ಕೋವಿಡ್ ಮೂರನೇ ಅಲೆ ಭೀತಿ ಶುರು; ತಗ್ಗಿದ ಸೋಂಕಿನ ಸಂಖ್ಯೆ-ನಿಲ್ಲದ ಸಾವಿನ ಪ್ರಮಾಣ
ಮಕ್ಕಳಿಗೆ ವಿಶೇಷ ವಾರ್ಡ್
Team Udayavani, Aug 4, 2021, 7:37 PM IST
ಹಾವೇರಿ: ಜಿಲ್ಲೆಯಲ್ಲಿ ಸದ್ಯ ಕೋವಿಡ್ ಎರಡನೇ ಅಲೆ ಸೋಂಕಿನ ಪ್ರಮಾಣ ತಗ್ಗಿದ್ದರೂ ಜನತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಪರಿಣಾಮ ಕೋವಿಡ್ 3ನೇ ಅಲೆ ಭೀತಿ ಶುರುವಾಗಿದೆ. ಜಿಲ್ಲಾಡಳಿತ ಈಗಿನಿಂದಲೇ ಎಚ್ಚೆತ್ತುಕೊಂಡು ಕೋವಿಡ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಲ್ಲಿ ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ತಡೆಗಟ್ಟಬಹುದಾಗಿದೆ.
ರಾಜ್ಯದೆಲ್ಲೆಡೆ ಕೋವಿಡ್ ಎರಡನೇ ಅಲೆ ಅಬ್ಬರ ಜೋರಾಗಿದ್ದಾಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಇದ್ದವು. ಆಗ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪರಿಣಾಮ ಎರಡನೇ ಅಲೆಯ ಮಧ್ಯದ ದಿನಗಳಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಜನ ಸೋಂಕಿಗೊಳಗಾದರು. ಇದರ ಪರಿಣಾಮ ಬೆಡ್, ಔಷಧೋಪಚಾರಕ್ಕೆ ಪರದಾಡುವಂತಾಗಿತ್ತು. ಬಳಿಕ ಸರಿಯಾದ ಚಿಕಿತ್ಸೆ ಸಿಗದೇ ನೂರಾರು ಜನ ಪ್ರಾಣ ಕಳೆದುಕೊಂಡರು. ಆಸ್ಪತ್ರೆಗೆ ಬರಲಾಗದೇ ಹಲವರು ಮನೆಗಳಲ್ಲೇ ಜೀವ ಕಳೆದುಕೊಂಡರು. ಇಷ್ಟು ಕರಾಳ ದಿನಗಳನ್ನು ಅನುಭವಿಸಿರುವ ಜನತೆ ಈಗೀಗ ಕೊರೊನಾ ಮಾರ್ಗಸೂಚಿಗಳನ್ನೇ ಮರೆತು ಬಿಟ್ಟಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಎದುರಿಸುವ ಭೀತಿ ಶುರುವಾಗಿದೆ.
ತಗ್ಗದ ಸಾವಿನ ಪ್ರಮಾಣ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗಿವೆ. ನಿತ್ಯವೂ ಎರಡಂಕಿ ಒಳಗೆ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ವಾರದಲ್ಲಿ ಐದಾರು ಸಾವಿನ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಗ್ಗಿದರೂ ಸಾವು ಮಾತ್ರ ತಪ್ಪದಿರುವುದು ಮತ್ತಷ್ಟು ಚಿಂತೆಗೀಡು ಮಾಡಿದೆ. ಮೊದಲ ಹಾಗೂ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಸಾವಿನ ಪ್ರಕರಣಗಳು ಜಿಲ್ಲೆಯಿಂದ ದಾಖಲಾಗಿದ್ದವು. ಹೀಗಾಗಿ ರಾಜ್ಯದ ವಿಶೇಷ ತಜ್ಞ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ ವರದಿಯಲ್ಲಿ ಏನಿದೆಂಬುದು ಮಾತ್ರ ಇನ್ನೂ ಬಹಿರಂಗವಾಗಿಲ್ಲ.
ಕೋವಿಡ್ ಮಾರ್ಗಸೂಚಿ ಕಣ್ಮರೆ: ಕೋವಿಡ್ ಕರಾಳ ದಿನಗಳನ್ನು ಕಣ್ಣಾರೆ ಕಂಡು ಅನುಭವಿಸಿರುವ ಕೆಲ ಜನರನ್ನು ಹೊರತುಪಡಿಸಿದರೆ ಜಿಲ್ಲೆಯಲ್ಲಿ ಬಹುತೇಕರು ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಆರಂಭದಲ್ಲಿ ಅನುಸರಿಸಿದ್ದ ನಿಯಮಗಳೆಲ್ಲ ಈಗ ಮಾಯವಾಗಿವೆ. ಸಾಮಾಜಿಕ ಅಂತರವಂತೂ ಎಲ್ಲೂ ಕಾಣಿಸುತ್ತಿಲ್ಲ. ನಗರದ ಪ್ರಮುಖ ಸರ್ಕಲ್‌ಗಳಲ್ಲಿ, ಲಾಲ್‌ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯಲ್ಲಿ ನಡೆಸುವ ಸಂತೆಗಳಲ್ಲಿ ಜನಜಂಗುಳಿ ಕಂಡು ಬರುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬೇಕಾಬಿಟ್ಟಿಯಾಗಿ ವರ್ತಿಸುತ್ತಿರುವುದು ಕಂಡು ಬರುತ್ತಿದೆ.
ಲಸಿಕಾಕರಣ ಹೆಚ್ಚಾಗಲಿ: ಮಂದಗತಿಯಲ್ಲಿ ಸಾಗುತ್ತಿದ್ದ ಕೋವಿಡ್ ಲಸಿಕಾಕರಣ ಪ್ರಕ್ರಿಯೆಗೆ ಆಗಿನ ಜಿಲ್ಲಾ ಉಸ್ತುವಾರಿ ಸಚಿವ, ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿದ್ದರು. ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ್ದ ಅವರು, ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ಹೆಚ್ಚು ಹಾನಿ ಮಾಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ನೀಡಿಕೆ ಪ್ರಮಾಣ ಹೆಚ್ಚಳವಾಗಬೇಕು. ನಿತ್ಯ ಕನಿಷ್ಠ 10 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲೇಬೇಕೆಂದು ತಾಕೀತು ಮಾಡಿದ್ದರು. ಆಗಿನಿಂದ ಈಗ ನಿತ್ಯವೂ 10 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಲಸಿಕಾಕರಣ ಚುರುಕುಗೊಂಡಿದೆ. ಈವರೆಗೆ 4,09,844 ಜನರಿಗೆ ಮೊದಲ ಡೋಸ್ ನೀಡಲಾಗಿದ್ದರೆ, 98,134 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಈವರೆಗೆ 5,07,978 ಡೋಸ್ ಲಸಿಕೆ ಹಾಕಲಾಗಿದೆ. ಆದರೂ ಲಸಿಕಾಕರಣವನ್ನು ಮತ್ತಷ್ಟು ಚುರುಕುಗೊಳಿಸಿ 3ನೇ ಅಲೆಯ ಅಪಾಯದಿಂದ ಪಾರಾಗಬೇಕಿದೆ.
ಸಂಭವನೀಯ ಕೋವಿಡ್ 3ನೇ ಅಲೆಯ ಆತಂಕ ಎದುರಾಗುವ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳ ಚಿಕಿತ್ಸೆಗಾಗಿ ವಿಶೇಷ ವಾರ್ಡ್, ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನತೆ ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಈಗಿನಿಂದಲೇ ಜನರು ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಾಗಬೇಕು.
-ಎಚ್.ಎಸ್.ರಾಘವೇಂದ್ರಸ್ವಾಮಿ, ಡಿಎಚ್‌ಒ
–ವೀರೇಶ ಮಡ್ಲೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.