, ಮಠ, ಮಂದಿರ, ಬೀಚ್‌ ಸಹಿತ ಪ್ರವಾಸಿ ತಾಣಗಳಿಗೆ ಹೊಂದಿಕೊಂಡಿರುವ ಸಣ್ಣಪುಟ್ಟ ಅಂಗಡಿಗಳಿಂದ ಸ್ಟಾರ್‌ ಹೊಟೇಲ್‌ನವರೆಗೆ ಎಲ್ಲರಿಗೂ ವ್ಯವಹಾರ ಇಲ್ಲದಂತಾಗಿದೆ. ಸಾರಿಗೆ ಉದ್ಯಮಕ್ಕೂ ಪೆಟ್ಟು ಬಿದ್ದಿದೆ.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.