ಶ್ರೀಲಂಕಾ ನೌಕಾಪಡೆ 60 ಮಂದಿಗೆ ಕೋವಿಡ್
Team Udayavani, Apr 26, 2020, 5:01 PM IST
ಕೊಲಂಬೋ: ಶ್ರೀಲಂಕಾ ನೌಕಾಪಡೆಯ 60 ಮಂದಿಗೆ ಕೋವಿಡ್ ಸೋಂಕು ತಗುಲಿದ್ದ ಪರಿಣಾಮ ನೌಕಾಪಡೆಯ 4 ಸಾವಿರ ಮಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಕೇವಲ ಎರಡು ದಿನಗಳಲ್ಲಿ ನೌಕಾಪಡೆಗೆ ಸಂಬಂಧಿಸಿದಂತೆ 60 ಪ್ರಕರಣಗಳು ದಾಖಲಾಗಿವೆ ಶ್ರೀಲಂಕಾ ಸೇನೆಯ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಶವೇಂದ್ರ ಸಿಲ್ವಾ ಮಾಹಿತಿ ನೀಡಿದ್ದಾರೆ.
ಈ 60 ಮಂದಿಯ ಸಂಪರ್ಕದಲ್ಲಿದ್ದ 4,000 ಮಂದಿಯನ್ನೂ ಕ್ವಾರಂಟೇನ್ ಗೆ ಒಳಪಡಿಸಲಾಗಿದೆ ಎಂದು ತಿಳಿಸಿ¨ªಾರೆ. ಮೊದಲ ಹಂತದಲ್ಲಿ 30 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಮತ್ತೆ 30 ಮಂದಿಯಲ್ಲಿ ಕೋವಿಡ್ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ನೌಕಾಪಡೆಯ ಸಿಬಂದಿ ಹಾಗೂ ಅವರ ಕುಟುಂಬದವರನ್ನು ಕ್ವಾರಂಟೈನ್ಗೆ ಒಳಪಡಿಸುವಂತೆ ಶ್ರೀಲಂಕಾ ನೌಕಾಪಡೆ ಆದೇಶಿಸಿದೆ. ಕಳೆದ ತಿಂಗಳ ಮೂರನೇ ವಾರದಿಂದ ಶ್ರೀಲಂಕಾದಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಇದುವರೆಗೆ 433 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 7 ಸಾವುಗಳಾಗಿವೆ. ಒಟ್ಟು 116 ಮಂದಿ ಸೋಂಕು ಮುಕ್ತರಾಗಿದ್ದಾರೆ. ಲಾಕ್ಡೌನ್ ಅವಧಿ ಎಪ್ರಿಲ್ 27ರಂದು ಕೊನೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.