ಕೋವಿಡ್ಗೆ ಗದಗ ಜಿಲ್ಲೆಯಲ್ಲಿ ಮತ್ತೊಂದು ಬಲಿ
Team Udayavani, Jun 27, 2020, 9:38 PM IST
ಗದಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ವೃದ್ಧೆಯೊಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ದಿಂದ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ.
ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಗ್ರಾಮದ 95 ವರ್ಷದ ವೃದ್ಧೆ (ಪಿ.11231)ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಜೂ. 25ರಂದು ವೃದ್ಧೆಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ನಂತರ ಕೋವಿಡ್ ಸೋಂಕು ತಗುಲಿರುವ ಬಗ್ಗೆ ವರದಿ ಬಂದಿತ್ತು. ಆದರೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಕೋವಿಡ್-19 ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಇನ್ನು ಕೋವಿಡ್ ಬರದಿ ಬರುವ ಮುನ್ನ ಜಿಮ್ಸ್ ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಸಿಟಿ ಸ್ಕ್ಯಾನ್ , ರಕ್ತ ಪರೀಕ್ಷೆಗೆ ಕರೆದೊಯ್ದಿದ್ದರು. ಇದರಿಂದಾಗಿ ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ಸಹಜವಾಗಿ ಆತಂಕ ಆವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.