ಸಾಲಿಗ್ರಾಮ: ಮೃತಪಟ್ಟು ಐದು ದಿನದ ಅನಂತರ ಪಾಸಿಟಿವ್ ರಿಪೋಟ್
Team Udayavani, Aug 25, 2020, 5:06 PM IST
ಕೋಟ: ಗೃಹಿಣಿಯೋರ್ವರು ಮೃತಪಟ್ಟು ಐದು ದಿನಗಳ ಬಳಿಕ ಆಕೆಗೆ ಕೋವಿಡ್ ಪಾಸಿಟಿವ್ ಎನ್ನುವ ರಿಪೋರ್ಟ್ ಬಂದಿದ್ದು ಮನೆಯನ್ನು ಕಂಟೊನ್ಮೆಂಟ್ ಝೋನ್‌ಗೊಳಿಸಲು ಬಂದ ಅಧಿಕಾರಿಗಳ ವಿರುದ್ಧ ಕುಟುಂಬಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸಾಲಿಗ್ರಾಮದ ಕಾರ್ಕಡದಲ್ಲಿ ಆ.24ರಂದು ಸಂಭವಿಸಿದೆ.
ಇಲ್ಲಿನ ನಿವಾಸಿಯೋರ್ವರು ಅನಾರೋಗ್ಯದಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ. 19ರಂದು ಆಕೆ ಮೃತಪಟ್ಟಿದ್ದು ಸಾವಿಗೆ ಬಹು ಅಂಗಾಗ ವೈಫಲ್ಯ ಕಾರಣ ಎನ್ನಲಾಗಿತ್ತು. ಅನಂತರ ಉಡುಪಿ ಸರಕಾರಿ ಆಸ್ಪತ್ರೆಯ ಮೂಲಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು. ಈ ಸಂದರ್ಭ ಕೋವಿಡ್ ಸೋಂಕಿನ ಲಕ್ಷಣವಿಲ್ಲ ಎಂದು ತಿಳಿಸಲಾಗಿತ್ತು. ಇದೀಗ ಐದು ದಿನಗಳ ಅನಂತರ ಆಕೆಯಲ್ಲಿ ಕೋವಿಡ್ ಸೋಂಕಿದೆ ಎನ್ನುವುದು ವರದಿ ನೀಡಲಾಗಿದೆ. ಹೀಗಾಗಿ ಶವದ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದವರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಂಟೊನ್ಮೆಂಟ್ ಝೋನ್‌ಗೊಳಿಸಲು ಬಂದ ಅಧಿಕಾರಿಗಳನ್ನು ಕುಟುಂಬಿಕರು ತರಾಟೆಗೆ ತೆಗೆದುಕೊಂಡರು ಹಾಗೂ ಅಧಿಕಾರಿಗಳ ಯಡವಟ್ಟಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಸುಮಾರು 4ತಾಸುಗಳ ಕಾಲ ವಾದ-ವಿವಾದ ನಡೆದು ಅನಂತರ ಕೋಟ ಪೊಲೀಸ್ ಉಪನಿರೀಕ್ಷಕ ಸಂತೋಷ್ ಹಾಗೂ ಸ್ಥಳೀಯ ಪ.ಪಂ. ಸದಸ್ಯ ರಾಜು ಪೂಜಾರಿ, ಸಂಜೀವ ದೇವಾಡಿಗ ಮುಂತಾದವರ ಮಧ್ಯಸ್ಥಿಕೆಯಲ್ಲಿ ಪ್ರಕ್ರಿಯೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.