ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು
Team Udayavani, Apr 2, 2020, 7:05 AM IST
ಕಾಸರಗೋಡು: ಕೇರಳದಲ್ಲಿ ಬುಧವಾರ 24 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದ್ದು, ಈ ಪೈಕಿ 12 ಪ್ರಕರಣಗಳೂ ಕಾಸರಗೋಡು ಜಿಲ್ಲೆಯೊಂದರಿಂದಲೇ ವರದಿಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಖ್ಯೆ 120ಕ್ಕೆ, ರಾಜ್ಯದಲ್ಲಿ ರಾಜ್ಯದಲ್ಲಿ 265ಕ್ಕೇರಿದಂತಾಗಿದೆ.
ರಾಜ್ಯದಲ್ಲಿ ಈ ವರೆಗೆ ಇಬ್ಬರು ಸಾವಿಗೀಡಾಗಿದ್ದಾರೆ. ಸೋಂಕಿತರ ಪೈಕಿ 26 ಮಂದಿ ಗುಣಮುಖರಾಗಿದ್ದಾರೆ; ಅವರಲ್ಲಿ ನಾಲ್ವರು ವಿದೇಶಿಯರು. ಪ್ರಸ್ತುತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಾಗಿ 237 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ 8,971 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 177 ಮಂದಿ ಆಸ್ಪತ್ರೆಗಳಲ್ಲಿ, 8,794 ಮಂದಿ ಮನೆಗಳಲ್ಲೂ ನಿಗಾದಲ್ಲಿದ್ದಾರೆ. ಈ ವರೆಗೆ 1,109 ಮಂದಿಯ ಸ್ಯಾಂಪಲ್‌ಗಳನ್ನು ತಪಾಸಣೆಗೆ ಕಳುಹಿಸಲಾಗಿದೆ. ಇದರಲ್ಲಿ 371 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಕೋವಿಡ್ 19 ಕೇರ್ ಸೆಂಟರ್
ಕಾಸರಗೋಡು ಮೆಡಿಕಲ್ ಕಾಲೇಜನ್ನು ನಾಲ್ಕು ದಿನಗಳೊಳಗೆ ಕೋವಿಡ್ 1 ಕೇರ್ ಸೆಂಟರ್ ಆಗಿ ಮಾರ್ಪಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಡಬ್ಬಲ್ ಲಾಕ್ ಭದ್ರತೆ
ಕಾಸರಗೋಡು ಜಿಲ್ಲೆಯ ಆಯ್ದ ಪ್ರದೇಶಗಳಲ್ಲಿ ಪೊಲೀಸರು ಡಬ್ಬಲ್ ಲಾಕ್ ಭದ್ರತೆ ಏರ್ಪಡಿಸಿದ್ದಾರೆ.
ಕಾಸರಗೋಡು ನಗರಸಭೆ ಮತ್ತು 6 ಗ್ರಾಮ ಪಂಚಾಯತ್‌ಗಳು ಪೊಲೀಸರ ಬಿಗಿ ಸುಪರ್ದಿಯಲ್ಲಿವೆ.
ಕೋವಿಡ್ 19 ಸೋಂಕು ಅತ್ಯಧಿಕ ಪ್ರಮಾಣದಲ್ಲಿ ಖಚಿತಗೊಂಡಿರುವ ಪ್ರದೇಶಗಳಲ್ಲಿ ರಾಜ್ಯ ಸರಕಾರದ ಆದೇಶ ಪ್ರಕಾರ ಈ ಡಬ್ಬಲ್ ಲಾಕ್ ಭದ್ರತೆ ಏರ್ಪಡಿಸಲಾಗಿದೆ.
ಕಾಸರಗೋಡು ನಗರಸಭೆ, ಮಧೂರು, ಮೊಗ್ರಾಲ್ ಪುತ್ತೂರು, ಚೆಂಗಳ, ಚೆಮ್ನಾಡ್, ಪಳ್ಳಿಕ್ಕರೆ, ಉದುಮ ಗ್ರಾಮ ಪಂಚಾಯತ್ ಪೊಲೀಸರ ವಿಶೇಷ ನಿಗಾದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.