ಮನೆಯಲ್ಲೇ ಚಿಕಿತ್ಸೆ ಪಡೆದು ಕೋವಿಡ್ ಗೆದ್ದ 105 ವರ್ಷದ ಕಮಲಮ್ಮ
Team Udayavani, Sep 12, 2020, 2:52 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ತಾಲೂಕಿನ ಕಾತರಕಿ ಗ್ರಾಮದ 105 ವರ್ಷದ ಹಿರಿಯ ಜೀವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆದು ಕೋವಿಡ್ ಗೆದ್ದು ಗುಣಮುಖರಾಗಿ ಎಲ್ಲರ ಗಮನ ಸೆಳೆದಿದ್ದಾರೆ.
ಕಳೆದ ವಾರವರಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ ಐಸೋಲೇಶನ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಜ್ವರ ಸೇರಿದಂತೆ ಮೊದಲಾದ ತೊಂದರೆ ಅನುಭವಿಸುತ್ತಿದ್ದ ಇವರನ್ನು ಕೋವಿಡ್ ಪರೀಕ್ಷೆ ಒಳಪಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಉಳಿದಂತೆ ಯಾವುದೇ ತೊಂದರೆ ಇರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆದರು. ಒಂದು ವಾರ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.
ಮತ್ತೂಮ್ಮೆ ಟೆಸ್ಟ್ ಮಾಡಿಸಿದಾಗ ನೆಗಟಿವ್ ಬಂದಿದ್ದು, ಕೋವಿಡ್ ಗೆದ್ದು ಎಲ್ಲರ ಗಮನ ಸೆಳೆದಿದ್ದಾರೆ.
ಕಮಲಮ್ಮ ಅವರಿಗೆ ಇತರೆ ಕಾಯಿಲೆಗಳು ಇರದೆ ಇರುವುದರಿಂದ ಆಸ್ಪತ್ರೆಗೆ ಹೋಗುವುದಕ್ಕೆ ಹಿಂದೇಟು ಹಾಕಿದ್ದರು. ಹೀಗಾಗಿ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಯಿತು. ಅವರೀಗ ಕೋವಿಡ್ ಗೆದ್ದು ಬಂದಿದ್ದಾರೆ. ಇನ್ನೂ ಕಮಲಮ್ಮ ಅವರಿಗೆ ಚಿಕಿತ್ಸೆ ನೀಡಿದ ಡಾ| ಶ್ರೀನಿವಾಸ ಹ್ಯಾಟಿ ಅವರು, ನನ್ನ ವೃತ್ತಿ ಬದುಕಿನಲ್ಲಿ ಇದು ಸವಾಲು ಎನ್ನುವಂತೆ ಆಗಿತ್ತು. ಆದರೂ ಯಾವುದೇ ಕಾಯಿಲೆಗಳು ಇರದೆ ಇರುವುದರಿಂದ ಸಾಮಾನ್ಯ ಚಿಕಿತ್ಸೆ ನೀಡಲಾಗಿದೆ. ಈಗ ಅವರ ಕೋವಿಡ್ ವರದಿ ನೆಗಟಿವ್ ಬಂದಿದೆ. ನಿಜಕ್ಕೂ ಕೋವಿಡ್‌ಗೆ ಭಯ ಪಡುವವರು ಅಜ್ಜಿಯನ್ನು ನೋಡಿ ಕಲಿಯಬೇಕಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.