ಕೋವಿಡ್ ಮರಣ: ಕುಟುಂಬದವರಿಗೆ ಪರಿಹಾರ
Team Udayavani, Oct 17, 2021, 7:47 PM IST
ಉಡುಪಿ: ಸರಕಾರದ ಆದೇಶದಂತೆ ಕೋವಿಡ್ -19ನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ಧ ವಾರಸುದಾರರ ಅಥವಾ ಕುಟುಂಬದ ಓರ್ವ ಸದಸ್ಯರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೋವಿಡ್ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ ಒಂದು ಬಾರಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರದ ಸಂಧ್ಯಾಸುರಕ್ಷಾ ಯೋಜನೆ ಲೆಕ್ಕ ಶೀರ್ಷಿಕೆಯ ಅನುದಾನದಿಂದ 1 ಲ.ರೂ., ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ ಲೆಕ್ಕ ಶೀರ್ಷಿಕೆಯ ಅನುದಾನದಿಂದ ತಲಾ 50,000 ರೂ. ಪರಿಹಾರ ನೀಡಲಾಗುತ್ತದೆ.
ಪರಿಹಾರವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಸಂಬಂಧಪಟ್ಟವರು ಪರಿಹಾರ ಪಡೆಯಲು ತಾಲೂಕು ಕಚೇರಿ, ಎಲ್ಲ ನಾಡ ಕಚೇರಿ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ತಮ್ಮ ವ್ಯಾಪ್ತಿಯ ತಾಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1ರಲ್ಲಿ ಮಾಹಿತಿ ಹಾಗೂ ನಮೂನೆ -2ರಲ್ಲಿ ಸ್ವಯಂ ಘೋಷಣ ಪತ್ರ, ನಮೂನೆ -3ರಲ್ಲಿ ನಿರಾಕ್ಷೇಪ ಣ ಪತ್ರವನ್ನು ಭರ್ತಿ ಮಾಡಿ ತಾಲೂಕು ಕಚೇರಿಗೆ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್
ಸಲ್ಲಿಸಬೇಕಾದ ದಾಖಲೆಗಳು
ಕೋವಿಡ್ -19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ, ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ, ಮೃತ ವ್ಯಕ್ತಿಯ ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಮೃತ ವ್ಯಕ್ತಿಯ ಬಿಪಿಎಲ್ ಪಡಿತರ ಚೀಟಿ, ಅರ್ಜಿದಾರರ ಆಧಾರ್ ಪ್ರತಿ, ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ, ಅರ್ಜಿದಾರರ ಬ್ಯಾಂಕ್/ಅಂಚೆ ಖಾತೆ ಪಾಸ್ ಬುಕ್, ಅರ್ಜಿದಾರರ ಸ್ವಯಂ ಘೋಷಣಾ ಪತ್ರ (ನಮೂನೆ-2), ಕುಟುಂಬ ಸದಸ್ಯರ ನಿರಾಕ್ಷೇಪಣ ಪತ್ರ (ನಮೂನೆ-3) ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬಂಧಿಸಿದ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅರ್ಹತೆ
ಪರಿಹಾರ ಪಾವತಿಗೆ ಪರಿಗಣಿಸುವ ಎಲ್ಲ ಮೃತ ವ್ಯಕ್ತಿಗಳು ಕೋವಿಡ್-19 ಕಾರಣಗಳಿಂದಾಗಿ ಮೃತಪಟ್ಟಿರಬೇಕು. ಈ ಕುರಿತು ಅಧಿಕೃತ ಮರಣ ಪ್ರಮಾಣಪತ್ರವಿರಬೇಕು. ರಾಜ್ಯ ಸರಕಾರವು ಘೋಷಿಸಿರುವ 1 ಲ.ರೂ. ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್. ಕುಟುಂಬದ ದುಡಿಯುವ ಸದಸ್ಯರಾಗಿರಬೇಕು. ಅರ್ಜಿದಾರರೂ ಸಹ ಅದೇ ಬಿ.ಪಿ.ಎಲ್. ಕುಟುಂಬದ ಸದಸ್ಯರಾಗಿರಬೇಕು. ಸೋಂಕಿನಿಂದ ಮೃತಪಟ್ಟಿರುವ ಕುರಿತು ವೈದ್ಯಕೀಯ ಪ್ರಮಾಣ ಪತ್ರ ಲಭ್ಯವಿಲ್ಲದಿದ್ದಲ್ಲಿ ಕೋವಿಡ್-19 ಮರಣ ದೃಢೀಕರಣ ಸಮಿತಿ ನೀಡುವ ನಿಗದಿತ ಮರಣ ಪ್ರಮಾಣ ಪತ್ರವನ್ನು ಪರಿಗಣಿಸುವುದು. ರಾಜ್ಯ ಸರಕಾರದಿಂದ ನೀಡಲಾಗುವ 1 ಲ.ರೂ. ಮರಣ ಪರಿಹಾರ ಧನ ಪಡೆಯಲು ಅರ್ಹವಾಗುವ ಬಿಪಿಎಲ್ ಕುಟುಂಬದ ಮೃತ ವ್ಯಕ್ತಿಯ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.