ಸಿಂಗಾಪುರ-ಕತಾರ್ ಸೋಂಕು ಹೆಚ್ಚು; ಸತ್ತವರು ಕಡಿಮೆ
Team Udayavani, May 7, 2020, 12:11 PM IST
ಮಣಿಪಾಲ: ಕೋವಿಡ್-19 ರುದ್ರತಾಂಡವ ಮುಂದುವರೆದಿದೆ. ಆದರೆ ಈ ಮಧ್ಯೆ ಆಶಾದಾಯಕ ಸಂಗತಿ ಎಂದರೆ ವಿಶ್ವದೆಲ್ಲೆಡೆ ಗುಣಮುಖ ಆಗುತ್ತಿರುವವರ ಪ್ರಮಾಣ ಹೆಚ್ಚಿದ್ದು, ಕೆಲ ದೇಶಗಳಲ್ಲಿ ಮರಣ ಪ್ರಮಾಣವೂ ಕಡಿಮೆ ಇದೆ. ಸಿಂಗಾಪುರ್ ಮತ್ತು ಕತಾರ್ ದೇಶಗಳು ಇದಕ್ಕೆ ಹೊರತಾಗಿಲ್ಲ.
ಹೌದು ಈ 2 ಪುಟ್ಟ ರಾಷ್ಟ್ರಗಳಲ್ಲಿ ಸೋಂಕು ಪ್ರಕರಣ ಹೆಚ್ಚಿದ್ದರೂ ಮರಣ ಪ್ರಮಾಣ ದರ ತುಂಬಾ ಕಡಿಮೆ ಇದೆ ಎಂದು ಹೇಳಲಾಗುತ್ತಿದ್ದು, ಸಿಂಗಾಪುರ್‌ನಲ್ಲಿ ಮರಣ ಪ್ರಮಾಣ ದರ ಶೇ. 0.1 ಕ್ಕಿಂತಲೂ ಕಡಿಮೆ ಇದ್ದರೆ, ಕತಾರ್‌ನಲ್ಲಿ ಶೇ. 0.07 ರಷ್ಟಿದೆ ಎಂದು ದಿ ನ್ಯೂಸ್ ರೈಸರ್ ವರದಿ ಮಾಡಿದೆ.
ತಜ್ಞರು ಹೇಳುವ ಪ್ರಕಾರ ಎರಡೂ ರಾಷ್ಟ್ರಗಳಲ್ಲಿ ಮರಣ ಪ್ರಮಾಣ ದರ ಕಡಿಮೆಯಾಗಲು ರೋಗಿಗಳ ಸಂಖ್ಯೆ ಮತ್ತು ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ಆರೋಗ್ಯ ವ್ಯವಸ್ಥೆಯ ಸಮರ್ಥ ಕಾರ್ಯಾಚರಣೆಯೇ ಮುಖ್ಯ ಕಾರಣ ಎಂದಿದ್ದಾರೆ.
ಕೆಲವು ದಿನಗಳ ಹಿಂದೆ ಸಿಂಗಾಪುರದಲ್ಲಿರುವ ವಿದೇಶಿ ಕಾರ್ಮಿಕರ ವಸತಿ ನಿಲಯಗಳಲ್ಲಿ ಒಮ್ಮೆಲೇ ಸೋಂಕಿನ ಅಟ್ಟಹಾಸ ಹೆಚ್ಚಾಗಿ ಇಡೀ ದೇಶಕ್ಕೆ ಹಬ್ಬಿದೆ. ಏಷ್ಯಾದ ಹೆಚ್ಚು ಸೋಂಕು ಪ್ರಕರಣ ಹೊಂದಿರುವ ರಾಷ್ಟ್ರಗಳಲ್ಲಿ ಸಿಂಗಾಪುರವೂ ಗುರುತಿಸಿಕೊಂಡಿದೆ.
ಆದರೆ, ಅಚ್ಚರಿ ಎಂಬಂತೆ ಮರಣ ಪ್ರಮಾಣ ಮಾತ್ರ ತುಂಬಾ ಕಡಿಮೆ ಇದ್ದು, ಕಳೆದ ವಾರದಲ್ಲಿ 102 ವರ್ಷದ ಹಿರಿಯ ಮಹಿಳೆಯೊಬ್ಬರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಇಲ್ಲಿಯವರೆಗೆ ಸಿಂಗಾಪುರದಲ್ಲಿ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದರೂ ಸಾವಿನ ಸಂಖ್ಯೆ ಮಾತ್ರ 18 ಇದೆ.
ಕತಾರ್‌ನಲ್ಲಿ ಮರಣ ಪ್ರಮಾಣ ಶೇ. 0.07 ರಷ್ಟಿದ್ದು, ಒಟ್ಟು 16 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆದರೆ ಕೇವಲ 12 ಮಂದಿ ಬಲಿಯಾಗಿದ್ದಾರೆ. ಎರಡೂ ದೇಶಗಳು ತಮ್ಮ ಜನಸಂಖ್ಯೆಯ ಅನುಗುಣವಾಗಿ ವೈರಸ್ ಮರಣ ಪ್ರಮಾಣವನ್ನು ಕಡಿಮೆ ಮಾಡಿವೆ. 1 ಲಕ್ಷ ಮಂದಿಗೆ ಶೇ. 0.5ಕ್ಕಿಂತಲೂ ಮರಣ ಪ್ರಮಾಣ ಕಡಿಮೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.