ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆ; ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಇಳಿಮುಖ

Team Udayavani, Apr 17, 2020, 5:09 AM IST

ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆ; ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಇಳಿಮುಖ

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್ 19  ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆದ ಸಂದರ್ಭ ದಲ್ಲಿ ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂಬುದು ಗಮನಾರ್ಹ ಸಂಗತಿ.

ಉಡುಪಿ ಜಿಲ್ಲೆಯಲ್ಲಿ ಸಂಚಾರ ಪೊಲೀಸ್‌ ಠಾಣೆ, ಮಹಿಳಾ ಪೊಲೀಸ್‌ ಠಾಣೆ, ಸೆನ್‌ ಅಪರಾಧ ಪೊಲೀಸ್‌ ಠಾಣೆ ಗಳು ಸೇರಿ ಒಟ್ಟು 34 ಠಾಣೆಗಳಿವೆ. ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನವೊಂದಕ್ಕೆ ಕನಿಷ್ಠ ಎಂದರೂ ಸರಾಸರಿ 7 8 ಪ್ರಕರಣ ಗಳು ದಾಖಲಾಗುತ್ತಿದ್ದವು. ಸೆನ್‌ ಹಾಗೂ ಟ್ರಾಫಿಕ್‌ ಪೊಲೀಸ್‌ ಠಾಣೆಗಳಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಲಾಕ್‌ಡೌನ್‌ ಆದ ಅನಂತರ ಅಪರಾಧಗಳ ಸಂಖ್ಯೆ ಶೇ.90ರಷ್ಟು ಇಳಿಮುಖವಾಗಿದೆ. ಲಾಕ್‌ಡೌನ್‌ ನಡುವೆ 1 ವಾರ ಕಾಲ ಯಾವುದೇ ಪ್ರಕರಣ ದಾಖಲಾಗದ ಉದಾಹರಣೆಯೂ ಇದೆ.
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅವಶ್ಯ ವಾಹನ ಹೊರತುಪಡಿಸಿ ಖಾಸಗಿ ವಾಹನ ರಸ್ತೆಗೆ ಇಳಿಯದಂತೆ ಸರಕಾರ ಆದೇಶಿಸಿದೆ. ಈ ಕಾರಣದಿಂದ ಶೇ.90ರಷ್ಟು ಮಂದಿಯ ವಾಹನ ರಸ್ತೆಗೆ ಇಳಿದಿಲ್ಲ. ಇನ್ನು ಅವಶ್ಯ ಸಾಮಗ್ರಿ ತರಲು ಹೆಚ್ಚು ದೂರ ಹೋಗದೆ ತತ್‌ಕ್ಷಣ ಮನೆಗೆ ಬರುತ್ತಿದ್ದಾರೆ. ಆದ್ದರಿಂದ ರಸ್ತೆಗಳು ಖಾಲಿ ಖಾಲಿಯಾಗಿದ್ದು, ಅಪಘಾತ ಪ್ರಮಾಣ ಇಳಿಮುಖವಾಗಿದೆ.

ಮದ್ಯ ಮಾರಾಟ ಸ್ಥಗಿತವಾದ ಹಿನ್ನೆಲೆ ಯಲ್ಲಿ ಗ್ರಾಮಾಂತರ ಭಾಗದಲ್ಲಿ ಅಕ್ರಮ ಕಳ್ಳಭಟ್ಟಿ ತಯಾರಿಸುವ ಚಟುವಟಿಕೆ ನಡೆಯುತ್ತಿದೆ. ಇದರ ಜತೆಗೆ ಮದ್ಯ ಸಂಗ್ರಹಿ ಸಿಟ್ಟು, ಅಕ್ರಮವಾಗಿ ದುಪ್ಪಟ್ಟು ದರದಲ್ಲಿ ಮಾರಾಟ ಮಾಡುವ ಪ್ರಕರಣಗಳು ಹಲವು ಕಡೆಗಳಲ್ಲಿ ವರದಿಯಾಗಿವೆ.

ಸಾರ್ವಜನಿಕರಿಗೆ ಅರಿವು
ಲಾಕ್‌ಡೌನ್‌ ಸಂದರ್ಭದಲ್ಲಿ ಅಪರಾಧ ಚಟುವಟಿಕೆಗಳ ಸಂಖ್ಯೆ ಇಳಿಮುಖವಾಗಿದೆ. ಪೊಲೀಸರು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿ ಕೊಳ್ಳಲಾಗುತ್ತಿದೆ.
 ಕುಮಾರಚಂದ್ರ,
ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.