ಲಾಕ್‌ಡೌನ್‌ ಸಡಿಲಿಸಿದ ಬಳಿಕ ಮತ್ತೆ ಕೋವಿಡ್ ಕಾಟ

Team Udayavani, May 14, 2020, 6:25 PM IST

ಲಾಕ್‌ಡೌನ್‌ ಸಡಿಲಿಸಿದ ಬಳಿಕ ಮತ್ತೆ ಕೋವಿಡ್ ಕಾಟ

ಬರ್ಲಿನ್‌: ಹೆಚ್ಚಿನ ಸಂಖ್ಯೆಯ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರೂ ಸಾವನ್ನಪ್ಪಿದವರ ಸಂಖ್ಯೆ ಫ್ರಾನ್ಸ್‌, ಇಟಲಿ ಮತ್ತು ಅಮೆರಿಕಕ್ಕಿಂತ ಕಡಿಮೆಯಾಗುವಂತೆ ನೋಡಿಕೊಂಡಿದ್ದ ಜರ್ಮನ್‌ನಲ್ಲಿ ಈಗ ಸೋಂಕಿನ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿರುವುದು ಆತಂಕಕ್ಕೆಡೆಮಾಡಿಕೊಟ್ಟಿದೆ.

ಒಂದು ಹಂತದಲ್ಲಿ ಇಡೀ ಜಗತ್ತೇ ತನ್ನ ಕಡೆಗೆ ನೋಡುವಂತೆ ಮಾಡಿದ್ದ ಜರ್ಮನಿಯ ಪರಿಸ್ಥಿತಿ ಈಗ ಆತಂಕದಲ್ಲಿದೆ. ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಾಕ್‌ಡೌನ್‌ ಸಡಿಲಿಸಿದ್ದ ದೇಶಕ್ಕೆ ಈಗ ಅದೇ ಮುಳುವಾದಂತಿದೆ. ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಗೊಳಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆರ್ಥಿಕ ಹಿಂಜರಿತವು ವರ್ಷದ ಮಧ್ಯಭಾಗದವರೆಗೆ ಇರುತ್ತದೆ ಎಂದು ಜರ್ಮನಿಯ ಆರ್ಥಿಕ ಸಚಿವಾಲಯ ಹೇಳಿತ್ತು. ಹಾಗಾಗಿ ಲಾಕ್‌ಡೌನ್‌ ಸಡಿಲಿಸುವ ನಿರ್ಧಾರಕ್ಕೆ ಸರಕಾರ ಬಂದಿತ್ತು.

ಎಡವಿದ್ದೆಲ್ಲಿ?
ಆರ್ಥಿಕ ಸುಧಾರಣೆಗಾಗಿ ಜರ್ಮನ್‌ ಸರಕಾರವು ಈಗಾಗಲೇ 750 ಬಿಲಿಯನ್‌ ಯುರೊ ಮೌಲ್ಯದ ಆರ್ಥಿಕ ಪರಿಹಾರ ನಿಧಿಯನ್ನು ಘೋಷಿಸಿದೆ. ದೇಶದ ಆರ್ಥಿಕ ವ್ಯವಹಾರ ಚಟುವಟಿಕೆಗಳಿಗೆ ಸಾಲ ನೀಡುವುದರೊಂದಿಗೆ, ಷೇರು ವಹಿವಾಟು ಮತ್ತು ದಿನಗೂಲಿ ಕಾರ್ಮಿಕರ ಆದಾಯ ಮಟ್ಟವನ್ನು ಬೆಂಬಲಿಸುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ.

ಆರೋಗ್ಯ ರಕ್ಷಣಾ ಉತ್ಪನ್ನಗಳ ತಯಾರಿಕೆ ಘಟಕಗಳನ್ನು ಮತ್ತು ಕಂಪನಿಗಳನ್ನು ಶೀಘ್ರವೇ ಪುನಃ ತೆರೆಯಲು ಸರಕಾರ ನಿರ್ಧರಿಸಿತ್ತು. ಸಾಮಾಜಿಕ ಅಂತರವನ್ನು ಪಾಲಿಸುವ ಅನಿವಾರ್ಯತೆ ಇರುವ ಕಾರಣ ಹೋಟೆಲ್‌ಗ‌ಳು ಮತ್ತು ರೆಸ್ಟೋರೆಂಟ್‌ಗಳಿಗೆ ಎಚ್ಚರಿಕೆಯಿಂದ ನಿಯಂತ್ರಿತ ರೀತಿಯಲ್ಲಿ ಕಾರ್ಯಾಚರಿಸಲು ಅನುಮತಿ ನೀಡಲಾಗಿತ್ತು. ಉಳಿದಂತೆ ಪಬ್‌-ಕ್ಲಬ್‌ಗಳನ್ನು, ಚಿತ್ರ ಮಂದಿರಗಳನ್ನು ಹಾಗೂ ಮಾಲ್‌ಗ‌ಳನ್ನು ಸದ್ಯಕ್ಕೆ ಮುಚ್ಚಿರಬೇಕು ಎಂದಿತ್ತು.

ಏನು ಮಾಡಿತ್ತು?
ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಯೋಜನೆ ಜತೆಗೆ 800 ಚದರ ಮೀಟರ್‌ ವಿಸ್ತೀರ್ಣದ ವರೆಗಿನ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿತ್ತು. ಶಾಪಿಂಗ್‌ ಮಾಡುವಾಗ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಪಾಲಿಸಲೇಬೇಕಾದ ಕೆಲವು ಅಗತ್ಯ ನಿಯಮಗಳನ್ನು ರೂಪಿಸಿದ್ದು, ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಲು ಸೂಚಿಸಲಾಗಿತ್ತು. ಆದರೆ ಆಗಸ್ಟ್‌ 31 ರವರೆಗೆ ಯಾವುದೇ ದೊಡ್ಡ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ. ಲಾಕ್‌ಡೌನ್‌ ಅನ್ನು ತೆರವುಗೊಳಿಸಲಾಗುವುದಾದರೂ ಜನರು ಬಹಳ ಎಚ್ಚರಿಕೆ ವಹಿಸಬೇಕು ಎಂದು ಹೇಳಲಾಗಿತ್ತು. ಇಷ್ಟೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಜರ್ಮನ್‌ನಲ್ಲಿ ಕಡಿಮೆಯಾಗಿದ್ದ ಕೊರೊನಾ ಸೋಂಕಿತರ ಪ್ರಮಾಣ ಮತ್ತೆ ಏರಿಕೆಯಾಗಿರುವುದು ಇತರ ರಾಷ್ಟ್ರಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.