ಕೋವಿಡ್ ಸೋಂಕಿಗೆ ಕೊಡಗು ಜಿಲ್ಲೆಯಲ್ಲಿ ವೃದ್ಧ ಸಾವು: ಸಾವಿನ ಸಂಖ್ಯೆ 22ಕ್ಕೆ ಏರಿಕೆ
Team Udayavani, Sep 5, 2020, 4:12 PM IST
ಮಡಿಕೇರಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ವೃದ್ಧ ಸಾವನ್ನಪ್ಪಿದ್ದಾರೆ, ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಸೋಮವಾರಪೇಟೆ ತಾಲೂಕು ಕುಸುಬೂರು ನಿವಾಸಿ 70 ವರ್ಷದ ವೃದ್ಧರೊಬ್ಬರು ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಳಗಾಗಿದ್ದರು. ಆದರೆ ಜ್ವರ ಕಡಿಮೆಯಾಗದ ಕಾರಣ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದು. ವ್ಯಕ್ತಿಗೆ ತುಂಬಾ ಸುಸ್ತು ಇದ್ದ ಕಾರಣ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರು ಸಲಹೆ ನೀಡಿರುತ್ತಾರೆ.
ಅದರಂತೆ ಆಗಸ್ಟ್ 30ರಂದು ಅವರು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರೆ ಈ ವರದಿಯಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಅವರ ದೇಹದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಇದ್ದ ಕಾರಣ ಕೂಡಲೇ ಐ.ಸಿ.ಯು.ನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಿದ್ದಾರೆ, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.