ಮಾಸಾಂತ್ಯಕ್ಕೆ 10 ಲಕ್ಷ ಕೇಸ್‌? ಸೋಂಕು ವ್ಯಾಪಿಸುವಿಕೆಗೆ ಕಡಿವಾಣ ಹಾಕಲೇಬೇಕಾದ ಅನಿವಾರ್ಯ


Team Udayavani, Jun 14, 2020, 11:29 AM IST

ಮಾಸಾಂತ್ಯಕ್ಕೆ 10 ಲಕ್ಷ ಕೇಸ್‌? ಸೋಂಕು ವ್ಯಾಪಿಸುವಿಕೆಗೆ ಕಡಿವಾಣ ಹಾಕಲೇಬೇಕಾದ ಅನಿವಾರ್ಯ

ಹೊಸದಿಲ್ಲಿ: ಕಳೆದೊಂದು ವಾರದಲ್ಲಿ ಪ್ರತಿದಿನವೂ ಸುಮಾರು 10 ಸಾವಿರದಷ್ಟು ಪ್ರಕರಣಗಳಿಗೆ ಸಾಕ್ಷಿಯಾಗುವ ಮೂಲಕ ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸೋಂಕು ವ್ಯಾಪಿಸುವಿಕೆಗೆ ಕಡಿವಾಣ ಹಾಕದೇ ಇದ್ದರೆ, ಪ್ರಸಕ್ತ ಮಾಸಾಂತ್ಯದ ವೇಳೆಗೆ ದೇಶಾದ್ಯಂತ ಸೋಂಕಿತರ ಸಂಖ್ಯೆ 10 ಲಕ್ಷ ದಾಟುವುದರಲ್ಲಿ ಅನುಮಾನವಿಲ್ಲ ಎಂದು ಅಧ್ಯಯನ ವೊಂದು ಎಚ್ಚರಿಸಿದೆ.

ಕೋವಿಡ್ ಸೋಂಕು ಕಾಳ್ಗಿಚ್ಚಿನಂತೆ ವ್ಯಾಪಕವಾಗಿ ಹಬ್ಬುತ್ತಿದ್ದು, ಪ್ರಸಕ್ತ ತಿಂಗಳಲ್ಲಂತೂ ಸೋಂಕಿನ ವ್ಯಾಪಿಸುವಿಕೆ ಕಂಡು ಕೇಳರಿಯದಷ್ಟು ವೇಗ ಪಡೆದಿದೆ. ಜೂ.1ರಂದು ದೇಶಾದ್ಯಂತ ಸೋಂಕಿತರ ಸಂಖ್ಯೆ 1,90,535 ಆಗಿತ್ತು. ಜೂ.13ರ ವೇಳೆಗೆ ಇದು 3 ಲಕ್ಷ ದಾಟಿದೆ. ಅಂದರೆ, ಕೇವಲ 13 ದಿನಗಳಲ್ಲಿ 1.25 ಲಕ್ಷದಷ್ಟು ಮಂದಿಗೆ ಸೋಂಕು ದೃಢಪಟ್ಟಿದೆ. ಕೇವಲ ಸೋಂಕಿತರು ಮಾತ್ರವಲ್ಲದೆ ಸಾವಿನ ಸಂಖ್ಯೆಯೂ ಗಣನೀಯವಾಗಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜೂ.1ರಿಂದ 13ರ ವರೆಗಿನ ಅವಧಿಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಕೊರೊನಾಕ್ಕೆೆ ಬಲಿಯಾಗಿದ್ದಾರೆ. ಇದು ಹೀಗೇ ಮುಂದು ವರಿದರೆ ಜೂನ್‌ ಅಂತ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಾಗಲಿದ್ದಾರೆ.

ಮುಂದುವರಿದಿದೆ ಪ್ರಯತ್ನ: ಇದೇ ವೇಳೆ, ಸೋಂಕಿನ ವ್ಯಾಪಿಸುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದ್ದು, ಕೇಂದ್ರ ಸರಕಾರವು ಕೋವಿಡ್ ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ 1,43,737 ಸ್ಯಾಂಪಲ್‌ಗಳನ್ನು ಪರೀಕ್ಷಿಸಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಹೇಳಿದೆ. ಈವರೆಗೆ ದೇಶಾದ್ಯಂತ 5.57 ಲಕ್ಷ ಸ್ಯಾಂಪಲ್‌ಗ‌ಳ ಪರೀಕ್ಷೆ ನಡೆದಿದೆ ಎಂದೂ ಐಸಿಎಂಆರ್‌ ತಿಳಿಸಿದೆ.

“ನೆಗೆಟಿವ್‌’ ಪ್ರಮಾಣಪತ್ರ ಕಡ್ಡಾಯ: ಪಶ್ಚಿಮ ಏಷ್ಯಾ ರಾಷ್ಟ್ರಗಳಿಂದ ರಾಜ್ಯಕ್ಕೆ ಮರಳುವ ವಲಸಿಗರು ಕಡ್ಡಾಯವಾಗಿ ಕೊರೊನಾ ನೆಗೆಟಿವ್‌ ಪ್ರಮಾಣಪತ್ರ ಹೊಂದಿರಲೇಬೇಕು ಎಂದು ಕೇರಳ ಸರಕಾರ ಸ್ಪಷ್ಟ ಪಡಿಸಿದೆ. ಶನಿವಾರ ಈ ವಿಷಯ ತಿಳಿಸಿದ ರಾಜ್ಯ ಸರಕಾ ರದ ಪ್ರಧಾನ ಕಾರ್ಯದರ್ಶಿ ಡಾ| ಕೆ.ಇಳಂಗೋವನ್‌, ಜೂ. 20ರಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳಿಂದ ಖಾಸಗಿ ವಿಮಾನದ ಮೂಲಕ ಕೇರಳಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್‌ ಪ್ರಮಾಣಪತ್ರ ಹೊಂದಿರಲೇಬೇಕು. ವಲಸಿಗರಿಂದ ಸೋಂಕು ಹೆಚ್ಚಳ ವಾಗುತ್ತಿರುವುದನ್ನು ತಡೆಯಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದರು. ಆದರೆ ವಂದೇ ಭಾರತ್‌ ಮಿಷನ್‌ ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಒಂದೇ ದಿನ ದೇಶಾದ್ಯಂತ 11,458 ಮಂದಿಗೆ ಸೋಂಕು
ದೇಶವಾಸಿಗಳ ಭೀತಿ ಇನ್ನಷ್ಟು ಹೆಚ್ಚಿಸುವಂತೆ ಒಂದೇ ದಿನ ದೇಶಾದ್ಯಂತ 11,458 ಮಂದಿಗೆ ಸೋಂಕು ತಗುಲಿದೆ. ಶುಕ್ರವಾರ ಬೆಳಗ್ಗೆ 8ರಿಂದ ಶನಿವಾರ ಬೆಳಗ್ಗೆ 8ರವರೆಗೆ ಅಂದರೆ 24 ಗಂಟೆಗಳ ಅವಧಿಯಲ್ಲಿ 386 ಮಂದಿ ಮೃತಪಟ್ಟು, 11,458 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 3,493 ಮಂದಿಗೆ ಸೋಂಕು ದೃಢಪಡುವ ಮೂಲಕ, ರಾಜ್ಯದ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ. ದೇಶದಲ್ಲಿ ಪ್ರಕರಣಗಳ ಸಂಖ್ಯೆ ಲಕ್ಷ ದಾಟಿರುವ ಮೊದಲ ರಾಜ್ಯ ಎಂಬ ಕುಖ್ಯಾತಿಗೆ ಮಹಾ ರಾಷ್ಟ್ರ ಪಾತ್ರವಾಗಿದೆ. ಇನ್ನು, ಈ ಪಟ್ಟಿಯಲ್ಲಿ ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು , ದೆಹಲಿ ಮೂರನೇ ಸ್ಥಾನದಲ್ಲಿದೆ. ಈ ನಡುವೆ, ದೇಶದಲ್ಲಿ ಗುಣಮುಖ ಪ್ರಮಾಣ ಶೇ.49.94ಕ್ಕೇರಿದ್ದು, ಈವರೆಗೆ 1,54,330 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತ
ಕೋವಿಡ್ ಸೋಂಕಿನಿಂದ ಜಾಗತಿಕವಾಗಿ ಮಹಿಳೆಯರಿಗಿಂತ ಪುರುಷರು ಅಧಿಕ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿರುವುದು ದೃಢಪಟ್ಟಿದೆ. ಆದರೆ ಭಾರತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರುವುದು ಅಧ್ಯಯನವೊಂದರಲ್ಲಿ ತಿಳಿದು ಬಂದಿದೆ. ಜರ್ನಲ್‌ ಆಫ್ ಗ್ಲೋಬಲ್‌ ಹೆಲ್ತ್‌ ಸೈನ್ಸ್‌ ಪ್ರಕಟಿಸಿರುವ ಅಧ್ಯಯನದ ಪ್ರಕಾರ, ಭಾರತದಲ್ಲಿ ಮೇ 20ರವರೆಗೆ ಕೊರೊನಾ ಮರಣ ಪ್ರಮಾಣವು ಪುರುಷರಲ್ಲಿ ಶೇ.2.9ರಷ್ಟು ಇದ್ದರೆ, ಮಹಿಳೆಯರಲ್ಲಿ ಶೇ.3.3ರಷ್ಟು ಇದೆ. 5ರಿಂದ 19 ವರ್ಷದ ವರೆಗಿನ ಪುರುಷರಲ್ಲಿ ಮರಣ ಪ್ರಮಾಣ ಅತಿ ಕಡಿಮೆ ಇರುವುದು ಕಂಡು ಬಂದಿದೆ.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.